ಬೆಂಗಳೂರು: ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.
ಭಾನುವಾರದಂದು ದೇವೇಗೌಡರಿಗೆ ದೂರವಾಣಿ ಕರೆ ಮಾಡಿದ ಸೋನಿಯಗಾಂಧಿ, ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವಂತೆ ಕೇಳಿದ್ದಾರೆಂದು ಜೆಡಿಎಸ್ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.
Advertisement
ಎನ್ಡಿಎ ಅಭ್ಯರ್ಥಿಗೆ ನೀವೇ ಪ್ರಬಲ ಸ್ಪರ್ಧಿ. ರಾಷ್ಟ್ರಪತಿ ಅಭ್ಯರ್ಥಿಯಾದ್ರೆ ಪ್ರತಿಪಕ್ಷ ನಾಯಕರಿಂದ ಬೆಂಬಲ ನೀಡುವುದಾಗಿ ಸೋನಿಯಾ ಭರವಸೆ ನೀಡಿದ್ರು ಎನ್ನಲಾಗಿದೆ.
Advertisement
ಆದ್ರೆ ಹೆಚ್.ಡಿ.ದೇವೇಗೌಡರು ಸೋನಿಯಾ ಗಾಂಧಿ ಅವರ ಪ್ರಸ್ತಾಪವನ್ನ ತಿರಸ್ಕರಿಸಿದ್ದಾರೆ. ಕರ್ನಾಟಕ ರಾಜಕಾರಣ ಬಿಟ್ಟು ಬರುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಪ್ರತಿಪಕ್ಷಗಳು ನಿರ್ಧರಿಸುವ ಅಭ್ಯರ್ಥಿಗೆ ಬೆಂಬಲ ನೀಡ್ತೀನಿ. ನಾನು ಅಭ್ಯರ್ಥಿಯಾಗಲ್ಲ ಅಂತ ಸೋನಿಯಾ ಗಾಂಧಿ ಮನವಿಯನ್ನ ತಿರಸ್ಕರಿಸಿದ್ದಾರೆ ಎಂದು ಹೇಳಲಾಗಿದೆ.