ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ ನೀಡಿದ್ದಾರೆ ಎಂಬ ವದಂತಿಗೆ ತೆರೆಬಿದ್ದಿದೆ. ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸ್ಪಷ್ಟಪಡಿಸಿದ್ದಾರೆ.
Advertisement
ಇಂದು ಟ್ವಿಟ್ಟರ್‌ನಲ್ಲಿ ಗಂಗೂಲಿ ಹಾಕಿಕೊಂಡಿದ್ದ ಪೋಸ್ಟ್ ಒಂದರ ಬಳಿಕ ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಯ್ ಶಾ ಗಂಗೂಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಾಕಿ ಏಷ್ಯಾ ಕಪ್ 2022: ಭಾರತಕ್ಕೆ ಕಂಚಿನ ಪದಕ
Advertisement
Advertisement
ಗಂಗೂಲಿ ಟ್ವೀಟ್‍ನಲ್ಲಿ ಏನಿದೆ?
1992ರಲ್ಲಿ ನನ್ನ ಕ್ರಿಕೆಟ್ ವೃತ್ತಿ ಜೀವನ ಆರಂಭಗೊಂಡು ಇದೀಗ 2022ಕ್ಕೆ 30 ವರ್ಷಗಳು ಸಂದಿದೆ. ಅಲ್ಲಿಂದ ಇಲ್ಲಿವರೆಗೂ ಕ್ರಿಕೆಟ್ ನನಗೆ ಎಲ್ಲವನ್ನೂ ಕೊಟ್ಟಿದೆ. ಎಲ್ಲಕ್ಕಿಂತ ಹೆಚ್ಚಾಗಿ ಪ್ರತಿಯೊಬ್ಬರ ಬೆಂಬಲ ನನಗೆ ಸಿಕ್ಕಿದೆ. ನನ್ನ ಕ್ರಿಕೆಟ್ ವೃತ್ತಿಬದುಕಿಗೆ ಸಹಕರಿಸಿದ, ನಾನು ಈ ಸ್ಥಾನಕ್ಕೆ ಬರಲು ಬೆಂಬಲ ನೀಡಿ ಪ್ರೋತ್ಸಾಹಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಸಲ್ಲಿಸಲು ಬಯಸುತ್ತೇನೆ. ನಾನು ಇಂದು ಇನ್ನೊಂದು ಹೊಸ ಪ್ರಾರಂಭದ ಹೆಜ್ಜೆಯನ್ನಿಟ್ಟಿದ್ದು ಇದು ಹಲವರಿಗೆ ನೆರವಾಗಲಿದೆ ಎನ್ನುವ ವಿಶ್ವಾಸ ನನಗಿದೆ. ನನ್ನ ಹೊಸ ಪ್ರಯತ್ನಕ್ಕೆ ನಿಮ್ಮಲ್ಲರ ಬೆಂಬಲ ಪ್ರೋತ್ಸಾಹ ಹೀಗೆ ಮುಂದುವರಿಯಲಿ ಎಂದು ನಾನು ಬೇಡಿಕೊಳ್ಳುತ್ತಿದ್ದೇನೆ. ಇದನ್ನೂ ಓದಿ: ಪಾಕಿಸ್ತಾನದವನಾಗಿ ನಾನು ಹೇಳುತ್ತೇನೆ ವಿರಾಟ್ ಕೊಹ್ಲಿ ಒಬ್ಬ ಸಾರ್ವಕಾಲಿಕ ಶ್ರೇಷ್ಠ ಆಟಗಾರ: ಶೋಯೆಬ್ ಅಕ್ತರ್
Advertisement
— Sourav Ganguly (@SGanguly99) June 1, 2022
ಈ ಪೋಸ್ಟ್ ಗಂಗೂಲಿ ಮಾಡಿದ ಬಳಿಕ ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ಸುಳ್ಳು ಸುದ್ದಿ ರಾಜೀನಾಮೆ ಕೊಟ್ಟಿಲ್ಲ ಎಂಬ ಸ್ಪಷ್ಟನೇ ಬಿಸಿಸಿಐ ಕಾರ್ಯದರ್ಶಿ ನೀಡಿದ್ದಾರೆ. ಈ ನಡುವೆ ಗಂಗೂಲಿ ಟ್ವೀಟ್ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.