ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಅಯೋಧ್ಯೆ ರಾಮ ಮಂದಿರ (Ayodhya Ram Mandir) ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೋ ಇಲ್ಲವೋ ಎನ್ನುವುದನ್ನು ಸರಿಯಾದ ಸಮಯದಲ್ಲಿ ಬಹಿರಂಗಪಡಿಸಲಾಗುತ್ತದೆ ಎಂದು ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ (Jairam Ramesh) ಹೇಳಿದ್ದಾರೆ.
ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಆಹ್ವಾನ ಬಂದಿದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಆ ’84 ಸೆಕೆಂಡ್’ ನಡುವೆಯೇ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಯಾಕೆ?
Advertisement
Advertisement
ಗುರುವಾರ, ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಅಯೋಧ್ಯೆಯಲ್ಲಿ ಭಗವಾನ್ ರಾಮನ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದು ವೈಯಕ್ತಿಕ ಆಯ್ಕೆಯಾಗಿದೆ ಎಂದು ಹೇಳಿದ್ದರು.
Advertisement
ಅಯೋಧ್ಯೆಯಲ್ಲಿ ಜನವರಿ 16 ರಿಂದ ಧಾರ್ಮಿಕ ಕಾರ್ಯಗಳು ಆರಂಭವಾಗಲಿದ್ದು ಜ.22 ರಂದು ರಾಮನ ಪ್ರಾಣಪ್ರತಿಷ್ಠೆ ನಡೆಯಲಿದೆ. ರಾಮ ಮಂದಿರ ಟ್ರಸ್ಟ್ ಅಥವಾ ಸರ್ಕಾರ ಯಾರಿಗೆ ಅಧಿಕೃತ ಆಹ್ವಾನ ನೀಡಿದೆಯೋ ಅವರಿಗೆ ಮಾತ್ರ ಜ.22ರಂದು ಅಯೋಧ್ಯೆಗೆ ಅನುಮತಿ ನೀಡಲಾಗುತ್ತದೆ. ಇದನ್ನೂ ಓದಿ: ರಾಮ ವಿಗ್ರಹ ಇಂದು ಆಯ್ಕೆ: ಕರ್ನಾಟಕದ ಕಲಾವಿದರ ಕೈಚಳಕ ಗೆಲ್ಲುತ್ತಾ ಮನ..?
Advertisement
ಪ್ರಧಾನಿ ನರೇಂದ್ರ ಮೋದಿ (PM Narendra Modi), ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಸೇರಿದಂತೆ ಒಟ್ಟು 6 ಸಾವಿರ ಗಣ್ಯರು ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.