ಚಂಡೀಗಢ: ಹೊಸದಾಗಿ ನಿರ್ಮಾಣವಾಗುತ್ತಿರುವ ಶೋರೂಂ ಒಂದರಲ್ಲಿ ನವವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿರುವ ಘಟನೆ ಸೋನಿಪತ್ನ ಗೋಕುಲ್ ನಗರದಲ್ಲಿ ನಡೆದಿದೆ.
ಮೃತಳನ್ನು ರೇಣು ಎಂದು ಗುರುತಿಸಲಾಗಿದ್ದು, ವಿಕಾಸ್ ಅವರನ್ನು ಮದುವೆಯಾಗಿದ್ದರು. ಆದರೆ ವರದಕ್ಷಿಣೆಗಾಗಿ ಆಕೆಯ ಅತ್ತೆಯಂದಿರು ಕಿರುಕುಳ ನೀಡಿ ಆಕೆಯನ್ನು ಅತ್ತೆಯಂದಿರೇ ಕೊಂದಿರಬಹುದು ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಮಾಹಿತಿ ಪಡೆದ ಸೋನಿಪತ್ ನಗರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಪತ್ನಿಯ ನಡವಳಿಕೆ ಮೇಲೆ ಸಂಶಯಗೊಂಡು ಚೂಪಾದ ಆಯುಧದಿಂದ ಚುಚ್ಚಿಕೊಂದ ವೃದ್ಧ
ಈ ಬಗ್ಗೆ ಪ್ರತಿಕ್ರಿಯಿಸಿದ ಸಹಾಯಕ ಸಬ್ ಇನ್ಸ್ಪೆಕ್ಟರ್ ಸಂಜಯ್ ಕುಮಾರ್, ಶೋ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ ಎಂದು ಹೇಳಿದ್ದಾರೆ. ಸದ್ಯ ಆಕೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬ ಸಂಬಂಧಿಕರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಮಗನ ಕಾಯಿಲೆ ಗುಣಪಡಿಸ್ತೀನೆಂದು ಮಹಿಳೆ ಮೇಲೆ ಸ್ವಯಂಘೋಷಿತ ದೇವಮಾನವ ರೇಪ್