ಸೆಂಚುರಿಯನ್: ಇಲ್ಲಿ ನಡೆಯುತ್ತಿರುವ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲೇ ಪಾಕಿಸ್ತಾನ ಕ್ರಿಕೆಟ್ ತಂಡದ ವಿರುದ್ಧ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸುವ ಮೂಲಕ ದಕ್ಷಿಣ ಆಫ್ರಿಕಾ (South Africa) 3ನೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ (WTC Final) ಅಧಿಕೃತವಾಗಿ ಪ್ರವೇಶಿಸಿದೆ.
ಇನ್ನೂ 2ನೇ ತಂಡವಾಗಿ ಫೈನಲ್ ಪ್ರವೇಶಿಸಲು ಭಾರತ, ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದನ್ನೂ ಓದಿ: ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿ – ರೇಸ್‌ನಲ್ಲಿರುವ ನಾಲ್ವರ ಪೈಕಿ ಭಾರತದ ಅರ್ಷ್‌ದೀಪ್‌ಗೆ ಸ್ಥಾನ!
ಎರಡು ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ 148 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 8 ವಿಕೆಟ್ ಕಳೆದುಕೊಂಡು ರೋಚಕ ಜಯ ದಾಖಲಿಸಿದೆ. ಈ ಮೂಲಕ ಫೈನಲ್‌ಗೆ ನೇರವಾಗಿ ಪ್ರವೇಶ ಪಡೆಯಿತು.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಆವೃತ್ತಿಯಲ್ಲಿ ದಕ್ಷಿಣ ಆಫ್ರಿಕಾ ಈವರೆಗೆ 11 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಏಳು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಮೂರು ಪಂದ್ಯಗಳಲ್ಲಿ ಸೋತಿದೆ. ಒಂದು ಪಂದ್ಯ ಡ್ರಾ ಅಂತ್ಯವಾಗಿದೆ. ಇದನ್ನೂ ಓದಿ: ದಿನದ ಕೊನೇ ಓವರ್‌ನಲ್ಲಿ ನೋಬಾಲ್ ಎಡವಟ್ಟು – ರೋಚಕ ಘಟಕ್ಕೆ ಬಾಕ್ಸಿಂಗ್ ಡೇ ಟೆಸ್ಟ್; ಆಸೀಸ್‌ಗೆ 333 ರನ್ ಮುನ್ನಡೆ
ಇದೀಗ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಸರಾಸರಿ 66.67 ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಇನ್ನುಳಿದಂತೆ ಆಸ್ಟ್ರೇಲಿಯಾ 58.89 ಹಾಗೂ ಭಾರತ 55.88 ಸರಾಸರಿ ಅಂಕಗಳೊಂದಿಗೆ ಕ್ರಮವಾಗಿ 2 ಮತ್ತು 3ನೇ ಸ್ಥಾನಗಳಲ್ಲಿವೆ. ಟೀಂ ಇಂಡಿಯಾ ಡಬ್ಲ್ಯೂಟಿಸಿ ಫೈನಲ್ ಪಂದ್ಯವನ್ನು ಪ್ರವೇಶಿಸಲು ಆಸೀಸ್ ವಿರುದ್ಧ ಗೆಲುವು ನಿರ್ಣಾಯಕವಾಗಿದೆ.
ಮುಂದಿನ ವರ್ಷ ಇಂಗ್ಲೆಂಡ್‌ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಇದನ್ನೂ ಓದಿ: ಟೆಸ್ಟ್ ಕ್ರಿಕೆಟ್‌ನಲ್ಲಿ 200 ವಿಕೆಟ್ ಕಬಳಿಸಿ ಹೊಸ ದಾಖಲೆ ಬರೆದ ಬೂಮ್ರಾ
ದಕ್ಷಿಣ ಆಫ್ರಿಕಾ ಸಾಧನೆ
2023ರಲ್ಲಿ ಮಹಿಳಾ ಟಿ20 ವಿಶ್ವಕಪ್- ಫೈನಲ್.
2023ರಲ್ಲಿ ಪುರುಷರ ವಿಶ್ವಕಪ್ – ಸೆಮಿಫೈನಲ್.
2024ರಲ್ಲಿ ಪುರುಷರ T20 ವಿಶ್ವಕಪ್ – ಫೈನಲ್.
2024ರಲ್ಲಿ ಮಹಿಳಾ T20 ವಿಶ್ವಕಪ್ – ಫೈನಲ್.
2025ರಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ – ಫೈನಲ್