– ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಸ್ತಾವನೆಗೆ ಕೇಂದ್ರ ಸ್ಪಂದನೆ
ಹುಬ್ಬಳ್ಳಿ: ಗಣೇಶ ಹಬ್ಬದ ವೇಳೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಗದೊಂದು ಕೊಡುಗೆ ನೀಡಿದೆ. ಅದೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು (Vande Bharat Express Train).
ಹಬ್ಬಕ್ಕೂ ಮುನ್ನ ರೈತರಿಗೆ ಹೆಸರು, ಉದ್ದು, ಸೋಯಾಬಿನ್, ಸೂರ್ಯಕಾಂತಿ ಬೆಳೆಗಳಿಗೆ ಬೆಂಬಲ ಬೆಲೆ ಕೊಡುಗೆ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಹುಬ್ಬಳ್ಳಿ-ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರದ ಮತ್ತೊಂದು ಗಿಫ್ಟ್ ನೀಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರ ಪ್ರಸ್ತಾವನೆಗೆ ಸ್ಪಂದಿಸಿ ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹುಬ್ಬಳ್ಳಿ – ಪುಣೆ ಮಧ್ಯೆ 2ನೇ ವಂದೇ ಭಾರತ್ ರೈಲು ಆರಂಭಿಸುವ ಶುಭ ಸಂದೇಶ ನೀಡಿದ್ದಾರೆ.
ಹುಬ್ಬಳ್ಳಿ-ಧಾರವಾಡದ ಜನರೊಂದಿಗೆ ಹಬ್ಬದ ಈ ಶುಭ ಸಂದರ್ಭದಲ್ಲಿ ಸಿಹಿ ಸುದ್ದಿ..
ಶೀಘ್ರದಲ್ಲಿಯೇ ಹುಬ್ಬಳ್ಳಿ- ಪುಣೆ ನಡುವೆ ಹುಬ್ಬಳ್ಳಿಯ ಎರಡನೇಯ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚರಿಸಲಿದೆ.
ಈ ಕುರಿತು ಸನ್ಮಾನ್ಯ ಕೇಂದ್ರ ರೈಲ್ವೆ ಸಚಿವರಾದ ಶ್ರೀ @AshwiniVaishnaw ಅವರಲ್ಲಿ ನಾನು ಜುಲೈನಲ್ಲಿ ಪತ್ರದ ಮುಖಾಂತರ ವಿನಂತಿಸಿಕೊಂಡಿದ್ದೆ.… pic.twitter.com/kdMPhybyc4
— Pralhad Joshi (@JoshiPralhad) September 9, 2024
ಶೀಘ್ರದಲ್ಲೇ ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರು ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಚಾರ್ಜ್‌ಶೀಟ್ ಸಲ್ಲಿಕೆ – ಗನ್ನಿಕಡ ತೋಟದ ಮನೆ ರಹಸ್ಯದ ಬಗ್ಗೆಯೂ ಉಲ್ಲೇಖ!
ಮನವಿ ಸಲ್ಲಿಸಿದ್ದ ಜೋಶಿ:
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹುಬ್ಬಳ್ಳಿ-ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ಅಶ್ವಿನಿ ವೈಷ್ಣವ್ ಅವರಿಗೆ ಜುಲೈ ಮೊದಲ ವಾರದಲ್ಲಷ್ಟೇ ಪತ್ರ ಬರೆದು ಮನವಿ ಮಾಡಿದ್ದರು. ರಾಜ್ಯದಲ್ಲಿ ಬೆಂಗಳೂರು ನಂತರ ಪ್ರಮುಖ ವಾಣಿಜ್ಯ ನಗರಿ ಎಂಬ ಹೆಗ್ಗಳಿಕೆ ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕಿದೆ. ಅಲ್ಲದೇ, ವಂದೇ ಭಾರತ್ ರೈಲು ಸಂಚಾರದಿಂದ ಈ ಭಾಗದ ವಾಣಿಜ್ಯೋದ್ಯಮ, ಕೈಗಾರಿಕಾ ವಸಾಹತು ಬೆಳವಣಿಗೆಗೆ ಅನುಕೂಲ ಆಗುತ್ತದೆ ಎಂದು ಸಚಿವ ಜೋಶಿ ಕೇಂದ್ರದ ಗಮನ ಸೆಳೆದಿದ್ದರು.
ಹುಬ್ಬಳ್ಳಿಯಿಂದ ಮುಂಬೈ ಸಂಪರ್ಕಕ್ಕೂ ಈ ಮಾರ್ಗ ಅತ್ಯಂತ ಪ್ರಮುಖವಾಗಲಿದೆ ಎಂಬುದನ್ನು ಜೋಶಿ ಅವರು ರೈಲ್ವೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟು ವಂದೇ ಭಾರತ್ ರೈಲು ಸಂಚಾರ ಆರಂಭಕ್ಕೆ ಒತ್ತಾಯಿಸಿದ್ದರು. ಹುಬ್ಬಳ್ಳಿ-ಧಾರವಾಡದ ಜನರಿಗೆ ಹಬ್ಬದ ಈ ಶುಭ ಸಂದರ್ಭದಲ್ಲಿ ವಂದೇ ಭಾರತ್ ರೈಲು ಸಂಚಾರ ಸಿಹಿ ಸುದ್ದಿಯಾಗಿದ್ದು, ಶೀಘ್ರದಲ್ಲಿಯೇ ಹುಬ್ಬಳ್ಳಿ – ಪುಣೆ ನಡುವೆ ಹುಬ್ಬಳ್ಳಿಯ 2ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿದೆ ಎಂದು ಸಚಿವ ಜೋಶಿ ಟ್ವೀಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ.
ಉದ್ಘಾಟನೆ ದಿನ, ವೇಳಾಪಟ್ಟಿ ಶೀಘ್ರ ಪ್ರಕಟ:
ವಂದೇ ಭಾರತ್ ರೈಲು ಸಂಚಾರದ ಉದ್ಘಾಟನೆ ದಿನ ಮತ್ತು ವೇಳಾ ಪಟ್ಟಿಯನ್ನು ರೈಲ್ವೆ ಇಲಾಖೆ ಆದಷ್ಟು ಬೇಗ ಪ್ರಕಟಿಸಲಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂಗೆ ಬಾಂಬ್, ಆಟಂ ಬಾಂಬ್, ರಾಕೆಟ್ ಬಾಂಬ್ ಯಾರ‍್ಯಾರಿಟ್ಟಿದ್ದಾರೋ ಗೊತ್ತಿಲ್ಲ: ಆರ್.ಅಶೋಕ್
ಪ್ರಧಾನಿಗೆ, ರೈಲ್ವೆ ಸಚಿವರಿಗೆ ಧನ್ಯವಾದ:
ನಮ್ಮ ವಿಭಾಗದ ರೇಲ್ವೆ ಅಭಿವೃದ್ಧಿಗೆ, ವಿಕಾಸಕ್ಕೆ ಪ್ರಧಾನಿ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಮೂಲಕ ಮಹತ್ವದ ಕೊಡುಗೆ ನೀಡಿದ್ದು, ಉತ್ತರ ಕರ್ನಾಟಕ ಜನರ ಪರವಾಗಿ ಧನ್ಯವಾದ ಅರ್ಪಿಸುವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಡಾ ಕೇಸ್‌ನ್ನು ಬಿತ್ತರಿಸದಿರಲಿ ಅಂತಾ ದರ್ಶನ್ ಕೇಸ್ ಫೋಟೋ ವೈರಲ್ ಮಾಡ್ತಾ ಇದ್ದೀರಾ? – ಛಲವಾದಿ ಆಕ್ಷೇಪ