ಬಾಲಿವುಡ್ ನಟ ಸೋನು ಸೂದ್ ಬಹುಭಾಷಾ ಕಲಾವಿದನಾಗಿ ಗುರುತಿಸಿಕೊಂಡಿರುವ ನಟ, ಸಿನಿಮಾಗಳಲ್ಲಿ ಮಾತ್ರ ಹೀರೋ ಅಲ್ಲ, ನಿಜ ಜೀವನದಲ್ಲೂ ಹೀರೋ ಎಂಬುದನ್ನ ಮತ್ತೆ ಪ್ರೂವ್ ಮಾಡಿದ್ದಾರೆ. ವಿಶೇಷ ಮಗುವಿಗೆ ಶಸ್ತ್ರ ಚಿಕಿತ್ಸೆಗೆ ನೆರವಾಗಿ, ಅಭಿಮಾನಿಗಳ ಮೆಚ್ಚುಗೆ ಗಿಟ್ಟಿಸಿಕೊಂಡಿದ್ದಾರೆ.
ನಟನಾಗಿ, ಖಳನಾಯಕನಾಗಿ, ಪೋಷಕ ಪಾತ್ರಗಳ ಮೂಲಕ ಬಹುಭಾಷಾ ತಾರೆಯಾಗಿ ಗುರುತಿಸಿಕೊಂಡಿರುವ ಸೋನು ಸೂದ್ ಆನ್‌ಸ್ಕ್ರೀನ್‌ನಲ್ಲಿ ಮಾತ್ರ ಹೀರೋ ಅಲ್ಲಾ, ನಿಜ ಜೀವನದಲ್ಲೂ ಅದೆಷ್ಟೋ ಸಂಕಷ್ಟದಲ್ಲಿರುವವರಿಗೆ ನೆರವಾಗಿ ಅವರ ಬಾಳಿಗೆ ಬೆಳಕಾಗಿ ಸಾಥ್ ನೀಡಿದ್ದಾರೆ. ಕೊವೀಡ್ ವೇಳೆಯಲ್ಲಿ ಸಾಕಷ್ಟು ಜನರ ಕಷ್ಟಕ್ಕೆ ಸೋನು ಮಿಡಿದಿದ್ದಾರೆ. ಈಗ ನಾಲ್ಕು ಕೈ, ನಾಲ್ಕು ಕಾಲು ಇರುವ ಪುಟ್ಟ ಮಗುವಿನ ನೆರವಿಗೆ ಧಾವಿಸಿದ್ದಾರೆ. ಇದನ್ನೂ ಓದಿ: ಹಾಟ್ ಅವತಾರದಲ್ಲಿ ಪಾರುಲ್ ಯಾದವ್
View this post on Instagram
ಬಿಹಾರ್‌ನ ಪುಟ್ಟ ಗ್ರಾಮದ ಹುಡುಗಿ ಚಹುಮುಖಿಯ ದೇಹದಲ್ಲಿ ನಾಲ್ಕು ಕೈ ಮತ್ತು ನಾಲ್ಕು ಕಾಲುಗಳೊಂದಿಗೆ ಜನಿಸಿದ್ದಳು.ಮಗುವಿನ ಪೋಷಕರಿಗೆ ಶಸ್ತ್ರ ಚಿಕಿತ್ಸೆಗೆ ಹಣ ಹೊಂದಿಸಲು ಸಾಧ್ಯವಾಗದ ಸಂದರ್ಭದಲ್ಲಿ, ಮಗುವಿನ ಚಿಕಿತ್ಸೆಯ ಖರ್ಚನ್ನು ಈಗ ಸೋನು ಅವರೇ ನೋಡಿಕೊಂಡಿದ್ದು. ಇದೀಗ ಶಸ್ತ್ರ ಚಿಕಿತ್ಸೆಯ ನಂತರ ಮಗುವಿನ ಆರೋಗ್ಯ ಸುಧಾರಿಸಿದೆ. ಮಗುವಿನ ಸದ್ಯದ ಸ್ಥಿತಿಯ ಕುರಿತು ಸೋನು ಸೂದ್ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಸೋನು ಸೂದ್ ನಡೆಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸಾಕಷ್ಟು ತಾರೆಯರು ಸೋನು ಸೂದ್ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.