ನವದೆಹಲಿ: ಜ್ವರ ಮತ್ತು ಸೋಂಕು ಹಿನ್ನೆಲೆ ಸರ್ ಗಂಗಾ ರಾಮ್ ಆಸ್ಪತ್ರೆಗೆ (Sir Ganga Ram Hospital) ದಾಖಲಾಗಿರುವ ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರ ಆರೋಗ್ಯ (Health) ಸ್ಥಿರವಾಗಿದ್ದು, ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುವುದು ಎಂದು ಆಸ್ಪತ್ರೆ ಅಧ್ಯಕ್ಷ ಡಾ. ಅಜಯ್ ಸ್ವರೂಪ್ ಹೇಳಿದ್ದಾರೆ.
ಮಾರ್ಚ್ 24ರ ರಾತ್ರಿ ಸೋನಿಯಾ ಗಾಂಧಿಯವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಸೋನಿಯಾ ಗಾಂಧಿಗೆ ಆ್ಯಂಟಿ ಬಯೋಟಿಕ್ ನೀಡಲಾಗುತ್ತಿದ್ದು, ಅವರು ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದು ಅಜಯ್ ತಿಳಿಸಿದ್ದಾರೆ. ಇದನ್ನೂ ಓದಿ: ಚಿನ್ನಸ್ವಾಮಿಯಲ್ಲಿ ಕನಿಷ್ಠ 4-5 ಟಿಕೆಟ್ ಕೊಡಿಸಿ – ಶಾಸಕರಿಂದ ಪಕ್ಷಾತೀತ ಬೇಡಿಕೆ
ಮುನ್ನೆಚ್ಚರಿಕೆ ಕ್ರಮವಾಗಿ ಸೋನಿಯಾ ಗಾಂಧಿಗೆ ಇನ್ನೂ ಒಂದೆರಡು ದಿನಗಳವರೆಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುವುದು. ಸದ್ಯ ಅವರ ಸ್ಥಿತಿ ಸ್ಥಿರವಾಗಿದ್ದು, ಯಾವುದೇ ಅಪಾಯವಿಲ್ಲ. ಹವಾಮಾನದಲ್ಲಿನ ಬದಲಾವಣೆಯಿಂದಾಗಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 1ನೇ ತರಗತಿ ಪ್ರವೇಶ | 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳ ವಿನಾಯಿತಿ

