ಕನ್ನಡದ ಖ್ಯಾತ ಹಿರಿಯ ನಟಿ ಲೀಲಾವತಿ (Leelavati) ಪುತ್ರ ವಿನೋದ್ ರಾಜ್ (Vinod Raj) ಮದುವೆ (Marriage) ವಿಚಾರ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿನೋದ್ ರಾಜ್ ತಮ್ಮ ತಾಯಿಗಾಗಿ ಮದುವೆಯನ್ನೇ ಆಗಿಲ್ಲ ಎಂದು ಹಲವರು ವಾದ ಮಾಡುತ್ತಿದ್ದರು. ಇನ್ನೂ ಕೆಲವರು ಮದುವೆ ಆಗಿದ್ದಾರೆ ಎಂದು ಹೇಳಿದ್ದರು. ಈ ಗೊಂದಲಕ್ಕೆ ತೆರೆ ಎಳೆಯುವಂತೆ ನಿರ್ದೇಶಕ ಹಾಗೂ ಡಾ.ರಾಜ್ ಕುಟುಂಬಕ್ಕೆ ಹತ್ತಿರವಾಗಿದ್ದ ಪ್ರಕಾಶ್ ರಾಜ್ ಮೆಹು (Prakash Raj Mehu) ಫೋಟೋವೊಂದನ್ನು ಹಂಚಿಕೊಂಡಿದ್ದರು. ಆ ಫೋಟೋದಲ್ಲಿ ವಿನೋದ್ ರಾಜ್ ಪತ್ನಿ ಹಾಗೂ ಪುತ್ರ ಕೂಡ ಇದ್ದರು.
Advertisement
ಈ ವಿಷಯಕ್ಕೆ ಸಂಬಂಧಿಸಿದಂತೆ ಲೀಲಾವತಿ ಯೂಟ್ಯೂಬ್ ಚಾನೆಲ್ ವೊಂದಕ್ಕೆ ಪ್ರತಿಕ್ರಿಯಿಸಿ, ‘ನನ್ನ ಮಗನ ಮದುವೆ ಆಗಿದೆ. ಅದರಲ್ಲಿ ಮುಚ್ಚಿಡುವಂಥದ್ದು ಏನೂ ಇಲ್ಲ. ಆದರೆ, ಸಿಂಪಲ್ ಆಗಿ ಮದುವೆ ಮಾಡಿದೆ. ನನ್ನ ಹತ್ತಿರ ದುಡ್ಡಿಲ್ಲದ್ದಕ್ಕೆ ತಿರುಪತಿ ಬೆಟ್ಟದ ಮೇಲೆ ಮಾಡಿದೆ. ಎಂಥೆಂದವರ ಮದುವೆ ಎಲ್ಲೆಲ್ಲೋ ಆಗಿದೆ. ಪ್ಯಾಲೇಸ್ ಗಳಲ್ಲಿ ಮಾಡಿದ್ದಾರೆ. ಆದರೆ, ನನಗೆ ಆ ಶಕ್ತಿ ಇರಲಿಲ್ಲ. ಅನೇಕರು ಈ ಕುರಿತು ಹೀಯಾಳಿಸಿದರು. ಹಾಗಾಗಿ ಚರ್ಚೆ ಮಾಡಲಿಲ್ಲ’ ಎಂದು ಹೇಳಿದ್ದಾರೆ.
Advertisement
Advertisement
ಮುಂದುವರೆದು ಮಾತನಾಡಿರುವ ಲೀಲಾವತಿ, ‘ನನ್ನ ಮಗನ ಮದುವೆಗೆ ಏಳು ಜನ ಕನ್ನಡಿಗರು ಬಂದಿದ್ದರು. ಏನ್ ಲೀಲಾವತಿ ಅವರೇ ನಿಮ್ಮ ಮಗನ ಮದುವೆಗೆ ಏಳೇ ಏಳು ಜನ ಬಂದಿದ್ದಾರೆ. ಜನ ಸಿಗಲಿಲ್ಲವಾ ಎಂದು ಕುಹಕವಾಡಿದರು. ಯಾವುದಕ್ಕೂ ನಾನು ತಲೆ ಕೆಡಿಸಿಕೊಳ್ಳಲಿಲ್ಲ. ಮೊಮ್ಮಗ ಮತ್ತು ಸೊಸೆ ಚೆನ್ನಾಗಿದ್ದಾರೆ. ಅವರಿಗೆ ಯಾವುದೇ ಕೊರತೆ ಮಾಡಿಲ್ಲ. ಅಂತರಂಗದ ಸುದ್ದಿಯನ್ನು ಈ ರೀತಿ ಕೇಳುತ್ತಾರೆ ಅಂತ ಬೇಸರವಾಗುತ್ತದೆ. ಯಾರು ಏನೇ ಹೇಳಲಿ ನನ್ನ ಆತ್ಮಸಾಕ್ಷಿಯಂತೆ ನಡೆದುಕೊಳ್ಳುವೆ’ ಎಂದಿದ್ದಾರೆ.
Advertisement
ಕೆಲ ದಿನಗಳ ಹಿಂದೆ ನಿರ್ದೇಶಕ ಮೆಹು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಲೀಲಾವತಿ ಮತ್ತು ಅವರ ಪುತ್ರನ ಬಗ್ಗೆ ಪೋಸ್ಟ್ ವೊಂದನ್ನು ಹಾಕಿದ್ದರು. ಅದರಲ್ಲಿ ‘ವಿನೋದ್ ರಾಜ್ ಅವರಿಗೆ ಮದುವೆಯಾಗಿ ಪುತ್ರನಿದ್ದು, ಚೆನ್ನೈನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ವಿನೋದ್ ಪತ್ನಿ ಮತ್ತು ಮಗ ಚೆನ್ನೈನಲ್ಲಿ ವಾಸಿಸುತ್ತಿದ್ದಾರೆ’ ಎಂದು ಬರೆದಿದ್ದರು. ಲೀಲಾವತಿಯವರ ಜೊತೆಗೆ ಕುಳಿತಿರುವ ಫೋಟೋವನ್ನು ಫೇಸ್‌ಬುಕ್‌ನಲ್ಲಿ ಮೆಹು ಪ್ರಕಟಿಸಿದ್ದಾರೆ. ಅದರಲ್ಲಿ ಮಹಾಲಿಂಗ ಭಾಗವತರ್ ಪತ್ನಿ ಲೀಲಾವತಿ ಅಮ್ಮಾಳ್ ಎಂದು ಬರೆದುಕೊಂಡಿದ್ದಾರೆ. ವಿನೋದ್ ಪುತ್ರನ ಹೆಸರು ಯುವರಾಜ್ ಎಂದು ಇದ್ದು, ಈ ಸಂಬಂಧ ಆತನ ಅಂಕಪಟ್ಟಿಯ ಫೋಟೋವನ್ನು ಕೂಡ ಹಾಕಿದ್ದಾರೆ. ಅದರಲ್ಲಿ ತಾಯಿ ಹೆಸರು ಅನು ಬಿ ಎಂದಿದೆ. ತಂದೆ/ಗಾರ್ಡಿಯನ್ ಜಾಗದಲ್ಲಿ ವಿನೋದ್ ರಾಜ್ ಎಂದಿದೆ.
ಸದ್ಯ ವಯೋಸಹಜ ಅನಾರೋಗ್ಯದಿಂದ (Health Issue) ಇರುವ ಲೀಲಾವತಿ ಅವರನ್ನು ಅವರ ಪುತ್ರ ವಿನೋದ್ ರಾಜ್ ನೋಡಿಕೊಳ್ಳುತ್ತಿದ್ದು, ಇದರ ಜೊತೆಗೆ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡು ನೆಲಮಂಗಲ ಹತ್ತಿರ ನೆಲೆಸಿದ್ದಾರೆ.