ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣಕ್ಕೆ (National Herald Case) ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ (Sonia Gandhi), ರಾಹುಲ್ ಗಾಂಧಿಗೆ (Rahul Gandhi) ದೆಹಲಿ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ತನಿಖೆ ಮತ್ತು ಒಂದು ದಶಕದ ಹಿಂದಿನ ಕಾನೂನು ವಿವಾದದ ನಂತರ ಇಬ್ಬರಿಗೂ ಔಪಚಾರಿಕ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಪಾಕಿಸ್ತಾನದ ಭಯೋತ್ಪಾದಕ ಸಂಪರ್ಕಗಳು ರಹಸ್ಯವೇನಲ್ಲ: ಬಿಲಾವಲ್ ಭುಟ್ಟೋ
ಯಾವುದೇ ಹಂತದಲ್ಲಿ ವಿಚಾರಣೆ ನಡೆಸುವ ಹಕ್ಕು ನ್ಯಾಯಯುತ ವಿಚಾರಣೆಗೆ ಜೀವ ತುಂಬುತ್ತದೆ ಎಂದು ನ್ಯಾಯಾಧೀಶರಾದ ವಿಶಾಲ್ ಗೋಗ್ನೆ ತಿಳಿಸಿದ್ದಾರೆ. ಮುಂದಿನ ವಿಚಾರಣೆಯನ್ನು ಮೇ 8ಕ್ಕೆ ನಿಗದಿಪಡಿಸಿದ್ದಾರೆ.
ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು 2014 ರ ಜೂನ್‌ನಲ್ಲಿ ಸಲ್ಲಿಸಿದ ಖಾಸಗಿ ಕ್ರಿಮಿನಲ್ ದೂರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕೈಗೆತ್ತಿಕೊಂಡ ನಂತರ 2021 ರಲ್ಲಿ ಜಾರಿ ನಿರ್ದೇಶನಾಲಯದ ತನಿಖೆ ಔಪಚಾರಿಕವಾಗಿ ಪ್ರಾರಂಭವಾಯಿತು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಉನ್ನತ ನಾಯಕತ್ವವನ್ನು ಒಳಗೊಂಡ ಕ್ರಿಮಿನಲ್ ಪಿತೂರಿ ಮತ್ತು ಆರ್ಥಿಕ ದುರುಪಯೋಗದ ಬಗ್ಗೆ ದೂರಿನಲ್ಲಿ ಆರೋಪಿಸಲಾಗಿದೆ. ಇದನ್ನೂ ಓದಿ: ಭಾರತದ ಮೊದಲ ಟ್ರಾನ್ಸ್‌ಶಿಪ್‌ಮೆಂಟ್ ಹಬ್‌ಗೆ ಪ್ರಧಾನಿ ಮೋದಿ ಚಾಲನೆ