ಮುಂಬೈ: ವಿರಾಟ್ ಕೊಹ್ಲಿಗೆ ಶೋಕಾಸ್ ನೋಟಿಸ್ ಕಳುಹಿಸಲು ಬಯಸಿದ್ದೇವೆ ಎಂದು ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದರು.
ಕಳೆದ ವರ್ಷ ವಿರಾಟ್ ಕೊಹ್ಲಿ ಟಿ20 ಪಂದ್ಯದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಭಾರತೀಯ ಕ್ರಿಕೆಟ್‍ನಲ್ಲಿ ವಿವಾದವನ್ನು ಹುಟ್ಟುಹಾಕಿತ್ತು. ದಕ್ಷಿಣ ಆಫ್ರಿಕಾದ ಪ್ರವಾಸದ ಮುಂಚೆ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ್ದ ವಿರಾಟ್ ಕೊಹ್ಲಿ, ಏಕದಿನ ಪಂದ್ಯದಿಂದ ನಾಯಕತ್ವವನ್ನು ಹಿಂಪಡೆದಿರುವುದು ತಿಳಿದೇ ಇರಲಿಲ್ಲ ಎಂಬ ಹೇಳಿಕೆ ನೀಡಿದ್ದರು. ಇದು ವಿವಾದವನ್ನು ಹುಟ್ಟಿಸಿತ್ತು. ನಂತರದಲ್ಲಿ ಸೌರವ್ ಗಂಗೂಲಿ ಅವರು ದಕ್ಷಿಣ ಆಫ್ರಿಕಾ ಸರಣಿಗೆ ಮುಂಚಿತವಾಗಿ ಕೊಹ್ಲಿಗೆ ಶೋಕಾಸ್ ನೋಟಿಸ್ ಕಳುಹಿಸಲು ಬಯಸಿದ್ದರು ಎಂಬ ವರದಿ ಹೊರಬಿದ್ದಿದೆ.
Advertisement
Advertisement
ಈ ವಿಷಯದ ಕುರಿತಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮೌನ ಮುರಿದಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಇದು ನಿಜವಲ್ಲ ಎಂದು ತಿಳಿಸಿದ್ದಾರೆ. ಕಳೆದ ವರ್ಷ ಕೊಹ್ಲಿ ಟಿ-20 ನಾಯಕತ್ವದಿಂದ ಕೆಳಗಿಳಿದಿದ್ದರು. ಇದರಿಂದಾಗಿ ವೈಟ್ ಬಾಲ್ ಸ್ವರೂಪಕ್ಕೆ ಒಬ್ಬರೇ ನಾಯಕರು ಬೇಕೆಂದು ಆಯ್ಕೆ ಸಮಿತಿ ಅವರನ್ನು ಏಕದಿನ ನಾಯಕನ ಸ್ಥಾನದಿಂದಲೂ ತೆಗೆದುಹಾಕಿದೆ. ಇದನ್ನೂ ಓದಿ: ಮೊದ್ಲು ಜನ್ರಿಗೆ ಆದಾಯ ಬರುವಂತೆ ಮಾಡಿ, ಆಮೇಲೆ ದರ ಏರಿಕೆ ಮಾಡಿ : ಡಿಕೆಶಿ
Advertisement
ನಾಯಕತ್ವದ ಬದಲಾವಣೆಯ ಕುರಿತು ವಿರಾಟ್ ಕೊಹ್ಲಿ ಅವರ ಜೊತೆಗೂ ಮಾತನಾಡಿದ್ದೇನೆ. ಟಿ20 ಪಂದ್ಯದ ನಾಯಕತ್ವವನ್ನು ಬಿಟ್ಟುಕೊಡದಂತೆ ವಿನಂತಿಸಿಕೊಂಡಿದ್ದೆವು ಎಂದು ಹೇಳಿದರು.
Advertisement
ಕಳೆದ ವಾರ ಟೆಸ್ಟ್ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ರಾಜೀನಾಮೆ ನೀಡಿದ್ದಾರೆ. ಇದಾದ ನಂತರ ಸೌರವ್ ಗಂಗೂಲಿ ಟ್ವೀಟ್ ಮಾಡಿ, ಅದು ಕೊಹ್ಲಿ ಅವರ ವೈಯಕ್ತಿಕ ನಿರ್ಧಾರ ಎಂದು ಹೇಳಿದ್ದರು. ಇದನ್ನೂ ಓದಿ: ಕೋವಿಡ್ ಯಾರನ್ನೂ ಬಿಟ್ಟಿಲ್ಲ, ದೇವೇಗೌಡರಿಗೆ ಕೊರೊನಾ ತೀವ್ರತೆ ಇಲ್ಲ: ಬೊಮ್ಮಾಯಿ