ರೀಲ್ಸ್ ರಾಣಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ವಿಚಾರವಾಗಿ ಸೋನು ಜೈಲು (Jail) ಪಾಲಾಗಿದ್ದರು. ಇದೀಗ 11 ದಿನಗಳ ಸೆರೆವಾಸದ ನಂತರ ಏ.6ರಂದು ಜೈಲಿಂದ ರಿಲೀಸ್ ಆಗಿದ್ದಾರೆ. ಪರಪ್ಪನ ಅಗ್ರಹಾರದಿಂದ ಬಿಡುಗಡೆ ಆದ್ಮೇಲೆ ಯುಗಾದಿ (Ugadi Festival) ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಸೆಲೆಬ್ರೇಶನ್ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ.


ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣದಲ್ಲಿ ಸೋನು ಮೊದಲ ಪ್ರತಿಕ್ರಿಯೆ ಮುಂದಿನ ನಡೆ ಏನು ಎಂಬುದರ ಬಗ್ಗೆ ಫ್ಯಾನ್ಸ್‌ಗೆ ಕುತೂಹಲ ಮೂಡಿಸಿದೆ. ಸದಾ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಇರುವ ನಟಿ ಈಗ ಸಿಕ್ಕಾಪಟ್ಟೆ ಸೈಲೆಂಟ್ ಆಗಿದ್ದರು. ವಿವಾದದಿಂದ ಸೋನು ಮೌನಕ್ಕೆ ಶರಣಾಗಿದ್ದರು. ಇದೀಗ ಮತ್ತೆ ಲವಲವಿಕೆಯಿಂದ ಕ್ಯಾಮೆರಾಗೆ ಪೋಸ್ ಕೊಟ್ಟಿರುವ ಫೋಟೋ ಶೇರ್ ಮಾಡಿದ್ದಾರೆ. ಈ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆದ್ರೂ ಉತ್ತರ ಕೊಡುತ್ತಾರಾ? ಕಾಯಬೇಕಿದೆ.
6 ದಿನಗಳ ಹಿಂದೆ ಸೋನುಗೌಡಗೆ ಕೋರ್ಟ್‌ನಿಂದ ಜಾಮೀನು ಮಂಜೂರಾಗಿತ್ತು. ಇಬ್ಬರ ಶ್ಯೂರಿಟಿ ಜೊತೆಗೆ 1 ಲಕ್ಷ ಬಾಂಡ್ ಷರತ್ತನ್ನು ನ್ಯಾಯಾಧೀಶರು ವಿಧಿಸಿದ್ದರು. ಏ.6ರಂದು ಜಾಮೀನು ಅರ್ಜಿಯ ಷರತ್ತುಗಳನ್ನ ಪೂರೈಸಿದ ಹಿನ್ನೆಲೆ ರಾತ್ರಿ 8:10ರ ಸುಮಾರಿಗೆ ಜೈಲಿನಿಂದ ಬಿಡುಗಡೆಯಾಗಿದ್ದರು.


