ನವದೆಹಲಿ: ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ಮುಂಬರುವ ರಾಜ್ಯಸಭಾ ಚುನಾವಣೆಗೆ (Rajya Sabha Election) ರಾಜಸ್ಥಾನದಿಂದ (Rajasthan) ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಐದು ಅವಧಿಗೆ ಲೋಕಸಭೆ ಸಂಸದೆಯಾಗಿ ಸೇವೆ ಸಲ್ಲಿಸಿದ ನಂತರ 77 ವರ್ಷದ ಸೋನಿಯಾ ಗಾಂಧಿ ಮೊದಲ ಬಾರಿಗೆ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇದನ್ನೂ ಓದಿ: ಭಾರತ ನಿಮ್ಮ ಬಗ್ಗೆ ಹೆಮ್ಮೆಪಡುತ್ತದೆ- ಅಬುಧಾಬಿಯಲ್ಲಿ ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ ಮೋದಿ
Advertisement
Advertisement
ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಅವರ ಪುತ್ರ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನಟಿ ಜಯಪ್ರದಾರನ್ನು ಕೂಡಲೇ ಬಂಧಿಸಿ: ಆಘಾತದಲ್ಲಿ ನಟಿ
Advertisement
ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಕಳೆದ ವಾರ ಸೋನಿಯಾ ಗಾಂಧಿ ಅವರನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಖಮ್ಮಂ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯಿಸಿದ್ದರು. 15 ರಾಜ್ಯಗಳ 56 ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ ಫೆಬ್ರವರಿ 27 ರಂದು ನಡೆಯಲಿದೆ. ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನಾಂಕವಾಗಿದೆ.
Advertisement
1999 ರಿಂದ ಸೋನಿಯಾ ಗಾಂಧಿ ಲೋಕಸಭೆ ಚುನಾವಣೆಯನ್ನು ಗೆಲ್ಲುತ್ತಾ ಬಂದಿದ್ದಾರೆ. 1999 ರಲ್ಲಿ ಉತ್ತರ ಪ್ರದೇಶದ ಅಮೇಠಿ ಮತ್ತು ಕರ್ನಾಟಕದ ಬಳ್ಳಾರಿಯಿಂದ ಸ್ಪರ್ಧಿಸಿ ಗೆದ್ದಿದ್ದ ಅವರು 2004ರ ಚುನಾವಣೆಯಿಂದ 2019ರ ಚುನಾವಣೆಯವರೆಗೂ ಉತ್ತರ ಪ್ರದೇಶದ ರಾಯ್‌ಬರೇಲಿಯಿಂದ ಸತತವಾಗಿ ಆಯ್ಕೆ ಆಗಿದ್ದರು. ಅನಾರೋಗ್ಯ ಕಾರಣದಿಂದ 2024ರ ಲೋಕಸಭಾ ಚುನಾವಣೆಗೆ ಸೋನಿಯಾ ಗಾಂಧಿ ಸ್ಪರ್ಧಿಸುತ್ತಿಲ್ಲ ಎಂಬ ಮಾತು ರಾಜಕೀಯ ವಲಯದಲ್ಲಿ ಹರಿದಾಡಿತ್ತು.