ಜೈಪುರ: ಕಾಂಗ್ರೆಸ್ನ (Congress) ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಮುಂಬರುವ ರಾಜ್ಯಸಭಾ ಚುನಾವಣೆಗೆ ರಾಜಸ್ಥಾನದಿಂದ ಬುಧವಾರ ನಾಮಪತ್ರ ಸಲ್ಲಿಸಿದರು. ದೆಹಲಿಯಿಂದ ಹೊರಟ ಅವರು ನೇರವಾಗಿ ಜೈಪುರದಲ್ಲಿರುವ ವಿಧಾನಸಭೆಗೆ ತೆರಳಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳಿಸಿದರು. ಈ ವೇಳೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಕೂಡ ಉಪಸ್ಥಿತರಿದ್ದರು.
ಐದು ಅವಧಿಗೆ ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಲೋಕಸಭೆ ಸಂಸದರಾಗಿ ಸೇವೆ ಸಲ್ಲಿಸಿದ ಸೋನಿಯಾ ಗಾಂಧಿ ಅವರು ಮೊದಲ ಬಾರಿಗೆ ರಾಜ್ಯಸಭೆಗೆ ಸ್ಪರ್ಧಿಸುತ್ತಿದ್ದಾರೆ. 2019 ರಲ್ಲೇ ಅವರು ಇದು ಅವರ ಕೊನೆಯ ಲೋಕಸಭೆ ಚುನಾವಣೆ ಎಂದು ಘೋಷಿಸಿದ್ದರು. ಇದನ್ನೂ ಓದಿ: ರಾಜಸ್ಥಾನದಿಂದ ಸೋನಿಯಾ ಗಾಂಧಿ ರಾಜ್ಯಸಭೆಗೆ ಸ್ಪರ್ಧೆ
Advertisement
Advertisement
ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ 1999 ರಲ್ಲಿ ಮೊದಲ ಬಾರಿಗೆ ಅವರು ಲೋಕಸಭೆಗೆ ಆಯ್ಕೆಯಾದರು. ರಾಜ್ಯಸಭೆಗೆ ಆಯ್ಕೆಯಾಗುತ್ತಿರುವ ಗಾಂಧಿ ಕುಟುಂಬದ ಎರಡನೇ ಸದಸ್ಯೆ ಸೋನಿಯಾ ಗಾಂಧಿಯಾಗಿದ್ದಾರೆ. ಇದಕ್ಕೂ ಮೊದಲು ಆಗಸ್ಟ್ 1964 ರಿಂದ ಫೆಬ್ರವರಿ 1967 ರವರೆಗೆ ಇಂದಿರಾ ಗಾಂಧಿ ರಾಜ್ಯಸಭೆಯಲ್ಲಿದ್ದರು.
Advertisement
ತೆಲಂಗಾಣ, ಕರ್ನಾಟಕದಿಂದ ಸ್ಪರ್ಧೆ ಮಾಡುವಂತೆ ಸೋನಿಯಾ ಗಾಂಧಿ ಅವರಿಗೆ ರಾಜ್ಯ ನಾಯಕರು ಮನವಿ ಮಾಡಿದ್ದರು. ಆದರೆ ಈಗಾಗಲೇ ರಾಹುಲ್ ಗಾಂಧಿ ಕೇರಳದ ವಯನಾಡ್ನಿಂದ ಸಂಸದರಾಗಿರುವ ಹಿನ್ನೆಲೆ ಉತ್ತರ ಭಾರತವನ್ನು ಪ್ರತಿನಿಧಿಸುವ ದೃಷ್ಠಿಯಿಂದ ಸೋನಿಯಾ ಗಾಂಧಿ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಲು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಇದನ್ನೂ ಓದಿ: Rajya Sabha Election: ಬುಧವಾರ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಕೆ?
Advertisement
ಸೋನಿಯಾ ಗಾಂಧಿ ರಾಜ್ಯಸಭೆ ಆಯ್ಕೆಯಿಂದಾಗಿ ಅವರು ಪ್ರತಿನಿಧಿಸುವ ರಾಯ್ ಬರೇಲಿಯಿಂದ ಪುತ್ರಿ ಪ್ರಿಯಾಂಕಾ ಗಾಂಧಿ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎನ್ನಲಾಗುತ್ತಿದೆ. ಇದಕ್ಕೂ ಮುನ್ನ ರಾಹುಲ್ ಗಾಂಧಿ ಈ ಹಿಂದೆ ಪ್ರತಿನಿಧಿಸುತ್ತಿದ್ದ ಅಮೇಥಿಯಿಂದಲೂ ಪ್ರಿಯಾಂಕಾ ಸ್ಪರ್ಧಿಸಬಹುದು ಎನ್ನಲಾಗುತ್ತಿತ್ತು. ಸದ್ಯ ಈ ಕ್ಷೇತ್ರವನ್ನು ಸ್ಮೃತಿ ಇರಾನಿ ಪ್ರತಿನಿಧಿಸುತ್ತಿದ್ದು, ಪ್ರಿಯಾಂಕಾ ಸೂಕ್ತ ಪ್ರತಿಸ್ಪರ್ಧಿ ಎನ್ನಲಾಗಿತ್ತು. ಆದರೆ ಪ್ರಿಯಾಂಕಾ ಸ್ಪರ್ಧೆ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಂಡಿಲ್ಲ.
ಸೋನಿಯಾ ಗಾಂಧಿ ಸ್ಪರ್ಧೆ ಬಗ್ಗೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಸೋನಿಯಾ ಗಾಂಧಿ ಅವರು ರಾಜಸ್ಥಾನವನ್ನು ತಮ್ಮ ರಾಜ್ಯಸಭಾ ಕ್ಷೇತ್ರವನ್ನಾಗಿ ಆಯ್ಕೆ ಮಾಡುವುದರಿಂದ ಪಕ್ಷದ ಕಾರ್ಯಕರ್ತರು ಮತ್ತು ಜನರಿಗೆ ಸಕಾರಾತ್ಮಕ ಸಂದೇಶವನ್ನು ರವಾನಿಸುತ್ತದೆ ಎಂದು ಹೇಳಿದರು. ಅವರು ಯಾವುದೇ ರಾಜ್ಯಕ್ಕೆ ಹೋಗಿ ರಾಜ್ಯಸಭಾ ಸದಸ್ಯೆಯಾಗಬಹುದಿತ್ತು. ಆದರೆ ಅವರು ರಾಜಸ್ಥಾನವನ್ನು ಆರಿಸಿದ್ದರೆ, ಇದು ಸೋನಿಯಾ ಗಾಂಧಿಯವರ ಆಯ್ಕೆಯಾಗಿದೆ. ಇದಕ್ಕಾಗಿ ನಾವೆಲ್ಲರೂ ಎಷ್ಟು ಹೆಮ್ಮೆಪಡುತ್ತೇವೆ ಎಂದು ನೀವು ಊಹಿಸಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: Loksabha Election: ರೈತರ ಪ್ರತಿಭಟನೆ ಬೆನ್ನಲ್ಲೇ ಮೊದಲ ಗ್ಯಾರಂಟಿ ಘೋಷಿಸಿದ ಖರ್ಗೆ