ವಿಶಾಖಪಟ್ಟಣ: ಟೀಂ ಇಂಡಿಯಾ (Team India) ವಿರುದ್ಧದ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ವಿಕೆಟ್ ಕೀಪರ್ ಬ್ಯಾಟರ್ ಕ್ವಿಂಟನ್ ಡಿ ಕಾಕ್ ಅವರ ಭರ್ಜರಿ ಶತಕದ ನೆರವಿನೊಂದಿಗೆ 47.5 ಓವರ್‌ಗಳ ಅಂತ್ಯಕ್ಕೆ 10 ವಿಕೆಟ್ ನಷ್ಟಕ್ಕೆ 270 ರನ್ ಗಳಿಸಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಅರ್ಶದೀಪ್ ಸಿಂಗ್ ಆಘಾತ ನೀಡಿದರು. ಆರಂಭಿಕ ಆಟಗಾರ ರಿಕಲ್ಪನ್ ಅವರು ಅರ್ಶದೀಪ್ ಎಸೆತದಲ್ಲಿ ರಾಹುಲ್‌ಗೆ ಕ್ಯಾಚ್ ನೀಡುವ ಮೂಲಕ ಡಕ್ ಔಟ್ ಆಗಿ ಪೆವಿಲಿಯನ್ ಸೇರಿಕೊಂಡರು.
ಅನುಭವಿ ಆಟಗಾರ ಕ್ವಿಂಟನ್ ಡಿ ಕಾಕ್ ಅವರು ಕೇವಲ 80 ಎಸೆತದಲ್ಲೇ ಶತಕ ಸಿಡಿಸಿದರು. 89 ಎಸೆತಗಳಲ್ಲಿ 8 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 106 ರನ್ ಗಳಿಸಿ ಪ್ರಸಿದ್ಧ್ ಕೃಷ್ಣ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.
ದಕ್ಷಿಣ ಆಫ್ರಿಕಾ ಪರ ನಾಯಕ ಬವುಮಾ 48 ರನ್ (67 ಎಸೆತ) ಗಳಿಸಿ ಜಡೇಜಗೆ ವಿಕೆಟ್ ಒಪ್ಪಿಸಿದರು. ಭಾರತದ ಪರ ಕುಲದೀಪ್ ಯಾದವ್ ಮತ್ತು ಪ್ರಸಿದ್ಧ ಕೃಷ್ಣ ತಲಾ 4 ವಿಕೆಟ್ ಪಡೆದರು. ಅರ್ಶದೀಪ್ ಸಿಂಗ್ ಹಾಗೂ ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದು ಮಿಂಚಿದರು.

