-ಕನ್ನಡ ಹಾಡು ಹೇಳಿ ಎಂದಿದ್ದಕ್ಕೆ ಎಡವಟ್ಟಾಗಿ ಮಾತಾಡಿದ ಗಾಯಕ
ಬೆಂಗಳೂರು: ಕಾರ್ಯಕ್ರಮವೊಂದರಲ್ಲಿ ಕನ್ನಡ (Kannada) ಹಾಡು ಹೇಳಿ ಎಂದಿದ್ದಕ್ಕೆ, ಇದಕ್ಕೇನೇ ಪಹಲ್ಗಾಮ್ ದಾಳಿ ನಡೆದಿದ್ದು ಎಂದು ಗಾಯಕ ಸೋನು ನಿಗಮ್ (Sonu Nigam) ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನ (Bengaluru) ಈಸ್ಟ್ ಪಾಯಿಂಟ್ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದನು. ಅದಕ್ಕೆ ಸೋನು ನಿಗಮ್ ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ, ತಮಗೆ ಕನ್ನಡ ಮೇಲಿರುವ ಪ್ರೀತಿ, ಇಲ್ಲಿನ ಜನರ ಮೇಲಿರುವ ಗೌರವದ ಬಗ್ಗೆ ಹೇಳಿಕೊಂಡರು.ಇದನ್ನೂ ಓದಿ: Mangaluru | ಕಾರಿಗೆ ಮೀನಿನ ಟೆಂಪೋ ಗುದ್ದಿಸಿ ಸಾರ್ವಜನಿಕವಾಗಿ ಸುಹಾಸ್ ಶೆಟ್ಟಿ ಹತ್ಯೆ
ನನ್ನ ವೃತ್ತಿಜೀವನದಲ್ಲಿ ನಾನು ಬೇರೆ ಬೇರೆ ಭಾಷೆಗಳಲ್ಲಿ ಹಾಡಿದ್ದೇನೆ. ಆ ಪೈಕಿ ನಾನು ಹಾಡಿದ ಅತ್ಯುತ್ತಮ ಹಾಡುಗಳು ಕನ್ನಡದಲ್ಲಿವೆ. ನಾನು ಕರ್ನಾಟಕಕ್ಕೆ ಬಂದಾಗಲೆಲ್ಲಾ ತುಂಬಾ ಪ್ರೀತಿ, ಗೌರವದಿಂದ ಬರುತ್ತೇನೆ. ನೀವೆಲ್ಲ ನನ್ನನ್ನು ನಿಮ್ಮ ಕುಟುಂಬದವರಂತೆ ನೋಡಿಕೊಂಡಿದ್ದೀರಿ. ಪ್ರತಿ ಬಾರಿ ನಾನು ಯಾವುದೇ ಕಾರ್ಯಕ್ರಮಕ್ಕೆ ಹೋದಾಗಲೂ, ಯಾರಾದರೂ ಕನ್ನಡ ಎಂದು ಕೂಗಿದಾಗ ಅವರಿಗಾಗಿ ಒಂದು ಸಾಲು ಕನ್ನಡ ಹಾಡನ್ನಾದರೂ ಹಾಡಿರುತ್ತೇನೆ. ಆ ಹುಡುಗನ ವಯಸ್ಸಿಗಿಂತ ಮೊದಲಿನಿಂದಲೂ ನಾನು ಕನ್ನಡ ಹಾಡು ಹಾಡುತ್ತಿದ್ದೇನೆ. ಆದರೆ ಕನ್ನಡ, ಕನ್ನಡ ಎಂದು ಕಿರುಚಿಕೊಂಡು ಆ ಹುಡುಗ ಹೇಳಿದ್ದು ನನಗೆ ಇಷ್ಟವಾಗಲಿಲ್ಲ. ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು ಎಂದು ಹೇಳಿ ವಿವಾದ ಮೈಮೇಲೆ ಎಳೆದುಕೊಂಡರು.
ಸೋನು ನಿಗಮ್ ಮಾತಿಗೆ ಕನ್ನಡಪರ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಕನ್ನಡ ಹಾಡುವಂತೆ ಹೇಳಿದ್ದಕ್ಕೂ, ಭಯೋತ್ಪಾದಕರ ದಾಳಿಗೂ ಏನು ಸಂಬಂಧ? ಎಂದು ಆಕ್ರೋಶ ಹೊರಹಾಕಿದ್ದಾರೆ. ಸೋನು ನಿಗಮ್‌ರನ್ನು ಕನ್ನಡ ಚಿತ್ರೋದ್ಯಮದಿಂದ ದೂರ ಇಡಿ ಹಾಗೂ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಇದನ್ನೂ ಓದಿ: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ