ನವದೆಹಲಿ: ಹಿರಿಯ ಕಾಂಗ್ರೆಸ್ (Congress) ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರು ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ.
ಸದ್ಯ ಅವರು ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಸಂಸದರಾಗಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎನ್ನಲಾಗಿತ್ತು. ಅದು ಬಹುತೇಕ ಖಚಿತಗೊಂಡಿದ್ದು, ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಬಹುದು ಎಂದು ಉನ್ನತ ಮೂಲಗಳು ಹೇಳಿವೆ. ಇದನ್ನೂ ಓದಿ: ಸ್ಟಾಲಿನ್ ಸರ್ಕಾರದ ವಿರುದ್ಧ ರಾಜ್ಯಪಾಲ ಗರಂ
Advertisement
Advertisement
ಬಿಹಾರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯಸಭಾ ಸಂಸದ ಅಖಿಲೇಶ್ ಪ್ರಸಾದ್ ಸಿಂಗ್ ನಾಮನಿರ್ದೇಶನಗೊಳ್ಳಬಹುದು. ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಕಣಕ್ಕಿಳಿಯುವ ನಾಯಕರ ಪಟ್ಟಿಯಲ್ಲಿ ಅಭಿಷೇಕ್ ಮನು ಸಿಂಘ್ವಿ ಮತ್ತು ಅಜಯ್ ಮಾಕೆನ್ ಸೇರಿದ್ದಾರೆ.
Advertisement
ಅಭಿಷೇಕ್ ಮನು ಸಿಂಘ್ವಿ ಅವರ ಹೆಸರು ಕರ್ನಾಟಕದಿಂದ ನಾಮನಿರ್ದೇಶಗೊಳ್ಳಬಹುದು ಎನ್ನಲಾಗುತ್ತಿದೆ. ಈ ಮೊದಲು ಮಧ್ಯಪ್ರದೇಶ ಕಾಂಗ್ರೆಸ್ ಘಟಕವು ರಾಜ್ಯಸಭೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುವಂತೆ ಸೋನಿಯಾ ಗಾಂಧಿ ಅವರಿಗೆ ಮನವಿ ಮಾಡಿತ್ತು. ಇದನ್ನೂ ಓದಿ: ಕಾಂಗ್ರೆಸ್‌ಗೆ ಮಾಜಿ ಸಿಎಂ ಅಶೋಕ್ ಚವಾಣ್ ಗುಡ್ ಬೈ- ಲೋಕಸಭೆ ಹೊಸ್ತಿಲಲ್ಲಿ ಮಹಾರಾಷ್ಟ್ರದಲ್ಲಿ ಕೈಗೆ ಹಿನ್ನಡೆ
Advertisement
ಅದೇ ರೀತಿ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಕಳೆದ ವಾರ ಸೋನಿಯಾ ಗಾಂಧಿ ಅವರನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಖಮ್ಮಂ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯಿಸಿದ್ದರು. 15 ರಾಜ್ಯಗಳ 56 ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ ಫೆಬ್ರವರಿ 27 ರಂದು ನಡೆಯಲಿದೆ. ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನಾಂಕವಾಗಿದೆ.