ಬೆಂಗಳೂರು: ಐಫೋನ್ (iPhone) ತಯಾರಿಸುವ ಬಹುರಾಷ್ಟ್ರೀಯ ಫಾಕ್ಸ್‌ಕಾನ್ (Foxconn) ಕಂಪನಿಗೆ 300 ಎಕರೆ ಭೂಮಿ ಹಸ್ತಾಂತರಿಸುವ ಸಂಬಂಧ ಇದ್ದ ಕಾನೂನು ತೊಡಕುಗಳನ್ನು ನಿವಾರಿಸಲಾಗಿದೆ. ಶೀಘ್ರವೇ ಕಂಪನಿಗೆ ಜಾಗ ಬಿಟ್ಟುಕೊಡಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ (MB Patil) ಶುಕ್ರವಾರ ವಿಧಾನಸಭೆಗೆ ತಿಳಿಸಿದರು.
ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು (Dheeraj Muniraj) ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಕಂಪನಿಗೆ ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರ ಹೋಬಳಿಗೆ ಸೇರಿದ ಮಾಹಿತಿ ತಂತ್ರಜ್ಞಾನ ಹೂಡಿಕೆ ವಲಯದಲ್ಲಿ (ITIR) ದಲ್ಲಿ 300 ಎಕರೆ ಜಾಗ ಕೊಡಲಾಗುತ್ತದೆ. ಕಂಪನಿ ಸುಮಾರು 8,500 ಕೋಟಿ ರೂ. ಹೂಡಿಕೆ ಮಾಡಿ ತಯಾರಿಕಾ ಘಟಕ ಸ್ಥಾಪಿಸಲಿದೆ. ಭೂಮಿ ಹಸ್ತಾಂತರವಾಗುತ್ತಿದ್ದಂತೆ ಕಂಪನಿಯು ನಿರ್ಮಾಣ ಕಾಮಗಾರಿ ಶುರು ಮಾಡಬಹುದು. ನಿರೀಕ್ಷೆ ಪ್ರಕಾರ ಮುಂದಿನ ವರ್ಷ ಉತ್ಪಾದನೆ ಕೂಡ ಆರಂಭಿಸಲಿದೆ. 50 ಸಾವಿರ ಜನರಿಗೆ ಉದ್ಯೋಗ ದೊರಕಿಸುವ ಈ ಯೋಜನೆಯ ಬಗ್ಗೆ ಸರ್ಕಾರ ಮುತುವರ್ಜಿ ವಹಿಸಿದೆ ಎಂದು ವಿವರಿಸಿದರು. ಇದನ್ನೂ ಓದಿ: Made by Tata iPhones – ಕೋಲಾರದಲ್ಲಿ ಐಫೋನ್ ತಯಾರಿಸಲಿದೆ ಟಾಟಾ!
Advertisement
Advertisement
ದೊಡ್ಡಬಳ್ಳಾಪುರ (Doddaballapura) ತಾಲೂಕಿನಲ್ಲಿ ಕಳೆದ ಮೂರು ವರ್ಷಗಳಲ್ಲಿ 3 ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಸ್ಥಾಪನೆಯಾಗಿವೆ. ಇವು ಸುಮಾರು 110 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದು, 1,450ಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ಹೇಳಿದರು. ಇದನ್ನೂ ಓದಿ: ವೇದಾಂತ ಜೊತೆಗಿನ 1.61 ಲಕ್ಷ ಕೋಟಿ ಒಪ್ಪಂದವನ್ನ ರದ್ದುಗೊಳಿಸಿದ ಫಾಕ್ಸ್‌ಕಾನ್
Advertisement
ಕೈಗಾರಿಕಾ ನೀತಿ (2020-25), ಕರ್ನಾಟಕ ಏರೋಸ್ಪೇಸ್ ಆಂಡ್ ಡಿಫೆನ್ಸ್ ನೀತಿ (2022-27) ಮತ್ತು ವಿದ್ಯುತ್ ಚಾಲಿತ ವಾಹನ ಆಂಡ್ ಇಂಧನ ಸಂಗ್ರಹಣೆ ನೀತಿ (2017) ಅಡಿಯಲ್ಲಿ ನಿಗದಿಗೊಳಿಸಿರುವ ಉತ್ತೇಜಕ ಕ್ರಮಗಳು ಈ ವಲಯದಲ್ಲಿ ಹೆಚ್ಚಿನ ಕೈಗಾರಿಕೆಗಳು ಸ್ಥಾಪನೆಯಾಗಲು ಪೂರಕವಾಗಿವೆ ಎಂದು ಪಾಟೀಲ್ ಅಭಿಪ್ರಾಯಪಟ್ಟರು.
Advertisement
Web Stories