ನವದೆಹಲಿ: ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಆಗಮಿಸಿದ ವ್ಯಕ್ತಿಯೊಬ್ಬನಿಗೆ ಕೊರೊನಾ ದೃಢಪಟ್ಟಿದೆ.
ಇನ್ನೂ ಈತನಿಗೆ ಕೊರೊನಾ ಹೊಸ ತಳಿ ಓಮಿಕ್ರಾನ್ ಇದೆಯೋ ಇಲ್ಲವೋ ಎಂಬುವುದನ್ನು ಖಚಿತಪಡಿಸಿಕೊಳ್ಳಲು ವ್ಯಕ್ತಿಯ ಮಾದರಿಗಳನ್ನು ಜೀನೋಮ್ ಪರೀಕ್ಷೆಗೆ ಕಳುಹಿಸಲಾಗಿದೆ. ಸದ್ಯ
ಮುಂಬೈನ ಡೊಂಬಿವ್ಲಿಯ 32 ವರ್ಷದ ನಿವಾಸಿಯಾಗಿರುವ ಈತ ನವೆಂಬರ್ 24 ರಂದು ದಕ್ಷಿಣ ಆಫ್ರಿಕಾದಿಂದ ದುಬೈ ಮೂಲಕ ದೆಹಲಿಗೆ ತಲುಪಿ ನಂತರ ಮುಂಬೈಗೆ ಆಗಮಿಸಿದ್ದಾನೆ. ಸದ್ಯ ವ್ಯಕ್ತಿಯನ್ನು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಕ್ಯಾರಂಟೈನ್ ಗೊಳಿಸಿದ್ದಾರೆ. ಇದನ್ನೂ ಓದಿ: 9 ದೇಶಗಳಲ್ಲಿ ಓಮಿಕ್ರಾನ್ ಪತ್ತೆ
ಈ ಕುರಿತಂತೆ ಮಾತನಾಡಿರುವ ಕೆಡಿಎಂಸಿಯ ಆರೋಗ್ಯಾಧಿಕಾರಿ ಡಾ.ಪ್ರತಿಭಾ ಪಾನಪಾಟೀಲ ಅವರು, ರೋಗಿಯ ಸ್ಥಿತಿ ಸ್ಥಿರವಾಗಿದ್ದು, ರೋಗಿಯ ಸಹೋದರನಿಗೆ ಕೊರೊನಾ ನೆಗೆಟಿವ್ ಬಂದಿದೆ. ಸೋಮವಾರ ಆತನ ಕುಟುಂಬ ಸದಸ್ಯರನ್ನು ಸಹ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗುವುದಾಗಿ ತಿಳಿಸಿದ್ದಾರೆ.
ಶನಿವಾರ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ ಇಬ್ಬರು ಪ್ರಯಾಣಿಕರಿಗೆ ಕೊರೊನಾ ದೃಢಪಟ್ಟಿದ್ದು, ಅವರಿಗೆ ಕೊರೊನಾ ವೈರಸ್ನ ಡೆಲ್ಟಾ ಸೋಂಕಿಗೆ ಒಳಗಾಗಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಓಮಿಕ್ರಾನ್ ತಡೆಗೆ ರಾಜ್ಯದಲ್ಲಿ ಕಟ್ಟೆಚ್ಚರ – ಇಂದು ಸುಧಾಕರ್ ನೇತೃತ್ವದಲ್ಲಿ ಸಭೆ
ಕಳೆದ 15 ದಿನಗಳಲ್ಲಿ ದಕ್ಷಿಣ ಆಫ್ರಿಕಾದಿಂದ ಮುಂಬೈಗೆ 466 ಮಂದಿ ಆಗಮಿಸಿದ್ದು, ಈ ಪೈಕಿ 97 ಮಂದಿ ಮುಂಬೈ ನಿವಾಸಿಗಳಾಗಿದ್ದಾರೆ. ಆದರೆ ಈವರೆಗೂ ಯಾರಿಗೂ ಆರೋಗ್ಯದಲ್ಲಿ ಏರುಪೇರು ಕಂಡುಬಂದಿಲ್ಲ ಮತ್ತು ಈ ಜನರ ಮೇಲೆ ಸ್ಥಳೀಯ ಆಡಳಿತ ಹದ್ದಿನ ಕಣ್ಣು ಇಟ್ಟಿದೆ.