ನವದೆಹಲಿ: ಪಂಚ ರಾಜ್ಯಗಳ ಸೋಲಿನ ಬಳಿಕ ಇದೀಗ ಕಾಂಗ್ರೆಸ್‍ನಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಪಂಜಾಬ್ ಕಾಂಗ್ರೆಸ್‍ನ ಅಧ್ಯಕ್ಷರಾದ ನವಜೋತ್ ಸಿಂಗ್ ಸಿಧು ಮತ್ತು ಇತರ ನಾಲ್ಕು ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರನ್ನು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ವಜಾಗೊಳಿಸಿದ್ದಾರೆ.
Advertisement
ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸೇರಿದಂತೆ ಮಣಿಪುರ, ಗೋವಾ, ಉತ್ತರಾಖಂಡ ಹಾಗೂ ಉತ್ತರ ಪ್ರದೇಶದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಮತ್ತೆ ಎಐಸಿಸಿ ಅಧ್ಯಕ್ಷರಾಗಬೇಕು- CWC ಸಭೆಯಲ್ಲಿ ಒತ್ತಡ
Advertisement
Advertisement
ಪಂಚ ರಾಜ್ಯಗಳ ಚುನಾವಣೆ ಸೋಲಿನ ಬಳಿಕ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಸೋನಿಯಾ ಗಾಂಧಿ ಹಾಗೂ ಗಾಂಧಿ ಪರಿವಾರದಿಂದಲೇ ಕಾಂಗ್ರೆಸ್ ಮುನ್ನಡೆಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಅಲ್ಲದೆ ಪಂಚ ರಾಜ್ಯಗಳ ಸೋಲಿನ ಹೊಣೆ ಯಾರು ಕೂಡ ಹೊತ್ತಿರಲಿಲ್ಲ. ಅಲ್ಲದೆ ಪಕ್ಷದಲ್ಲಿ ಯಾವುದೇ ಬದಲಾವಣೆ ಮಾಡದೆ ಹಾಲಿ ಅಧ್ಯಕ್ಷರಾದ ಸೋನಿಯಾ ಗಾಂಧಿ ನೇತೃತ್ವದಲ್ಲೇ ಮುನ್ನಡೆಯಲು ತೀರ್ಮಾನಿಸಲಾಗಿತ್ತು. ಆ ಬಳಿಕ ಇದೀಗ ಐದು ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರನ್ನು ಚುನಾವಣಾ ಸೋಲಿಗೆ ಹೊಣೆಯಾಗಿಸಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲು ಸೋನಿಯಾ ಗಾಂಧಿ ನಿರ್ಧರಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಪ್ರಧಾನಿಗಳ ವೀಡಿಯೋದಲ್ಲಿ ಪಿವಿಎನ್ ಮಿಸ್ಸಿಂಗ್ ಆಗಿದ್ದು ಹೇಗೆ – ಐಎನ್‌ಸಿಗೆ ಪ್ರಶ್ನೆ
Advertisement
Congress President, Smt. Sonia Gandhi has asked the PCC Presidents of Uttar Pradesh, Uttarakhand, Punjab, Goa & Manipur to put in their resignations in order to facilitate reorganisation of PCC’s.
— Randeep Singh Surjewala (@rssurjewala) March 15, 2022
ಪಂಜಾಬ್‍ನಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಹೀನಾಯವಾಗಿ ಸೋಲು ಅನುಭವಿಸಿತು. ಪಂಜಾಬ್‍ನಲ್ಲಿ ಕಾಂಗ್ರೆಸ್ 18 ಸ್ಥಾನ ಗೆದ್ದರೆ, ಉತ್ತರಾಖಂಡದಲ್ಲಿ 19, ಗೋವಾದಲ್ಲಿ 11, ಮಣಿಪುರದಲ್ಲಿ 5 ಮತ್ತು ಉತ್ತರ ಪ್ರದೇಶದಲ್ಲಿ ಕೇವಲ 2 ಸ್ಥಾನ ಗೆದ್ದುಕೊಂಡು ಕಾಂಗ್ರೆಸ್ ಮುಖಭಂಗ ಅನುಭವಿಸಿತ್ತು.