ಕಾಂಗ್ರೆಸ್ ಸಂಸದೀಯ ನಾಯಕಿಯಾಗಿ ಸೋನಿಯಾ ಗಾಂಧಿ ಆಯ್ಕೆ

Public TV
1 Min Read
SONIYA GANDHI

ನವದೆಹಲಿ: ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕಿಯಾಗಿ ಸೋನಿಯಾ ಗಾಂಧಿರನ್ನ ಆಯ್ಕೆ ಮಾಡಲಾಗಿದ್ದು, ಈ ಕುರಿತು ಕಾಂಗ್ರೆಸ್ ಪಕ್ಷದ ಮುಖಂಡ ಸರ್ಜೇವಾಲಾ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಇಂದು ಬೆಳಗ್ಗೆ ನಡೆದ ಪಕ್ಷದ ಸಭೆಯಲ್ಲಿ ಸೋನಿಯಾ ಗಾಂಧಿ ಅವರ ಆಯ್ಕೆ ಆಗಿದ್ದು, ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರು ಸಭೆಯಲ್ಲಿ ಸೋನಿಯಾರ ಹೆಸರನ್ನು ಪ್ರಸ್ತಾಪ ಮಾಡಿದ್ದು, ಎಲ್ಲಾ ನಾಯಕರು ಒಮ್ಮತದಿಂದ ಅಂಗೀಕರಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಲೋಕಸಭಾ ಸಭೆಯಲ್ಲಿ ಕಾಂಗ್ರೆಸ್ ಅಧಿಕೃತ ವಿರೋಧ ಪಕ್ಷದ ಸ್ಥಾನ ಪಡೆಯಲು ಇನ್ನು 3 ಸ್ಥಾನಗಳ ಅಗತ್ಯ ಇರುವುದರಿಂದ ಕಳೆದ ಬಾರಿಯಂತೆಯೇ ಈ ಬಾರಿಯೂ ಸಂಸದರೀಯ ನಾಯಕರನ್ನು ಆಯ್ಕೆ ಮಾಡಲಾಗಿದೆ. 2014ರ ಲೋಕಸಭಾ ಚುನಾವಣೆಯ ಬಳಿಕ ಸಂಸತ್ ಸಂಸದೀಯ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆ ಆಗಿದ್ದರು. 2014 ರಲ್ಲಿ 44 ಇದ್ದ ಕಾಂಗ್ರೆಸ್ ಸಂಸದರ ಸಂಖ್ಯೆ ಈ ಬಾರಿ 52 ಏರಿಕೆ ಆಗಿದೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಬಳಿಕ ಎಐಸಿಸಿ ಅಧಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಸ್ತಾಪವನ್ನು ಮುಂದಿಟ್ಟಿದ್ದ ರಾಹುಲ್ ಗಾಂಧಿ ಅವರ ಮನವೊಲಿಸಲು  ಪಕ್ಷದ ನಾಯಕರು ವಿಫಲರಾಗಿದ್ದಾರೆ ಎನ್ನಲಾಗಿದೆ. ಚುನಾವಣಾ ಫಲಿತಾಂಶದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಸಂಸದರ ಸಭೆ ನಡೆಸಿದ್ದ ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತವನ್ನು ವ್ಯಕ್ತಪಡಿಸಿದ್ದರು. ಆದರೆ ಕಾಂಗ್ರೆಸ್ ನಾಯಕರು ಈ ಪ್ರಸ್ತಾವನೆಯನ್ನು ತಿರಸ್ಕರಿಸಿ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿಯೇ ಪಕ್ಷದ ಬಲವರ್ಧನೆ ನಡೆಯಬೇಕು ಎಂದಿದ್ದರು. ಆ ಬಳಿಕ ರಾಹುಲ್ ನಿವಾಸ ಎದುರು ಕೂಡ ಪಕ್ಷದ ಕಾರ್ಯಕರ್ತರು ಧರಣಿ ನಡೆಸಿ ರಾಹುಲ್ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಕೋರಿದ್ದರು.

Share This Article
Leave a Comment

Leave a Reply

Your email address will not be published. Required fields are marked *