ಬೆಂಗಳೂರು: ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ತಂದೆ ತಾಯಿಯನ್ನು (Parents) ಕೌನ್ಸಿಲಿಂಗ್ (Counselling) ಮಾಡಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ಮುಂದಾಗಿದೆ. ಕೌನ್ಸಿಲಿಂಗ್‌ನಲ್ಲಿ ಹಲವು ಅಂಶಗಳನ್ನು ಚರ್ಚಿಸಲಿದೆ. ತಂದೆ ತಾಯಿ ತಪ್ಪು ಮಾಡಿದ್ದರೆ ಕ್ರಮ, ಇಲ್ಲವಾದಲ್ಲಿ ತಂದೆ ತಾಯಿಗೆ ಮಗುವನ್ನ ವಾಪಸ್ ಕೊಡಿಸಲು ರಕ್ಷಣಾ ಆಯೋಗ ಮುಂದಾಗಿದೆ.
ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ಸೋನು ಶ್ರೀನಿವಾಸ್ ಗೌಡ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಮಗುವಿನ ತಂದೆ ತಾಯಿಯನ್ನು ಕೌನ್ಸಿಲಿಂಗ್ ಮಾಡಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ ಮುಂದಾಗಿದೆ. ಮಗುವನ್ನು ಸೋನು ಶ್ರೀನಿವಾಸ್ ಗೌಡ ಕರೆದುಕೊಂಡು ಹೋದ ಮೇಲೆ ಪೋಷಕರು ಯಾಕೆ ದೂರು ಕೊಡಲಿಲ್ಲ? ಅವರಿಂದ ಆಮಿಷಕ್ಕೆ ಒಳಗಾಗಿದ್ರಾ ಎಂಬ ಆಯಾಮದಲ್ಲಿ ಕೌನ್ಸಿಲಿಂಗ್ ಮಾಡಿ ಮಗುವನ್ನು ರಕ್ಷಣೆ ಮಾಡೋಕೆ ಮುಂದಾಗಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣದ ಆರೋಪಿ ಶ್ರೀಕಿಗೆ ಗನ್‌ಮ್ಯಾನ್!
ಸದ್ಯ ಮಗು ಬಾಲಿಕ ಆಶ್ರಮದಲ್ಲಿ ಮಕ್ಕಳ ಕಲ್ಯಾಣ ಸಮಿತಿ ನಿಗಾದಲ್ಲಿದೆ. ದತ್ತು ಪಡೆಯುವಾಗ ಅನುಸರಿಸಬೇಕಾದ ನಿಯಮಗಳನ್ನು ಅನುಸರಿಸಿಲ್ಲ. ತಂದೆ ತಾಯಿಯನ್ನು ಕೌನ್ಸಿಲಿಂಗ್ ಮಾಡಿ ಅವರದ್ದು ತಪ್ಪು ಇದ್ದರೆ ಕ್ರಮಕ್ಕೆ ಮುಂದಾಗುತ್ತಾರೆ. ತಂದೆ ತಾಯಿ ತಪ್ಪು ಇಲ್ಲದಿದ್ದರೆ ಮಗುವನ್ನು ತಂದೆ ತಾಯಿಗೆ ವಾಪಸ್ ಒಪ್ಪಿಸಲು ತಯಾರಿ ಮಾಡುತ್ತೇವೆ ಎನ್ನುತ್ತಿದ್ದಾರೆ. ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಒಂದೇ ದೇಹದ ಎರಡು ಕಣ್ಣುಗಳು: ಹೆಚ್‍ಡಿಕೆ
ಅತ್ತ ಸೋನು ಜೈಲಿನಲ್ಲಿದ್ದರೆ ಇತ್ತ ಮಕ್ಕಳ ಆಯೋಗ ತಂದೆ ತಾಯಿಯನ್ನು ಕೌನ್ಸಿಲಿಂಗ್ ಮಾಡೋದಕ್ಕೆ ಮುಂದಾಗಿದೆ. ಕೌನ್ಸಿಲಿಂಗ್ ಬಳಿಕ ಏನೆಲ್ಲ ಬೆಳವಣಿಗೆಗಳು ಆಗಲಿವೆ ಎಂದು ಕಾದು ನೋಡಬೇಕಿದೆ. ಇದನ್ನೂ ಓದಿ: ಮಹುವಾ ಮೊಯಿತ್ರಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಕೇಸ್ ದಾಖಲಿಸಿದ ಇ.ಡಿ