ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಿಂದಲೇ ಇಂದು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೊರ ಬರುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಇಂದು ಪಕ್ಷದ ಅಧ್ಯಕ್ಷರ ಆಯ್ಕೆಯ ಸಂಬಂಧ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಕರೆಯಲಾಗಿತ್ತು. ಸಭೆಯಿಂದ ಹೊರಬಂದು ಮಾಧ್ಯಮಗಳ ಜೊತೆ ಮಾತನಾಡಿದ ಸೋನಿಯಾ ಗಾಂಧಿ, ನಾವು (ಸೋನಿಯಾ ಮತ್ತು ರಾಹುಲ್) ಹೊಸ ಅಧ್ಯಕ್ಷರ ಆಯ್ಕೆಯ ಸಮ್ಮತಿ ಸೂಚಿಸುವ ಸಭೆಯ ಪ್ರಕ್ರಿಯೆಯ ಭಾಗಿಯಾಗಲ್ಲ. ಹಾಗಾಗಿ ಸಭೆಯಿಂದ ಹೊರಬಂದಿದ್ದೇವೆ ಎಂದು ತಿಳಿಸಿದರು.
Advertisement
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹೊರಬಂದಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕ ಗಾಂಧಿ ಸಭೆಯಲ್ಲಿ ಉಪಸ್ಥಿತರಿದ್ದಾರೆ. ಸಂಜೆ ನಾಲ್ಕು ಗಂಟೆಗೆ ಸಭೆಯನ್ನು ಮುಂದೂಡಲಾಗಿದೆ. ಇಂದು ಸಂಜೆ ಕಾಂಗ್ರೆಸ್ ಅಧ್ಯಕ್ಷರ ಹೆಸರು ಹೊರ ಬೀಳುವ ಸಾಧ್ಯತೆಗಳಿವೆ. ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಕುಲ ವಾಸ್ನಿಕ್ ಹೆಸರುಗಳು ಅಧ್ಯಕ್ಷರ ಪಟ್ಟಿಯಲ್ಲಿ ಮುಂಚೂಣಿಯಲ್ಲಿವೆ.
Advertisement
Sonia Gandhi on leaving from Congress Working Committee meeting: Now consultation(to decide next party chief) is going on and naturally me and Rahul ji cannot be a part of it pic.twitter.com/OcMoztJtuQ
— ANI (@ANI) August 10, 2019