ನವದೆಹಲಿ: ಕಾಂಗ್ರೆಸ್‍ನ ಹಂಗಾಮಿ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಅವರು ಆಯ್ಕೆಯಾಗಿದ್ದಾರೆ.
ದೆಹಲಿ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಶನಿವಾರ ರಾತ್ರಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈ ಮೂಲಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ಖಾಲಿ ಉಳಿದಿದ್ದ ಅಧ್ಯಕ್ಷ ಸ್ಥಾನವನ್ನು ತಾಯಿ ಸೋನಿಯಾ ಗಾಂಧಿ ಅವರು ತುಂಬಿದ್ದಾರೆ.
Advertisement
ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು, ಸೋನಿಯಾ ಗಾಂಧಿ ಅವರನ್ನು ಕಾಂಗ್ರೆಸ್‍ನ ಹಂಗಾಮಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
Advertisement
Advertisement
ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಗುಲಾಂ ನಬಿ ಆಜಾದ್, ಎ.ಕೆ.ಆ್ಯಂಟನಿ, ಅಹ್ಮದ್ ಪಟೇಲ್, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಅನೇಕ ನಾಯಕರು ಭಾಗವಹಿಸಿದ್ದರು. ಸಭೆಯ ಅಧ್ಯಕ್ಷತೆಯನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಹಿಸಿಕೊಂಡಿದ್ದರು ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
Advertisement
ಕಾಂಗ್ರೆಸ್ ಅಧ್ಯಕ್ಷರ ಪಟ್ಟಿಯ ರೇಸ್‍ನಲ್ಲಿ ಮುಕುಲ್ ವಾಸ್ನಿಕ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸುಶೀಲ್ ಕುಮಾರ್ ಶಿಂಧೆ, ಜ್ಯೋತಿರಾದಿತ್ಯ ಸಿಂಧಿಯಾ, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಕೆಲವು ನಾಯಕರಿದ್ದರು. ಈ ಮೂಲಕ 20 ದಶಕಗಳ ಬಳಿಕ ಗಾಂಧಿಯೇತರ ನಾಯಕರೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗುತ್ತಾರೆ ಎಂಬ ಮಾತು ಕೇಳಿ ಬಂದಿತ್ತು. ಆದರೆ ಅಂತಿಮವಾಗಿ ಕಾಂಗ್ರೆಸ್ ಅಧ್ಯಕ್ಷ ಪಟ್ಟ ಗಾಂಧಿ ಕುಟುಂಬ ಕೈ ಸೇರಿದೆ.