ಚಾಮರಾಜನಗರ: ರಾಜ್ಯದಲ್ಲಿನ ಅತಿ ಹೆಚ್ಚು ಆದಾಯ ತಂದು ಕೊಡುವ ಮಲೆಮಹದೇಶ್ವರ ಬೆಟ್ಟಕ್ಕೆ ರಾತ್ರಿ ಸಂಚಾರವನ್ನು ಕೆಲವೇ ದಿನಗಳಲ್ಲಿ ಸ್ಥಗಿತಗೊಳಿಸಲು ಅರಣ್ಯ ಇಲಾಖೆ ಮುಂದಾಗಿದೆ.
ಹುಲಿ ಸಂರಕ್ಷಿತ ಪ್ರದೇಶ, ಕಾವೇರಿ ವನ್ಯಜೀವಿಧಾಮದ ವ್ಯಾಪ್ತಿಗೆ ಮಲೆಮಹದೇಶ್ವರ ಬೆಟ್ಟದ ರಸ್ತೆ ಬರುತ್ತದೆ. ಈ ಭಾಗದಲ್ಲಿ ಅನೇಕ ಪ್ರಾಣಿ ಸಂಕುಲಗಳು ಇವೆ. ರಾತ್ರಿ ವಾಹನಗಳ ರಸ್ತೆಯಲ್ಲಿ ಸಂಚರಿಸುವ ಪ್ರಾಣಿಗಳಿಗೆ ಡಿಕ್ಕಿ ಹೊಡೆಯುವ ಪ್ರಕರಣಗಳು ಹೆಚ್ಚು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಬಂಡೀಪುರ ಮಾದರಿಯಲ್ಲಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ರಾತ್ರಿ ಸಂಚಾರ ಬಂದ್ ಮಾಡಲು ಅರಣ್ಯ ಇಲಾಖೆ ನಿರ್ಧರಿಸಿದೆ.
Advertisement
Advertisement
ಈ ವಿಚಾರದ ಬಗ್ಗೆ ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾತ್ರಿ ಸಂಚಾರ ಬಂದ್ ಕುರಿತು ಆದೇಶ ಪ್ರತಿ ಹೊರಡಿಸಿದ್ದಾರೆ. ಈ ಪ್ರತಿ ಇದೀಗ ಚಾಮರಾಜನಗರ ಜಿಲ್ಲಾಧಿಕಾರಿಗೆ ತಲುಪಿದ್ದು, ಕೆಲವೇ ದಿನಗಳಲ್ಲಿ ಆದೇಶ ಜಾರಿಯಾಗುವ ಸಾಧ್ಯತೆಯಿದೆ. ಬೆಟ್ಟದಲ್ಲಿ ಜಾತ್ರೆ ಕಾರ್ಯಕ್ರಮಗಳು ರಾತ್ರಿ ವೇಳೆ ಇದ್ದರೆ ಮಾತ್ರ ಸಂಚಾರಕ್ಕೆ ಅನುಮತಿ ನೀಡಲಾಗುತ್ತದೆ.