ನವದೆಹಲಿ: ಕೋವಿಡ್ ಸಂಬಂಧಿತ ಸಮಸ್ಯೆಗಳಿಂದಾಗಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಇಂದು ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲಾ ಟ್ವೀಟ್ ಮಾಡಿದ್ದು, ಸೋನಿಯಾ ಗಾಂಧಿ ಅವರು ಇಂದು ಕೋವಿಡ್ ಸಂಬಂಧಿತ ಸಮಸ್ಯೆಗಳಿಂದಾಗಿ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರು ನಿಗಾ ವಹಿಸಿದ್ದಾರೆ. ಸೋನಿಯಾ ಅವರ ಬಗ್ಗೆ ಕಾಳಜಿ ಮತ್ತು ಗುಣಮುಖರಾಗಲಿ ಎಂದು ಹಾರೈಸಿದ ನಮ್ಮ ಎಲ್ಲ ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಎಲ್ಲ ಹಿತೈಷಿಗಳಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ
Advertisement
Congress interim president Sonia Gandhi admitted to Ganga Ram Hospital today owing to Covid-related issues. She is stable and will be kept at the hospital for observation, says Congress leader Randeep Singh Surjewala pic.twitter.com/AkDP5ncMg8
— ANI (@ANI) June 12, 2022
Advertisement
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು(ಇಡಿ) ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಸಮನ್ಸ್ ಜಾರಿಗೊಳಿಸಿದ್ದು, ಜೂನ್ 8ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು. ಆದರೆ ಸೋನಿಯಾ ಗಾಂಧಿ ಅವರಿಗೆ ಜೂನ್ 2 ರಂದು ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ವಿಚಾರಣೆಗೆ ಹಾಜರಾಗಲು ಇಡಿಗೆ ಹೆಚ್ಚಿನ ಸಮಯ ಕೋರಿದ್ದರು.
Advertisement
ಈ ಹಿನ್ನೆಲೆ ಜೂನ್ 23 ರಂದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಅಧ್ಯಕ್ಷರಿಗೆ ಹೊಸ ಸಮನ್ಸ್ ನೀಡಿದ್ದೇವೆ ಎಂದು ಇಡಿ ತಿಳಿಸಿತ್ತು.