ಮುಂಬೈ: ನಾಕೌಟ್ ಪಂದ್ಯಗಳಲ್ಲಿ ಟೀಂ ಇಂಡಿಯಾ (Team India) ಮಾನಸಿಕ ಒತ್ತಡಕ್ಕಿಂತಲೂ ಹೆಚ್ಚಾಗಿ ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲವಾದ್ದರಿಂದ ಸೋಲನ್ನು ಎದುರಿಸುತ್ತಿದೆ ಎಂದು ಬಿಸಿಸಿಐ (BCCI) ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ತಿಳಿಸಿದ್ದಾರೆ.
ಶನಿವಾರವಷ್ಟೇ ತಮ್ಮ 51ನೇ ಹುಟ್ಟುಹಬ್ಬ ಆಚರಿಸಿಕೊಂಡ ಗಂಗೂಲಿ, ನಾಕೌಟ್ ಪಂದ್ಯಗಳಲ್ಲಿ ಟೀಂ ಇಂಡಿಯಾ ಗೆಲ್ಲಲು ಏಕೆ ಹೆಣಗಾಡುತ್ತಿದೆ ಎಂಬುದನ್ನ ವಿವರಿಸಿದ್ದಾರೆ. ಇದನ್ನೂ ಓದಿ: ICC World Cup 2023: ಟೀಂ ಇಂಡಿಯಾ ಪರಿಷ್ಕೃತ ವೇಳಾಪಟ್ಟಿ ರಿಲೀಸ್ – ಇಲ್ಲಿದೆ ಡಿಟೇಲ್ಸ್
Advertisement
Advertisement
ಹೌದು. 2013ರಲ್ಲಿ ಎಂ.ಎಸ್ ಧೋನಿ (MS Dhoni) ನಾಯಕತ್ವದಲ್ಲಿದ್ದಾಗ ಭಾರತ ತಂಡ ಇಂಗ್ಲೆಂಡ್ ನೆಲದಲ್ಲಿ ಚಾಂಪಿಯನ್ ಟ್ರೋಫಿ ಗೆದ್ದಿತ್ತು. ಆ ನಂತರ ಐಸಿಸಿ (ICC) ಟೂರ್ನಿಗಳಲ್ಲಿ ಯಾವುದೇ ಟ್ರೋಫಿ ಗೆದ್ದಿಲ್ಲ. 2013ರ ನಂತರ ಭಾರತ 4 ಬಾರಿ ಫೈನಲ್ ಹಾಗೂ ಅನೇಕ ಸೆಮಿಫೈನಲ್ ಪಂದ್ಯಗಳಲ್ಲಿ ಸೋತು ಮುಖಭಂಗ ಅನುಭವಿಸಿದೆ. ಇದನ್ನೂ ಓದಿ: ಯಾರ ಜೊತೆ, ಎಲ್ಲಿ ಬೇಕಾದ್ರೂ ಆಡೋಕೆ ನಾವ್ ರೆಡಿ – ಪಾಕ್ ತಂಡ ಭಾರತಕ್ಕೆ ಬರೋದು ಖಚಿತ; ಬಾಬರ್ ಆಜಂ
Advertisement
Advertisement
ಈ ಕುರಿತು ಸಂದರ್ಶನದಲ್ಲಿ ಮಾತನಾಡಿದ ಗಂಗೂಲಿ, ನಿರ್ಣಾಯಕ ಹಂತಗಳಲ್ಲಿ ನಾವು ಕೆಲವೊಮ್ಮೆ ಉತ್ತಮವಾಗಿ ಕಾರ್ಯನಿರ್ವಹಿಸುವುದಿಲ್ಲ. ಇದು ಮಾನಸಿಕ ಒತ್ತಡ ಮಾತ್ರವೆಂದು ನಾನು ಭಾವಿಸುವುದಿಲ್ಲ. ಮಾನಸಿಕ ಒತ್ತಡಕ್ಕಿಂತ ನಿರೀಕ್ಷಿತ ಪ್ರದರ್ಶನ ನೀಡದಿರುವುದು ಎದ್ದು ಕಾಣುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಈ ಬಾರಿ ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದು ಸಾಧನೆಯೇ ಆಗಿದೆ. ಈ ಬಾರಿ ವಿಶ್ವಕಪ್‌ನಲ್ಲೂ ನಮಗೆ ಗೆಲ್ಲುವ ಎಲ್ಲ ಅವಕಾಶಗಳಿವೆ. ಉತ್ತಮ ಆಟಗಾರರೂ ಇದ್ದಾರೆ. ಪ್ರಯತ್ನಪಟ್ಟರೇ ಎಲ್ಲವೂ ಸಾಧ್ಯವಾಗುತ್ತದೆ ಎಂದು ಕಿವಿಮಾತು ಹೇಳಿದ್ದಾರೆ.
ಕಳೆದ ವರ್ಷ ಟಿ20 ಏಷ್ಯಾಕಪ್‌ನಲ್ಲಿ ಸೂಪರ್ ಫೋರ್ ಹಂತದಲ್ಲಿ ಎಡವಿದ್ದ ಭಾರತ, ನಂತರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಹೀನಾಯವಾಗಿ ಸೋತಿತ್ತು. ಇನ್ನೂ ಈ ವರ್ಷದ ಆರಂಭದಿಂದ ನಡೆದ ಶ್ರೀಲಂಕಾ, ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ನಡೆದ ಸರಣಿಗಳಲ್ಲಿ ಯಶಸ್ವಿ ಪ್ರದರ್ಶನ ನೀಡಿದ್ದ ಭಾರತ ತಂಡ, ಇತ್ತೀಚೆಗೆ ನಡೆದ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಹೀನಾಯ ಸೋಲನುಭವಿಸಿ, ಸತತ 2ನೇ ಬಾರಿಗೆ ರನ್ನರ್‌ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.
Web Stories