ಬೆಂಗಳೂರು: ಸ್ಟಾರ್ಟ್ಅಪ್ ಕಂಪನಿ ಸಿಇಒ (CEO) ಸುಚನಾ ಸೇಠ್ (Suchana Seth) ಹೆತ್ತ ಮಗನನ್ನೇ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಿಂದ ಒಂದೊಂದೇ ಮಾಹಿತಿಗಳು ಬಹಿರಂಗವಾಗುತ್ತಿವೆ. ಇದೀಗ ಆರೋಪಿ ಸುಚನಾ ಸೇಠ್ ತನ್ನ ಪತಿಯಿಂದ ದೂರವಾದ ಬಳಿಕ ಜೀವನಾಂಶವಾಗಿ (Sustenance) ತಿಂಗಳಿಗೆ 2.5 ಲಕ್ಷ ರೂ.ಗೆ ಡಿಮ್ಯಾಂಡ್ ಮಾಡಿದ್ದರು ಎಂಬ ವಿಷಯ ಹೊರಬಿದ್ದಿದೆ.
ಆರೋಪಿ ಸುಚನಾ ಮತ್ತು ಆಕೆಯ ಪತಿ ವೆಂಕಟರಮಣ ನಡುವೆ ಬಿನ್ನಾಭಿಪ್ರಾಯ ಉಂಟಾದ ಹಿನ್ನೆಲೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಸುಚನಾ ಡಿವೋರ್ಸ್ ಕೇಸ್ ಮೂರು ವಾರದ ಹಿಂದೆ ಅಂದರೆ ಡಿಸೆಂಬರ್ 12ರಂದು ವಿಚಾರಣೆ ನಡೆದಿತ್ತು. ಸುಚನಾ ಪತಿ ವೆಂಕಟರಮಣ ತಿಂಗಳಿಗೆ 9 ಲಕ್ಷ ರೂ. ದುಡಿಯುತ್ತಾರೆ. ಈ ಹಿನ್ನೆಲೆ ವಿಚಾರಣೆ ವೇಳೆ ಜೀವನಾಂಶಕ್ಕೆ ತಿಂಗಳಿಗೆ 2.5 ಲಕ್ಷ ರೂ. ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ. ಇದನ್ನೂ ಓದಿ: ಮಗುವಿಗೆ ಹೈಡೋಸ್ ಕೊಟ್ಟು, ಎಚ್ಚರ ತಪ್ಪಿಸಿ ಹತ್ಯೆ- ಸೇಠ್ ರೂಮಲ್ಲಿ ಕೆಮ್ಮಿನ ಔಷಧಿ ಬಾಟ್ಲಿ ಪತ್ತೆ
Advertisement
Advertisement
ಇದಾದ ಬಳಿಕ ಸುಚನಾ ಮನೆಯಿಂದ ಮಗನನ್ನು ಕರೆದುಕೊಂಡು ಗೋವಾಗೆ ಹೋಗಿದ್ದಾಳೆ. ಅಲ್ಲದೇ ಮಹಿಳೆ ವಾಸವಾಗಿದ್ದ ಹೋಟೆಲ್ ರೂಂನಲ್ಲಿ ಎರಡು ಖಾಲಿ ಸಿರಪ್ ಬಾಟಲ್ ಪತ್ತೆಯಾಗಿದೆ. ಖಾಲಿ ಸಿರಪ್ ಬಾಟಲ್‌ಗಳು ಪತ್ತೆ ಆಗಿರೋದು ಗಮನಿಸಿದರೆ ಇದೊಂದು ಪ್ಲ್ಯಾನ್ಡ್ ಮರ್ಡರ್ ಎಂದು ಪೊಲೀಸರು ತೀರ್ಮಾನಿಸಿದ್ದಾರೆ. ಇದನ್ನೂ ಓದಿ: ವಿಧಾನಸೌಧದ ಮುಂದೆ ಹೈಡ್ರಾಮ; ಸೀಮೆ ಎಣ್ಣೆ ಸುರಿದುಕೊಂಡು ಮುಸ್ಲಿಂ ಕುಟುಂಬ ಆತ್ಮಹತ್ಯೆಗೆ ಯತ್ನ
Advertisement
ಸುಚನಾ ಸೇಠ್ ಹೇಳಿದ್ದೇನು?
ವಿಚ್ಛೇದನ ಕೋರ್ಟ್‌ನಲ್ಲಿತ್ತು. ವಾರಕ್ಕೊಮ್ಮೆ ಪತಿ ವೆಂಕಟರಮಣನಿಗೆ ಮಗುವನ್ನ ವೀಡಿಯೋ ಕಾಲ್ ಮೂಲಕ ತೋರಿಸಬೇಕಿತ್ತು. ಆದರೆ ಗಂಡನಿಗೆ ಮಗುವನ್ನು ತೋರಿಸುವುದಕ್ಕೆ ಇಷ್ಟ ಇರಲಿಲ್ಲ. ನನ್ನ ಮಗು ಕಂಡರೆ ನನಗೂ ಕೂಡ ಬಹಳ ಪ್ರೀತಿ. ಹೀಗಾಗಿ ನಾನು ಮಗುವಿನ ಪ್ರಜ್ಞೆ ತಪ್ಪಿಸಲು ದಿಂಬಿನಿಂದ ಒತ್ತಿ ಹಿಡಿದೆ. ಮಗು ಪ್ರಜ್ಞೆ ತಪ್ಪಿದೆ ಎಂದುಕೊಂಡಿದ್ದೆ. ಆದರೆ ಮಗು ಸಾವನ್ನಪ್ಪಿತ್ತು ಎಂದಿದ್ದಾಳೆ. ಇದನ್ನೂ ಓದಿ: ಒಡೆದ ಕಾರಿನ ಹೆಡ್‌ಲೈಟ್‌ಗಳನ್ನು ತ್ರಿವರ್ಣ ಧ್ವಜದಿಂದ ಮುಚ್ಚಿದ- ಮುಂದೇನಾಯ್ತು..?
Advertisement
ಇದೇ ನೋವಿನಲ್ಲಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದೆ. ಆದರೆ ಅದು ಸಾಧ್ಯವಾಗಿಲ್ಲ. ಗಾಬರಿಯಲ್ಲಿ ಏನು ಮಾಡಬೇಕೆಂದು ತೋಚದೆ ಸೂಟ್‌ಕೇಸ್‌ನಲ್ಲಿ ಮಗುವಿನ ಬಾಡಿ ಹಾಕಿ ಪರಾರಿಯಾಗಲು ಯತ್ನಿಸಿದೆ ಎಂದು ವಿವರಿಸಿದ್ದಾಳೆ. ಇದನ್ನೂ ಓದಿ: ಪುತ್ರನ ಹತ್ಯೆಗೈದ ಬೆಂಗ್ಳೂರು CEO ಪ್ರಕರಣ- ತಂದೆಯಿಂದ ಮಗುವಿನ ಅಂತ್ಯಸಂಸ್ಕಾರ
ಸುಚನಾ ಸೇಠ್ ಮತ್ತು ವೆಂಕಟರಮಣ 2010ರಲ್ಲಿ ವಿವಾಹವಾಗಿದ್ದರು. 2019ರಲ್ಲಿ ಪುತ್ರ ಜನಿಸಿದ್ದು, 2021ರಿಂದ ಪತಿಯಿಂದ ಬೇರೆಯಾಗಿ ಜೀವನ ನಡೆಸುತ್ತಿದ್ದೇನೆ ಎಂದು ಆರೋಪಿ ಸುಚನಾ ಸೇಠ್ ನ್ಯಾಯಾಲಯದಲ್ಲಿ ತಿಳಿಸಿದ್ದಾಳೆ. ಇದನ್ನೂ ಓದಿ: ಬೆಂಗಳೂರು ಸಿಇಓನಿಂದ ಮಗನ ಹತ್ಯೆ ಪ್ರಕರಣ- ಮಗುವಿನ ಅಂತ್ಯಸಂಸ್ಕಾರಕ್ಕೆ ಸಿದ್ಧತೆ