ನವದೆಹಲಿ: ಐಫೆಲ್ ಟವರ್ ಗಿಂತ ಎತ್ತರವಾದ ರೈಲ್ವೆ ಸೇತುವೆಯೊಂದು ಜಮ್ಮು ಕಾಶ್ಮೀರದ ಚೇನಾಬ್ ನದಿಗೆ ಅಡ್ಡಲಾಗಿ ಕಟ್ಟಲಾಗ್ತಿದ್ದು, 2019ರೊಳಗೆ ಸೇತುವೆ ನಿರ್ಮಾಣ ಪೂರ್ಣವಾಗಲಿದೆ. ಈ ಸೇತುವೆ ಜಗತ್ತಿನ ಅತ್ಯಂತ ಎತ್ತರದ ಸೇತುವೆ ಆಗಲಿದೆ.
ಈ 1.3 ಕಿ.ಮೀ ಉದ್ದದ ಸೇತುವೆ ಜಮ್ಮುವಿನ ಕತ್ರಾದಲ್ಲಿರುವ ಬಕ್ಕಲ್ ಹಾಗೂ ಶ್ರೀನಗರದ ಕೌರಿ ನಡುವೆ ಸಂಪರ್ಕ ಕಲ್ಪಿಸಲಿದೆ. ಸೇತುವೆ ನಿರ್ಮಾಣಕ್ಕಾಗಿ 24,000 ಟನ್‍ಗಳಷ್ಟು ಸ್ಟೀಲ್ ಬಳಸಲಾಗ್ತಿದೆ. ಗುಮ್ಮಟದ ಆಕಾರದಲ್ಲಿ ಕಮಾನು ನಿರ್ಮಿಸಿ ಅದರ ಮೇಲೆ ಬ್ರಿಡ್ಜ್ ನಿರ್ಮಾಣವಾಗಲಿದೆ. ವಿಶೇಷವಾದ ಸ್ಫೋಟ ನಿರೋಧಕ ಸ್ಟೀಲ್‍ನಿಂದ ಈ ಸೇತುವೆ ನಿರ್ಮಾಣವಾಗ್ತಿದ್ದು, ಉಗ್ರರ ದಾಳಿಯನ್ನೂ ತಡೆದುಕೊಳ್ಳಲಿದೆ. ಅತ್ಯಂತ ಕಡಿಮೆ ಉಷ್ಣಾಂಶ ಹಾಗೂ ವೇಗವಾಗಿ ಬೀಸುವ ಗಾಳಿಯನ್ನೂ ತಡೆದುಕೊಳ್ಳಲಿದೆ. 1,110 ಕೋಟಿ. ರೂ ವೆಚ್ಚದಲ್ಲಿ ಸೇತುವೆ ನಿರ್ಮಾಣವಾಗ್ತಿದೆ.
Advertisement
Advertisement
ಈ ಸೇತುವೆ ನಿರ್ಮಾಣ ಪೂರ್ಣವಾದ ನಂತರ ಚೀನಾದ 275 ಮೀ ಉದ್ದದ ಶೂಬೇ ರೈಲ್ವೆ ಸೇತುವೆಯ ದಾಖಲೆಯನ್ನ ಮುರಿಯಲಿದೆ. ಫ್ರಾನ್ಸ್ ನ ಪ್ಯಾರಿಸ್ ನಲ್ಲಿರುವ ಐಫೆಲ್ ಟವರ್ 324 ಮೀ(1062.99 ಅಡಿ) ಎತ್ತರವಿದ್ದು ಈ ಬ್ರಿಡ್ಜ್ ಅದಕ್ಕಿಂತ 35 ಮೀ ಎತ್ತರವಿರಲಿದೆ. ಅಂದ್ರೆ ಈ ಸೇತುವೆ ಚೇನಾಬ್ ನದಿಯಿಂದ 359 ಮೀ(1177.82 ಅಡಿ) ಎತ್ತರವಿರಲಿದೆ.
Advertisement
ಬ್ರಿಡ್ಜ್ ಮತ್ತು ರೈಲ್ವೆ ಪ್ರಯಾಣಿಕರ ರಕ್ಷಣೆಗಾಗಿ ಏರಿಯಲ್ ರಿಂಗ್, ಆನ್‍ಲೈನ್ ನಿರ್ವಹಣೆ ಹಾಗೂ ಎಚ್ಚರಿಕೆಯ ವ್ಯವಸ್ಥೆಗಳು ಇರಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
#TransformingIndia A rail bridge taller than the Eiffel Tower over the Chenab https://t.co/e8GSUDj40S pic.twitter.com/ttqi5FKPpp
— Ministry of Railways (@RailMinIndia) May 3, 2017