ಬೆಂಗಳೂರು: ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಅವರ ಹೆಸರನ್ನು ಹೇಳಿಕೊಂಡು 3-4 ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ. ಈಗ ನಮಗೆ ಅದರ ಋಣ ತೀರಿಸುವ ಸಮಯ ಬಂದಿದೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆಗೆ ಸಮನ್ಸ್ ನೀಡಿದ್ದನ್ನು ಖಂಡಿಸಿ ಕಾಂಗ್ರೆಸ್ ನಡೆಸುತ್ತಿರುವ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಈ ದೇಶ ಉಳಿಯಬೇಕು ಎಂದರೆ ಕಾಂಗ್ರೆಸ್ ಉಳಿಯಬೇಕು. ಎಲ್ಲಾ ಸಣ್ಣ ವಿಚಾರವನ್ನು ಬದಿಗೊತ್ತೋಣ. ಸೋನಿಯಾ ಗಾಂಧಿಗೆ ನೈತಿಕವಾಗಿ ಸಮಾಧಾನವಾಗಬೇಕು. ಆಗ ಮಾತ್ರ ನಾವು ತಿನ್ನುವ 2 ಹೊತ್ತಿನ ಊಟ ಸಾರ್ಥಕ ಆಗುತ್ತದೆ. ನೆಹರು, ಇಂದಿರಾ, ಸೋನಿಯಾ ಹೆಸರಲ್ಲಿ 3-4 ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ. ಈ ಹಿನ್ನೆಲೆಯಲ್ಲಿ ಈ ಕಿಂಚಿತ್ತು ತ್ಯಾಗಕ್ಕೂ ನಾವು ತಯಾರಾಗದೇ ಹೋದರೆ ನಾವು ತಿನ್ನುವ ಅನ್ನಕ್ಕೆ ಹುಳ ಬೀಳುತ್ತದೆ ಎಂದರು.
Advertisement
Advertisement
ಸೋನಿಯಾ ಗಾಂಧಿಗೆ ಇಡಿ ಸಮನ್ಸ್ ನೀಡಿದೆ. ಕಾಂಗ್ರೆಸ್ ಇಡೀ ದೇಶಾದ್ಯಂತ ಪ್ರತಿಭಟನೆ ಮಾಡುತ್ತಿದೆ. ಆದರೆ ಸೋನಿಯಾ ಗಾಂಧಿ ಕಾನೂನಿಗಿಂತ ದೊಡ್ಡವರಾ ಎಂದು ಕೆಲವರು ಪ್ರಶ್ನೆ ಎತ್ತುತ್ತಿದ್ದಾರೆ. ಇದಕ್ಕೆ ಮೊದಲು ಉತ್ತರಿಸುತ್ತೇನೆ ಎಂದ ಅವರು, ನಿಮ್ಮ ಪೂರ್ವಿಕರು ಆರ್‌ಎಸ್‍ಎಸ್‍ನವರು, ಹಿಂದೂ ಮಹಾಸಭಾದವ್ರು, ಜನಸಂಘದವ್ರು ಸ್ವಾತಂತ್ರ್ಯ ಹೋರಾಟದಲ್ಲಿ ಜೈಲಿಗೆ ಹೋಗಿದ್ದರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಯುಪಿ ಸರ್ಕಾರಕ್ಕೆ 600 ಕೋಟಿ ಆಸ್ತಿ ದಾನ ಮಾಡಿದ ವೈದ್ಯ
Advertisement
Advertisement
ಇಂದಿರಾಗಾಂಧಿ ಬಗ್ಗೆ ಮಾತಾಡುತ್ತಿದ್ದಾಗ ಗುಸುಗುಸು ಅನ್ನುತ್ತಿದ್ದ ಮುಖಂಡರನ್ನು ಗಮನಿಸಿ ಭಾಷಣ ಮಾಡುತ್ತಿರುವಾಗಲೇ ರಮೇಶ್ ಕುಮಾರ್ ಹೋಗ್ರಿ ಆ ಕಡೆ ಎಂದು ರೇಗಾಡಿದ್ದಾರೆ. ನೀವು ಮಾತಾಡೋದಾದರೆ ನಮ್ಮನ್ನೆಕೆ ಕರೆಯುತ್ತೀರಿ ಅವಿವೇಕಿಗಳು ಎಂದು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ವೀರೇಂದ್ರ ಹೆಗ್ಗಡೆ