LatestLeading NewsMain PostNational

ಸೋನಿಯಾ ಗಾಂಧಿ ತಾಯಿ ವಿಧಿವಶ

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರ ತಾಯಿ ಇಟಲಿಯಲ್ಲಿ ನಿಧನರಾಗಿದ್ದಾರೆ.

ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್‌ ಟ್ವೀಟ್‌ ಮಾಡಿ ಈ ವಿಚಾರವನ್ನು ತಿಳಿಸಿದ್ದಾರೆ.

ಸೋನಿಯಾ ಗಾಂಧಿಯವರ ತಾಯಿ, ಶ್ರೀಮತಿ ಪಾವೊಲಾ ಮೈನೋ ಅವರು ಆಗಸ್ಟ್‌ 27 ಶನಿವಾರದಂದು ಇಟಲಿಯಲ್ಲಿರುವ ಅವರ ಮನೆಯಲ್ಲಿ ನಿಧನರಾದರು. ನಿನ್ನೆ ಅಂತ್ಯಕ್ರಿಯೆ ನಡೆಯಿತು ಎಂದು ಟ್ವೀಟ್‌ ಮಾಡಿದ್ದಾರೆ. ಇದನ್ನೂ ಓದಿ: ಛತ್ತೀಸ್‌ಗಢ ಗ್ರಾಮ ಈಗ ಯೂಟ್ಯೂಬ್ ಹಬ್ – ಬೀದಿ ಬೀದಿಯಲ್ಲೂ ಸಿಗ್ತಾರೆ ಕ್ರಿಯೇಟರ್‌ಗಳು

ತಾಯಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಕಳೆದ ವಾರ ಇಟಲಿಗೆ ತೆರಳಿದ್ದರು. ಸೋನಿಯಾ ಜೊತೆ ರಾಹುಲ್‌, ಪ್ರಿಯಾಂಕಾ ಗಾಂಧಿ ವಿದೇಶಕ್ಕೆ ತೆರಳಿದ್ದರು.

Live Tv

Leave a Reply

Your email address will not be published.

Back to top button