ಮಹಾನಟಿ ಕೀರ್ತಿ ಸುರೇಶ್ (Keerthy Suresh) ನಟನೆಯ ‘ರಘು ತಾತ’ (Raghu Thatha) ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಸ್ಟಾರ್ ನಟನ ಸಿನಿಮಾಗೆ ಠಕ್ಕರ್ ಕೊಡಲು ಕೀರ್ತಿ ಸುರೇಶ್ ಸಜ್ಜಾಗಿದ್ದಾರೆ. ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ (Pushpa 2) ಚಿತ್ರದ ಮುಂದೆ ಕೀರ್ತಿ ಸುರೇಶ್ ನಟನೆಯ ‘ರಘು ತಾತ’ ಸಿನಿಮಾ ರಿಲೀಸ್ ಆಗಲಿದೆ. ಇದನ್ನೂ ಓದಿ:ಬಿಟೌನ್ ಟಾಕ್: ನಟಿ ಮಲೈಕಾ ಅರೋರಾ- ಅರ್ಜುನ್ ಕಪೂರ್ ಬ್ರೇಕಪ್
ಸೌತ್ ಸಿನಿಮಾಗಳ ಮೂಲಕ ಗಮನ ಸೆಳೆದಿರುವ ಸಹಜ ನಟಿ ಕೀರ್ತಿ ನಟನೆಯ ಬಹುನಿರೀಕ್ಷಿತ ಸಿನಿಮಾ ರಘು ತಾತ ಸಿನಿಮಾ ಬಗ್ಗೆ ಸಿಹಿಸುದ್ದಿ ಸಿಕ್ಕಿದೆ. ಹೊಂಬಾಳೆ ಸಂಸ್ಥೆ ನಿರ್ಮಾಣದ ‘ರಘು ತಾತ’ ಸಿನಿಮಾ ಇದೇ ಆಗಸ್ಟ್ 15ಕ್ಕೆ ರಿಲೀಸ್ ಡೇಟ್ ಅನೌನ್ಸ್ ಆಗಿದೆ.
‘ರಘು ತಾತ’ ಸಿನಿಮಾ ರಿಲೀಸ್ ದಿನವೇ ಪುಷ್ಪ 2 ಕೂಡ ರಿಲೀಸ್‌ಗೆ ಸಿದ್ಧವಾಗಿದೆ. ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ಪುಷ್ಪ ಪಾರ್ಟ್ 2 ಬಗ್ಗೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ. ಸ್ಟಾರ್ ನಟನ ಸಿನಿಮಾ ಮುಂದೆ ಮಹಾನಟಿ ಸಿನಿಮಾ ರಿಲೀಸ್ ಆಗ್ತಿರೋದ್ರಿಂದ ಪುಷ್ಪ 2 ಮುಂದೆ ಉತ್ತಮ ಪೈಪೋಟಿ ಕೊಡುತ್ತಾರಾ ಎಂದು ಕಾದುನೋಡಬೇಕಿದೆ. ‘ರಘು ತಾತ’ ಸಿನಿಮಾ ಮಹಿಳಾ ಪ್ರಧಾನ ಸಿನಿಮಾ ಆಗಿದೆ. ಇಡೀ ಸಿನಿಮಾ ಕೀರ್ತಿ ಪಾತ್ರದ ಸುತ್ತವೇ ಸುತ್ತಲಿದೆ. ಆಗಸ್ಟ್ 15ಕ್ಕೆ ಕೀರ್ತಿ ಸಿನಿಮಾ ಚಿತ್ರಮಂದಿರಕ್ಕೆ ಬಹುಭಾಷೆಗಳಲ್ಲಿ ಲಗ್ಗೆ ಇಡಲಿದೆ.
ಅಂದಹಾಗೆ, ಕನ್ನಡದ ಹೆಮ್ಮೆಯ ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಹಲವು ಭಾಷೆಗಳಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದೆ. ಈ ಹಿಂದೆ ಕೇವಲ ಕನ್ನಡದಲ್ಲಿ ಸಿನಿಮಾ ಮಾಡಿ, ಬೇರೆ ಭಾಷೆಗಳಿಗೆ ಡಬ್ ಮಾಡಿ ಚಿತ್ರಗಳನ್ನು ರಿಲೀಸ್ ಮಾಡುತ್ತಿತ್ತು. ಆದರೆ, ಇದೀಗ ಆಯಾ ಭಾಷೆಯಲ್ಲೇ ಸಿನಿಮಾ ಮಾಡುವ ಮೂಲಕ ಹೊಸ ಹೆಜ್ಜೆ ಇಟ್ಟಿದೆ.