ಆಡಿಲೇಡ್: ಟಿ20 ವಿಶ್ವಕಪ್‍ನಲ್ಲಿ (T20 World Cup) ಸೆಮಿಫೈನಲ್ ಪ್ರವೇಶಿಸುವ ಮುಕ್ತ ಅವಕಾಶ ಹೊಂದಿದ್ದ ದಕ್ಷಿಣ ಆಫ್ರಿಕಾ (South Africa), ನೆದರ್‌ಲ್ಯಾಂಡ್ (Netherland) ವಿರುದ್ಧ ಸೋಲಿನೊಂದಿಗೆ ಮನೆದಾರಿ ಹಿಡಿದಿದೆ. ಇತ್ತ ಆಫ್ರಿಕಾ ಸೋಲಿನ ಪ್ರಯೋಜನ ಪಡೆದ ಪಾಕಿಸ್ತಾನ (Pakistan) ತಂಡ ಬಾಂಗ್ಲಾದೇಶ (Bangladesh) ವಿರುದ್ಧದ ಗೆಲುವಿನೊಂದಿಗೆ ಅದೃಷ್ಟದಾಟದಲ್ಲಿ ಸೆಮಿಫೈನಲ್ ಪ್ರವೇಶಿಸಿದೆ.
Advertisement
ದಿನದ ಮೊದಲ ಆಟದಲ್ಲಿ ನೆದರ್‌ಲ್ಯಾಂಡ್ ವಿರುದ್ಧದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಪರಾಭವಗೊಂಡು ತಮ್ಮ ತಂಡಕ್ಕಿದ್ದ ಚೋಕರ್ಸ್ ಹಣೆಪಟ್ಟಿಯನ್ನು ತೊಡೆದು ಹಾಕಲು ವಿಫಲವಾಯಿತು. ಮೊದಲು ಬ್ಯಾಟಿಂಗ್ ಮಾಡಿದ ನೆದರ್‌ಲ್ಯಾಂಡ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 158 ರನ್ ಪೇರಿಸಿತು. 159 ರನ್‍ಗಳ ಉತ್ತಮ ಮೊತ್ತವನ್ನು ಬೆನ್ನಟ್ಟಿದ ಆಫ್ರಿಕಾ ನೆದರ್‌ಲ್ಯಾಂಡ್ ಬೌಲರ್‌ಗಳ ಸಂಘಟಿತ ದಾಳಿಗೆ ಕಕ್ಕಾಬಿಕ್ಕಿಯಾಗಿ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 145 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ನೆದರ್‌ಲ್ಯಾಂಡ್ 13 ರನ್‍ಗಳ ಜಯದೊಂದಿಗೆ ತೃಪ್ತಿದಾಯಕ ವಿದಾಯ ಹೇಳಿತು. ಇದನ್ನೂ ಓದಿ: ಅತ್ಯಾಚಾರ ಆರೋಪ – ಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಸಿಡ್ನಿಯಲ್ಲಿ ಬಂಧನ
Advertisement
Advertisement
ಈ ಸೋಲಿನೊಂದಿಗೆ ಆಫ್ರಿಕಾ ಮನೆ ದಾರಿ ಹಿಡಿಯಿತು. ಇತ್ತ ಭಾರತ (India) ಸೆಮಿಫೈನಲ್‍ಗೆ ಪ್ರವೇಶ ಪಡೆದರೆ, ಬಾಂಗ್ಲಾದೇಶ ಮತ್ತು ಪಾಕಿಸ್ತಾನ ತಂಡಕ್ಕೆ ಸೆಮಿಫೈನಲ್ ಬಾಗಿಲು ತೆರೆದುಕೊಂಡಿತು. ಹಾಗಾಗಿ ಪಾಕ್, ಬಾಂಗ್ಲಾ ನಡುವಿನ ಕಾದಾಟ ಕುತೂಹಲ ಮೂಡಿಸಿತ್ತು. ಈ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ ಪಾಕಿಸ್ತಾನ ತಂಡ ಬಾಂಗ್ಲಾದೇಶವನ್ನು ಬಗ್ಗುಬಡಿದು ಸೆಮಿಫೈನಲ್‍ಗೆ ಪ್ರವೇಶ ಪಡೆದಿದೆ. ಇದನ್ನೂ ಓದಿ: ಲಂಕಾ ವಿರುದ್ಧ ಜಯ – ಆಸ್ಟ್ರೇಲಿಯಾವನ್ನು ಹೊರದಬ್ಬಿ ಸೆಮಿಸ್‍ಗೆ ಎಂಟ್ರಿಕೊಟ್ಟ ಇಂಗ್ಲೆಂಡ್
Advertisement
ಬಾಂಗ್ಲಾದೇಶ ನೀಡಿದ 128 ರನ್‍ಗಳ ಅಲ್ಪಮೊತ್ತವನ್ನು ಪಾಕಿಸ್ತಾನ ತಂಡ 18.1 ಓವರ್‌ಗಳ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 128 ರನ್ ಸಿಡಿಸಿ ಇನ್ನೂ 11 ಎಸೆತ ಬಾಕಿ ಇರುವಂತೆ 5 ವಿಕೆಟ್‍ಗಳ ಅಂತರದ ಜಯ ಗಳಿಸಿ ಸೆಮಿಫೈನಲ್‍ಗೆ ಲಗ್ಗೆ ಇಟ್ಟಿದೆ.
ಇದೀಗ ಸೆಮಿಫೈನಲ್‍ಗೆ ಗ್ರೂಪ್ 1ರಿಂದ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ಪ್ರವೇಶ ಪಡೆದರೆ, ಗ್ರೂಪ್ 2ರಲ್ಲಿ ಭಾರತ ಹಾಗೂ ಪಾಕಿಸ್ತಾನ ಸೆಮಿಫೈನಲ್‍ಗೆ ತೇರ್ಗಡೆಗೊಂಡಿದೆ.