ಹಾಸನ: ಸ್ನೇಹಿತನ ಜೊತೆ ಕುಳಿತಿದ್ದಾಗ ಸಿಗರೇಟ್ ತಂದು ಕೊಡಲ್ಲ ಎಂದಿದ್ದಕ್ಕೆ ಆಕ್ಸಿಡೆಂಟ್ ಮಾಡಿ ಕೊಲೆ ಮಾಡಿದ್ದಾರೆ. ಬೆಂಗಳೂರಿನಲ್ಲಿ (Bengaluru) ಬೇರೆ ಜಿಲ್ಲೆಯವರು ಬದುಕುವುದು ಹೇಗೆ ಎಂದು ಕೊಲೆಯಾದ ಟೆಕ್ಕಿ ಸಂಜಯ್ ತಂದೆ ನಾರಾಯಣ್ ಹೇಳಿದ್ದಾರೆ.
ಸಿಗರೇಟ್ ವಿಚಾರಕ್ಕೆ ಕಾರು ಗುದ್ದಿಸಿ ಟೆಕ್ಕಿ (Techie) ಸಂಜಯ್ ಹತ್ಯೆ ಕುರಿತು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಷ್ಟಪಟ್ಟು ಮಗನನ್ನು ಎಂಜಿನಿಯರಿಂಗ್ ಓದಿಸಿದ್ದೆವು. ಕ್ಯಾಂಪಸ್ ಸೆಲೆಕ್ಷನ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಕೊಲೆ ಮಾಡಿದವನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ಷೇತ್ರದವನು. ಅವರೇ ನಮಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಬೀದರ್‌ನಲ್ಲಿ ಪೂರ್ವ ಮುಂಗಾರು ಅಬ್ಬರ – ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ
ಮಗನಿಗೆ ಇನ್ನೊಂದು ವಾರದಲ್ಲಿ ಮದುವೆ ನಿಶ್ಚಿತಾರ್ಥ ಇತ್ತು. ಈ ಸರ್ಕಾರದಲ್ಲಿ ಇಂತಹ ಘಟನೆ ನಡೆಯುತ್ತಿದೆ. ಬೆಂಗಳೂರಿನಲ್ಲಿ ಕಾನೂನು ಇಲ್ಲವೇ? ಯಾರಿಗೂ ಭಯವೇ ಇಲ್ಲವೇ? ಅಮಾಯಕನನ್ನು ಕೊಂದು ಹಾಕಿದ್ದಾರೆ. ಅಂತಹವರಿಗೆ ಮರಣದಂಡನೆ ವಿಧಿಸಬೇಕು. ಸರ್ಕಾರ ನನ್ನ ಮಗನ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಏರೋಸ್ಪೇಸ್ ಎಂಜಿನಿಯರ್ ಸಾವು
ಪ್ರಕರಣ ಏನು?
ಸಾಫ್ಟ್‌ವೇರ್ ಉದ್ಯೋಗಿಗಳಾಗಿದ್ದ ಸಂಜಯ್, ಕಾರ್ತಿಕ್ ಸಿಗರೇಟ್ ಸೇದಲು ಕಚೇರಿಯಿಂದ ಹೊರಬಂದಿದ್ದರು. ಇಲ್ಲಿನ ರಸ್ತೆ ಬದಿಯ ಸೈಕಲ್‌ನಲ್ಲಿ ಸಿಗರೇಟ್ ತೆಗೆದುಕೊಂಡಿದ್ದರು. ಅಲ್ಲೇ ನಿಂತು ಇಬ್ಬರು ಟೆಕ್ಕಿಗಳು ಸಿಗರೇಟ್ ಸೇದುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಪ್ರತೀಕ್ ಕಾರಿನಿಂದ ಇಳಿಯದೇ, ಸಂಜಯ್‌ಗೆ ಸಿಗರೇಟ್ ತಂದುಕೊಡುವಂತೆ ಹೇಳಿದ್ದ. ಇದರಿಂದ ಕೋಪಗೊಂಡ ಸಂಜಯ್ ಮತ್ತು ಕಾರ್ತಿಕ್ ಹಾಗೂ ಕಾರಿನಲ್ಲಿದ್ದ ಪ್ರತೀಕ್ ನಡುವೆ ಗಲಾಟೆ ನಡೆದಿತ್ತು. ಇದನ್ನೂ ಓದಿ: ಪರಿಸರದ ಚಿತ್ರ ಕಳಿಸಿದ್ದ ದಾವಣಗೆರೆಯ ಬಾಲಕನಿಗೆ ಪ್ರಧಾನಿ ಮೋದಿ ಮೆಚ್ಚುಗೆ
ಗಲಾಟೆ ಜೋರಾಗಿ ಅಂಗಡಿಯವರು ಬಿಡಿಸಿ ಕಳುಹಿಸಿದ್ದರು. ಕೋಪಗೊಂಡ ಪ್ರತೀಕ್ ಕಾರಿನಲ್ಲಿ ಮುಂದೆ ಹೋಗಿ ರಸ್ತೆ ಪಕ್ಕದಲ್ಲೇ ನಿಲ್ಲಿಸಿಕೊಂಡಿದ್ದ. ಸಿಗರೇಟ್ ಸೇದಿ ಇಬ್ಬರೂ ಬೈಕ್‌ನಲ್ಲಿ ಮುಂದೆ ಬರುತ್ತಿದ್ದಂತೆ. ವೇಗವಾಗಿ ಬಂದು ಇಬ್ಬರು ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದ. ಪರಿಣಾಮ, ಸಂಜಯ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಾರ್ತಿಕ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಗ್ರೇಟರ್ ಬೆಂಗಳೂರು? ಹೆಚ್ಚು ಮಳೆಯಾದ್ರೆ ಮುಳುಗುತ್ತದೆ, ಕಡಿಮೆ ಸುರಿದರೆ ತೇಲುತ್ತದೆ: ಹೆಚ್‌ಡಿಕೆ ಕಿಡಿ
ಆರಂಭದಲ್ಲಿ ಇದು ಅಪಘಾತ ಎಂದು ತಿಳಿದಿದ್ದ ಪೊಲೀಸರಿಗೆ ಸ್ಥಳದಲ್ಲಿದ್ದ ಸಿಸಿಟಿವಿ ಪರಿಶೀಲನೆ ವೇಳೆ ಅಸಲಿ ವಿಚಾರ ಬಯಲಿಗೆ ಬಂದಿದೆ. ಸುಬ್ರಮಣ್ಯಪುರ ಪೊಲೀಸರು ಆರೋಪಿ ಪ್ರತೀಕ್‌ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: Hyderabad Fire | ಕಾಪಾಡಲು ಹೋಗಿದ್ದ ತಾಯಿ ಮಕ್ಕಳನ್ನು ಅಪ್ಪಿಕೊಂಡೇ ಸುಟ್ಟು ಕರಕಲು!