ನವದೆಹಲಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ನಾಳೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.
ದೇಶದಲ್ಲಿ ಮಹಿಳೆಯರ ಮೇಲಿನ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ಹುಟ್ಟುಹಬ್ಬ ಆಚರಿಸದಿರಲು ಸೋನಿಯಾ ಗಾಂಧಿ ತೀರ್ಮಾನಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಡಿಸೆಂಬರ್ 9ರಂದು ಸೋನಿಯಾ ಗಾಂಧಿಯವರು 73ನೇ ವಸಂತಕ್ಕೆ ಕಾಲಿಡಲಿದ್ದು, ಅಭಿಮಾನಿಗಳು ಮತ್ತು ಕಾರ್ಯಕರ್ತರಿಗೆ ಹುಟ್ಟುಹಬ್ಬ ಆಚರಣೆ ಮಾಡಬೇಡಿ ಎಂಬ ಸಂದೇಶವನ್ನು ರವಾನಿಸಿದ್ದಾರೆ ಎನ್ನಲಾಗುತ್ತಿದೆ.
Advertisement
ದಿಶಾ ಮತ್ತು ಉನ್ನಾವೋ ಪ್ರಕರಣಗಳಿಗೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈಗಾಗಲೇ ದಿಶಾ ಪ್ರಕರಣದ ಆರೋಪಿಗಳನ್ನು ಪೊಲೀಸರು ಎನ್‍ಕೌಂಟರ್ ನಲ್ಲಿ ಹೊಡೆದುರಳಿಸಿದ್ದಾರೆ. ಉನ್ನಾವೋ ಪ್ರಕರಣದ ಕಾಮುಕರಿಗೆ ಶಿಕ್ಷೆ ಆಗಬೇಕೆಂಬ ಕೂಗು ಕೇಳಿ ಬರುತ್ತಿದೆ.
Advertisement
Congress Interim President Sonia Gandhi will not celebrate her birthday tomorrow in wake of rising crime against women across the country. pic.twitter.com/8hIKBnRNft
— ANI (@ANI) December 8, 2019
Advertisement
ಶನಿವಾರ ಉನ್ನಾವೋ ಸಂತ್ರಸ್ತೆ ಕುಟುಂಬಸ್ಥರನ್ನು ಭೇಟಿ ಮಾಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಸಾಂತ್ವಾನ ಹೇಳಿದ್ದರು. ಈ ಹಿಂದೆ ಇಂತಹುದೇ ಪ್ರಕರಣ ನಡೆದಿದ್ದರೂ 23 ವರ್ಷದ ಮಹಿಳೆಗೆ ಯಾಕೆ ರಕ್ಷಣೆ ನೀಡಲಿಲ್ಲ. ಈ ಮೂಲಕ ಈ ಹಿಂದೆ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಮೇಲೆ ಆರೋಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಲಾರಿ ಹರಿಸಿ ಅಪಘಾತವಾಗಿದೆ ಎನ್ನುವ ರೀತಿಯಲ್ಲಿ ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಹೇಳಲಾಗಿತ್ತು. ಸಂತ್ರಸ್ತೆಯ ಕುಟುಂಬಕ್ಕೆ ಬೆಂಬಲ ನೀಡುವ ಸಲುವಾಗಿ ವ್ಯಾಪಕ ಪ್ರಚಾರ ನೀಡಬೇಕಿದೆ ಎಂದು ಪ್ರಿಯಾಂಕ ಗಾಂಧಿ ಒತ್ತಾಯಿಸಿದ್ದರು.
Advertisement
ಎಫ್‍ಐಆರ್ ದಾಖಲಿಸಿಕೊಳ್ಳಲೂ ನಿರಾಕರಿಸಿದ ಪೊಲೀಸರು ಯಾವ ರೀತಿಯ ಕ್ರಮ ಕೈಗೊಂಡಿದ್ದಾರೆ? ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಲು ರಾಜ್ಯ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದರು. ನಿತ್ಯ ನಡೆಯುವ ಪ್ರಕರಣದ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
ಸಾಮಾಜಿಕವಾಗಿ ಪ್ರತಿಯೊಬ್ಬರ ಸಾಮೂಹಿಕ ವೈಫಲ್ಯದಿಂದಾಗಿ ಮಹಿಳೆಗೆ ನ್ಯಾಯ ಒದಗಿಸಲು ಸಾಧ್ಯವಾಗಲಿಲ್ಲ. ಸಾಮಾಜಿಕವಾಗಿ ನಾವೆಲ್ಲರೂ ತಪ್ಪಿತಸ್ಥರು. ಅದೇ ರೀತಿ ಯುಪಿಯಲ್ಲಿನ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ತೋರಿಸುತ್ತದೆ ಎಂದು ಪ್ರಿಯಾಂಕ ಹರಿಹಾಯ್ದಿದ್ದಾರೆ.