Saturday, 18th January 2020

Recent News

ಊರ್ಮಿಳಾ ರಾಜೀನಾಮೆ ಬೆನ್ನಲ್ಲೇ ಸೋನಿಯಾರಿಂದ ರಾಜ್ಯ ನಾಯಕರ ಭೇಟಿ

ನವದೆಹಲಿ: ಕಾಂಗ್ರೆಸ್ ಪಕ್ಷದ ನಾಯಕಿಯಾಗಿದ್ದ ನಟಿ ಊರ್ಮಿಳಾ ಮಾತೋಂಡ್ಕರ್ ರಾಜೀನಾಮೆ ನೀಡಿದ ಬೆನ್ನಲ್ಲೇ ಇಂದು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ಮುಂಬೈ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರನ್ನು ತಮ್ಮ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸೇರ್ಪಡೆಯಾಗಿದ್ದ ಊರ್ಮಿಳಾ ಅವರು ಕಡಿಮೆ ಅವಧಿಯಲ್ಲೇ ರಾಜೀನಾಮೆ ನೀಡಿ ಹೊರ ಬಂದಿದ್ದರು. ಈ ವೇಳೆ ಮಾತನಾಡಿದ್ದ ಅವರು, ಕಾಂಗ್ರೆಸ್ ಪಕ್ಷದ ಆಂತರಿಕ ರಾಜಕೀಯದಿಂದ ಬೇಸತ್ತು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದರು.  ಅಂದಹಾಗೇ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಸೋಲುಂಡಿದ್ದರು.

ಇದರ ನಡುವೆಯೇ ಮತ್ತೊಬ್ಬ ಕಾಂಗ್ರೆಸ್ ನಾಯಕರಾದ ಕೃಪಾ ಶಂಕರ್ ಸಿಂಗ್ ಅವರು ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದಾರೆ. ಆರ್ಟಿಕಲ್ 370 ನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ ನೀತಿಯನು ಪಕ್ಷ ವಿರೋಧ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸೋನಿಯಾ ಅವರು ಪಕ್ಷದ ನಾಯಕರನ್ನು ಭೇಟಿ ಮಾಡಿದ್ದಾರೆ. ವಿಧಾನಸಭೆಯ ಚುನಾವಣೆಗೆ 2 ತಿಂಗಳು ಸಮಯವಷ್ಟೇ ಇರುವ ಸಂದರ್ಭದಲ್ಲಿ ಪಕ್ಷದಲ್ಲಿ ನಾಯಕರು ರಾಜೀನಾಮೆ ನೀಡುತ್ತಿರುವುದು ಹೈಕಮಾಂಡ್ ಮೇಲೆ ಒತ್ತಡವನ್ನು ಹೆಚ್ಚಿಸಿದೆ. ನಾಯಕರ ಭೇಟಿ ಸಂದರ್ಭದಲ್ಲಿ ಮುಂಬರುವ ಚುನಾವಣೆಯಲ್ಲಿ ಇತರೇ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆಯೂ ಇದೇ ವೇಳೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಇತ್ತ ಊರ್ಮಿಳಾ ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಮುಂಬೈ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಕಿಡಿಕಾರಿದ್ದ ಮುಂಬೈ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ಮಿಲಿಂದ್ ದೇವ್ರಾ, ಊರ್ಮಿಳಾ ರಾಜೀನಾಮೆ ಪಕ್ಷದ ನಾಯಕರೇ ಕಾರಣ ಎಂದು ಆರೋಪಿಸಿದ್ದರು.

Leave a Reply

Your email address will not be published. Required fields are marked *