CinemaLatestMain PostSouth cinema

ಐಶ್ವರ್ಯ ರಜನಿಕಾಂತ್ ನಿರ್ದೇಶನದಲ್ಲಿ ಸೌರವ್ ಗಂಗೂಲಿ ಬಯೋಪಿಕ್

Advertisements

ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಕ್ರಿಕೆಟ್ ಕುರಿತ ಸಿನಿಮಾ ಮಾಡಲು ಮುಂದಾಗಿದ್ದಾರೆ. ಕ್ರಿಕೆಟ್ ಜಗತ್ತಿನ ಮಹಾನ್ ಕ್ರಿಕೆಟಿಗ ಸೌರವ್ ಗಂಗೂಲಿ ಬಯೋಪಿಕ್ ತೆರೆಗೆ ತರಲು ತಯಾರಿ ನಡೆಸುತ್ತಿದ್ದಾರೆ.

ಸ್ಟಾರ್ ನಟ ಧನುಷ್ ಜೊತೆ ಡಿವೋರ್ಸ್ ಪಡೆದ ಮೇಲೆ ರಜನಿಕಾಂತ್ ಪುತ್ರಿ ಐಶ್ವರ್ಯ ಮತ್ತಷ್ಟು ಚಿತ್ರರಂಗದಲ್ಲಿ ಆಕ್ಟೀವ್ ಆಗಿದ್ದಾರೆ. ಈಗಾಗಲೇ ಸಾಕಷ್ಟು ಚಿತ್ರಗಳನ್ನು ನಿರ್ದೇಶನ ಮಾಡುವ ಮೂಲಕ ಐಶ್ವರ್ಯ ರಜನೀಕಾಂತ್ ಸೈ ಎನಿಸಿಕೊಂಡಿದ್ದಾರೆ. ಈಗ ಕ್ರಿಕೆಟ್‌ನತ್ತ ಒಲವು ತೋರಿಸುತ್ತಿದ್ದಾರೆ. ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿರುವ, ಕ್ರಿಕೆಟ್ ಜಗತ್ತಿನ ದಂತಕಥೆ ಸೌರವ್ ಗಂಗೂಲಿ ಇಂಚಿಂಚೂ ಕಥೆಯನ್ನ ಬೆಳ್ಳಿಪರದೆಯಲ್ಲಿ ತೋರಿಸಲು ನಿರ್ದೇಶಕಿ ಐಶ್ವರ್ಯ ಸಜ್ಜಾಗಿದ್ದಾರೆ. ಇದನ್ನೂ ಓದಿ: ಪತ್ನಿ ರಮ್ಯಾ ಜೊತೆ `ನಾಗಿಣಿ 2′ ಖ್ಯಾತಿಯ ನಿನಾದ್ ದಾಂಪತ್ಯಗೀತೆ

ನಿರ್ದೇಶಕ ಲವ್ ರಂಜನ್ ಒಡೆತನದ ಲವ್ ಫಿಲ್ಮ್ಸ್‌ ನಿರ್ಮಾಣದ ಅಡಿಯಲ್ಲಿ ಸೌರವ್ ಗಂಗೂಲಿ ಬಯೋಪಿಕ್ ತೆರೆಗೆ ಬರಲು ಸಿದ್ಧವಾಗುತ್ತಿದೆ. ಈಗಾಗಲೇ ಸೌರವ್ ಅವರ ಜೊತೆ ಈ ಕುರಿತು ಮಾತುಕತೆ ನಡೆದಿದ್ದು, ಬಯೋಪಿಕ್ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಕುರಿತು ಮಾಜಿ ಕ್ರಿಕೆಟಿಗ ಸೌರವ್ ಕೂಡ ಈ ಹಿಂದೆಯೇ ಅಧಿಕೃತವಾಗಿ ಟ್ವೀಟರ್‌ನಲ್ಲಿ ಹೇಳಿಕೊಂಡಿದ್ದರು.

ಸೌರವ್ ಗಂಗೂಲಿ ಅವರ ಬಯೋಪಿಕ್‌ನಲ್ಲಿ ಸೌರವ್ ಪಾತ್ರಕ್ಕೆ ಯಾರು ಜೀವ ತುಂಬಲಿದ್ದಾರೆ ಎಂಬುದರ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಹುಟ್ಟು ಹಾಕಿದೆ. ಇದರ ಬಗ್ಗೆ ಚಿತ್ರತಂಡ ಯಾವುದೇ ಮಾಹಿತಿ ನೀಡಿಲ್ಲ. ಸದ್ಯದಲ್ಲೇ ಈ ಕುರಿತು ಅಪ್‌ಡೇಟ್ ನೀಡಲಿದೆ ಚಿತ್ರತಂಡ. ಒಟ್ನಲ್ಲಿ ಐಶ್ವರ್ಯ ರಜನೀಕಾಂತ್ ನಿರ್ದೇಶನದಲ್ಲಿ ಸಿನಿಮಾ ಹೇಗೆ ಮೂಡಿ ಬರಲಿದೆ ಎಂಬುದನ್ನ ಕಾದುನೋಡಬೇಕಿದೆ.

Leave a Reply

Your email address will not be published.

Back to top button