Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಫ್ರಿಕಾಗೆ ಆಘಾತ ನೀಡಿದ ಅರ್ಶ್‌ದೀಪ್, ಚಹಾರ್, ಶೈನ್‌ ಆದ ಸೂರ್ಯ, ರಾಹುಲ್- ಭಾರತಕ್ಕೆ 8 ವಿಕೆಟ್‌ಗಳ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಆಫ್ರಿಕಾಗೆ ಆಘಾತ ನೀಡಿದ ಅರ್ಶ್‌ದೀಪ್, ಚಹಾರ್, ಶೈನ್‌ ಆದ ಸೂರ್ಯ, ರಾಹುಲ್- ಭಾರತಕ್ಕೆ 8 ವಿಕೆಟ್‌ಗಳ ಜಯ

Cricket

ಆಫ್ರಿಕಾಗೆ ಆಘಾತ ನೀಡಿದ ಅರ್ಶ್‌ದೀಪ್, ಚಹಾರ್, ಶೈನ್‌ ಆದ ಸೂರ್ಯ, ರಾಹುಲ್- ಭಾರತಕ್ಕೆ 8 ವಿಕೆಟ್‌ಗಳ ಜಯ

Public TV
Last updated: September 28, 2022 10:36 pm
Public TV
Share
4 Min Read
IND VS SA 5
SHARE

ತಿರುವನಂತಪುರಂ: ಅರ್ಶ್‌ದೀಪ್‌ ಸಿಂಗ್‌ (Arshdeep Singh), ದೀಪಕ್‌ ಚಹಾರ್‌ (Deepak Chahar) ಮಾರಕ ಬೌಲಿಂಗ್‌ ದಾಳಿ ಹಾಗೂ ಸೂರ್ಯಕುಮಾರ್‌ ಯಾದವ್‌ (Suryakumar Yadav), ಕೆ.ಎಲ್‌.ರಾಹುಲ್‌ (KL Rahul) ಅವರ ಜವಾಬ್ದಾರಿಯುತ ಬ್ಯಾಟಿಂಗ್‌ ನೆರವಿನಿಂದ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯದಲ್ಲೇ  ಭಾರತ ಭರ್ಜರಿ ಜಯ ಸಾಧಿಸಿದೆ.

ತಿರುವನಂತಪುರಂನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ (South Africa) ವಿರುದ್ಧ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾದ (Team India) ಬೌಲಿಂಗ್ ಪಡೆ ಅಮೋಘ ಪ್ರದರ್ಶನ ನೀಡುವ ಮೂಲಕ ಹರಿಣ ಪಡೆ ಆಘಾತ ಅನುಭವಿಸಿದೆ.

5 wickets summed up in 11 seconds. Watch it here ????????
Don’t miss the LIVE coverage of the #INDvSA match on @StarSportsIndia pic.twitter.com/jYeogZoqfD

— BCCI (@BCCI) September 28, 2022

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 108 ಅಲ್ಪಮೊತ್ತದ ರನ್‌ಗಳಿಸಿತು. ಈ ಗುರಿ ಬೆನ್ನತ್ತಿದ ಟೀಂ ಇಂಡಿಯಾ 16.4 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 110 ರನ್‌ ಸಿಡಿಸುವ ಮೂಲಕ ಗೆದ್ದು ಬೀಗಿತು.

ನಿಧಾನಗತಿಯಲ್ಲೇ ಬ್ಯಾಟಿಂಗ್‌ ಆರಂಭಿಸಿದ ಟೀಂ ಇಂಡಿಯಾಕ್ಕೂ ಆರಂಭದಲ್ಲಿ ಆಘಾತ ಎದುರಾಗಿತ್ತು. ಪವರ್‌ಪ್ಲೇ ಮುಗಿಯುವಷ್ಟರಲ್ಲೇ ಪ್ರಮುಖ ಬ್ಯಾಟರ್‌ಗಳನ್ನು ಟೀಂ ಇಂಡಿಯಾ ಕಳೆದುಕೊಂಡಿತ್ತು. ಆಸ್ಟ್ರೇಲಿಯಾ ವಿರುದ್ಧ ಸ್ಫೋಟಕ ಬ್ಯಾಟಿಂಗ್‌ ನಡೆಸಿದ್ದ ನಾಯಕ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಔಟಾದರು. 2 ಎಸೆತ ಎದುರಿಸಿದ ರೋಹಿತ್‌ ಶರ್ಮಾ (Rohit Sharma) ಡಕೌಟ್‌ ಆದರೆ 9 ಎಸೆತ ಎದುರಿಸಿದ ರನ್‌ ಮಿಷಿನ್‌ ಕೊಹ್ಲಿ 3 ರನ್‌ಗಳಿಗೆ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿದರು.

IN VS SA

ಈ ನಡುವೆ ಮೂರನೇ ಕ್ರಮಾಂಕದಲ್ಲಿ ಬಂದ ಸೂರ್ಯಕುಮಾರ್‌ ಯಾದವ್‌ (Suryakumar Yadav) ಹಾಗೂ ಮತ್ತೊಬ್ಬ ಆರಂಭಿಕ ಕೆಎಲ್‌ ರಾಹುಲ್‌ (KL Rahul) ಜವಾಬ್ದಾರಿಯುತ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. ಭರ್ಜರಿ ಸಿಕ್ಸ್‌ ಫೋರ್‌ಗಳ ಮೂಲಕ ರನ್‌ ಪೇರಿಸುತ್ತಾ ಟೀಂ ಇಂಡಿಯಾವನ್ನು ಗೆಲುವಿನ ಹಾದಿಗೆ ಕೊಂಡೊಯ್ದರು.

ಸ್ಫೋಟಕ ಬ್ಯಾಟಿಂಗ್‌ ನಡೆಸಿದ ಸೂರ್ಯಕುಮಾರ್‌ ಯಾದವ್‌ 33 ಎಸೆತಗಳಲ್ಲಿ 3 ಸಿಕ್ಸರ್‌, 5 ಬೌಂಡರಿಗಳ ಮೂಲಕ ಸ್ಫೋಟಕ 50 ರನ್‌ ಸಿಡಿಸಿ ಮಿಂಚಿದರೆ, ಉಪನಾಯಕ ಜವಾಬ್ದಾರಿಯುತ ಆಟವಾಡಿದ ಕೆಎಲ್‌ ರಾಹುಲ್‌ ಸಹ 56 ಎಸೆತಗಳಲ್ಲಿ 51 ರನ್‌ (4 ಸಿಕ್ಸರ್‌, 2 ಬೌಂಡರಿ) ಸಿಡಿಸುವ ಮೂಲಕ ಮಿಂಚಿದರು.

Team India 2 2

ಹರ್ಷ ತಂದ ಅರ್ಶ್‌ದೀಪ್:
ಏಷ್ಯಾಕಪ್‌ನ ಇಂಡೋ ಪಾಕ್‌ ಕದನದಲ್ಲಿ ಭಾರೀ ಟೀಕೆಗೆ ಗುರಿಯಾಗಿದ್ದ ಅರ್ಶ್‌ದೀಪ್ ಸಿಂಗ್‌ ದಕ್ಷಿಣ ಆಫ್ರಿಕಾದ ವಿರುದ್ಧದ ಮೊದಲ ಪಂದ್ಯದಲ್ಲೇ 3 ವಿಕೆಟ್‌ಗಳನ್ನು ಕಬಳಿಸಿ ಗಮನ ಸೆಳೆದರು. ಇನ್ನುಳಿದಂತೆ 4 ಓವರ್‌ಗಳಲ್ಲಿ 24 ರನ್‌ ನೀಡಿದ ದೀಪಕ್‌ ಚಹಾರ್‌ 2 ವಿಕೆಟ್‌, ಹರ್ಷಕ್‌ ಪಟೇಲ್‌ 2 ವಿಕೆಟ್‌ ಹಾಗೂ ಅಕ್ಷರ್‌ ಪಟೇಲ್‌ 1 ವಿಕೆಟ್‌ ಪಡೆದು ಟೀಂ ಇಂಡಿಯಾ ಗೆಲುವಿಗೆ ಕಾರಣರಾದರು.

IND VS SA 6

ದಕ್ಷಿಣ ಆಫ್ರಿಕಾಗೆ ಆರಂಭಿಕ ಆಘಾತ:
ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ ತಂಡ ಮೊದಲ 2.3 ಓವರ್‌ಗಳಲ್ಲಿಯೇ ಅರ್ಧದಷ್ಟು ಆಟಗಾರರನ್ನು ಕಳೆದುಕೊಳ್ಳುವ ಮೂಲಕ ದೊಡ್ಡ ಆಘಾತಕ್ಕೆ ಒಳಗಾಯಿತು. ಟೀಂ ಇಂಡಿಯಾ ಬೌಲರ್‌ಗಳಾದ ಅರ್ಶ್‌ದೀಪ್ ಸಿಂಗ್‌ ಹಾಗೂ ದೀಪಕ್ ಚಾಹರ್ ಆರಂಭದಲ್ಲಿಯೇ ಪ್ರಮುಖ ಬ್ಯಾಟರ್‌ಗಳನ್ನು ಪೆವಿಲಿಯನ್‌ಗೆ ಅಟ್ಟುವಲ್ಲಿ ಯಶಸ್ವಿಯಾದರು. ಇದರಲ್ಲಿ ಎರಡು ವಿಕೆಟ್‌ಗಳನ್ನು ದೀಪಕ್ ಚಾಹರ್ ಪಡೆದುಕೊಂಡಿದ್ದರೆ ಮೂರು ವಿಕೆಟ್‌ಗಳು ಅರ್ಶ್‌ದೀಪ್ ಸಿಂಗ್ ಪಾಲಾದವು.

Team India 3 1

ಕಳೆದ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದ ಅರ್ಶ್‌ದೀಪ್ ಸಿಂಗ್ ಈ ಪಂದ್ಯದಲ್ಲಿ ತಂಡಕ್ಕೆ ಅದ್ಭುತವಾಗಿ ಕಮ್‌ಬ್ಯಾಕ್ ಮಾಡಿದ್ದಾರೆ. ತಮ್ಮ ಮೊದಲ ಓವರ್‌ನಲ್ಲಿಯೇ ಅತ್ಯಂತ ಅಪಾಯಕಾರಿಯಾಗಿ ಕಾಣಿಸಿದ ಅರ್ಶ್‌ದೀಪ್ ಸಿಂಗ್ ವಿಕೆಟ್‌ಗಳ ಮೇಲೆ ವಿಕೆಟ್ ಪಡೆದುಕೊಂಡರು. ಈ ಒಂದು ಓವರ್‌ನಲ್ಲಿಯೇ ಅರ್ಶ್‌ದೀಪ್ ಸಿಂಗ್ ಮೂರು ವಿಕೆಟ್ ಪಡೆದು ಗಮನ ಸೆಳೆದರು.

ಮೊದಲಿಗೆ 1 ರನ್‌ಗಳಿಸಿದ್ದ ಕ್ವಿಂಟನ್ ಡಿಕಾಕ್ (Quinton de Kock) ಅವರನ್ನು ಬೌಲ್ಡ್ ಮಾಡಿದ ಅರ್ಷ್‌ದೀಪ್‌ ಸಿಂಗ್ ನಂತರ ರಿಲೀ ರೊಸ್ಸೋ ಅವರನ್ನು ಪೆವಿಲಿಯನ್‌ಗೆ ಅಟ್ಟಿದರು. ತಮ್ಮ ಮುಂದಿನ ಎಸೆತದಲ್ಲಿಯೇ ಡೇವಿಡ್ ಮಿಲ್ಲರ್‌ ಅನ್ನು ಡಕೌಟ್‌ ಮಾಡಿ ಪೆವಿಲಿಯನ್‌ಗೆ ದಾರಿ ತೋರಿಸಿದರು. ಈ ಮೂಲಕ ದಕ್ಷಿಣ ಆಫ್ರಿಕಾ ತಂಡಕ್ಕೆ ಆಘಾತ ನೀಡಿದರು.

Team India 3 2

ಆರಂಭಿಕ ಆಘಾತ ಅನುಭವಿಸಿ ಕನಿಷ್ಠ ಮೊತ್ತಕ್ಕೆ ಆಲೌಟ್ ಆಗಬೇಕಿದ್ದ ದಕ್ಷಿಣ ಆಫ್ರಿಕಾ ಪರವಾಗಿ ಮಾರ್ಕ್ರಮ್, ಪಾರ್ನೆಲ್ ಹಾಗೂ ಅಂತಿಮ ಹಂತದಲ್ಲಿ ಕೇಶವ್ ಮಹಾರಾಜ್ ಜವಾಬ್ದಾರಿಯುತ ಪ್ರದರ್ಶನ ನೀಡಿದರು. ಹೀಗಾಗಿ ದಕ್ಷಿಣ ಆಫ್ರಿಕಾ ತಂಡ ನಿಗದಿತ 20 ಓವರ್‌ಗಳ ಆಟವನ್ನು ಪೂರ್ಣಗೊಳಿಸಿದ್ದು 106 ರನ್‌ಗಳನ್ನು ಗಳಿಸಲು ಶಕ್ತವಾಯಿತು. ಕೇಶವ್ ಮಹಾರಾಜ್ 35 ಎಸೆತಗಳಲ್ಲಿ 41 ರನ್‌ (2 ಸಿಕ್ಸರ್‌, 5 ಬೌಂಡರಿ) ಸಿಡಿಸಿದರೆ, ಜೊತೆಯಲ್ಲಿ ಸಾಥ್‌ ನೀಡಿದ ಪಾರ್ನೆಲ್‌ 37 ಎಸೆತಗಳಲ್ಲಿ 1 ಸಿಕ್ಸರ್‌, 1 ಬೌಂಡರಿಯೊಂದಿಗೆ 24 ರನ್‌ಗಳನ್ನಷ್ಟೇ ಗಳಿಸಿದರು. ಮಾಕ್ರಮ್‌ 25 ರನ್‌ಗಳಿಸಿದರು. ಉಳಿದ ಯಾವೊಬ್ಬ ಆಟಗಾರರು ಸ್ಥಿರವಾಗಿ ನಿಲ್ಲದ ಕಾರಣ ದಕ್ಷಿಣ ಆಫ್ರಿಕಾ ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾ ಎದುರು ಸೋಲು ಒಪ್ಪಿಕೊಳ್ಳಬೇಕಾಯಿತು.

ದಕ್ಷಿಣ ಆಫ್ರಿಕಾ ವಿರುದ್ಧ ಕಗಿಸೋ ರಬಾಡ ಹಾಗೂ ಅನ್ರಿಚ್ ನಾರ್ಟ್ಜೆ ತಲಾ ಒಂದೊಂದು ವಿಕೆಟ್‌ ಪಡೆದರು.

Live Tv
[brid partner=56869869 player=32851 video=960834 autoplay=true]

TAGGED:Arshdeep SinghbcciDeepak ChaharKL RahulQuinton De KockRohit SharmaSuryakumar Yadavt20Team indiavirat kohliಅರ್ಶ್‌ದೀಪ್‌ಕ್ವಿಂಟನ್ ಡಿಕಾಕ್ಟೀಂ ಇಂಡಿಯಾದಕ್ಷಿಣ ಆಫ್ರಿಕಾಬಿಸಿಸಿಐರೋಹಿತ್ ಶರ್ಮಾಸೂರ್ಯಕುಮಾರ್ ಯಾದವ್
Share This Article
Facebook Whatsapp Whatsapp Telegram

Cinema news

rakshitha shetty bigg boss
ಟಾಯ್ಲೆಟ್‌ನಲ್ಲಿ ಗಂಟೆಗಟ್ಟಲೆ ನಿದ್ರೆ ಮಾಡ್ತಾರೆ ರಕ್ಷಿತಾ – ಬಿಗ್‌ ಬಾಸ್‌ ಎಚ್ಚರಿಸಿದ್ದು ಹೇಗೆ?
Cinema Latest Main Post TV Shows
Ranveer Singh 1
ಕ್ಷಮೆ ಕೇಳಿದರೂ ರಣವೀರ್‌ಗೆ ತಪ್ಪದ ಸಂಕಷ್ಟ
Bollywood Cinema Latest Sandalwood
Gilli Nata Jhanvi
ನನಗೆ ಅಶ್ವಿನಿ ಗೆಲ್ಲಬೇಕು..ಆದರೆ ಗೆಲ್ಲೋದು ಗಿಲ್ಲಿ – ಜಾನ್ವಿ
Latest Sandalwood Top Stories TV Shows
Sangeeth Sagar
ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಂಗೀತ್‌ ಸಾಗರ್‌ ಸಾವು
Cinema Latest Main Post Sandalwood Shivamogga

You Might Also Like

Mandya 1
Latest

ನಾಳೆಯಿಂದ ಮಂಡ್ಯದಲ್ಲಿ ಅದ್ಧೂರಿ ಕೃಷಿ ಮೇಳ – ಸಿಎಂ ಸಿದ್ದರಾಮಯ್ಯರಿಂದ ಚಾಲನೆ, 5 ಲಕ್ಷ ಜನ ಸೇರುವ ನಿರೀಕ್ಷೆ

Public TV
By Public TV
2 minutes ago
IndiGo Flight
Latest

ಇಂಡಿಗೋಗೆ ಮಾತ್ರ ಯಾಕೆ ಸಮಸ್ಯೆ? ಹೊಸ ನಿಯಮಗಳು ಏನು?

Public TV
By Public TV
3 minutes ago
madinah hyderabad indigo flight diverted to ahmedabad over bomb threat
Crime

ಮದೀನಾ, ಹೈದರಾಬಾದ್ ಇಂಡಿಗೋ ವಿಮಾನಕ್ಕೆ ಬಾಂಬ್‌ ಬೆದರಿಕೆ – ಅಹಮದಾಬಾದ್‌ನಲ್ಲಿ ತುರ್ತು ಭೂಸ್ಪರ್ಶ

Public TV
By Public TV
6 minutes ago
K Sudhakar
Karnataka

ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಸಿಬ್ಬಂದಿಯ ಸಮಸ್ಯೆಗಳ ಬಗ್ಗೆ ಕೇಂದ್ರದ ಮುಂದಿಟ್ಟ ಕೆ.ಸುಧಾಕರ್

Public TV
By Public TV
23 minutes ago
MB Patil Vision Document Meeting
Bengaluru City

ಮೊಬೈಲ್, ಎಲೆಕ್ಟ್ರಾನಿಕ್ಸ್ ಬಿಡಿಭಾಗ ತಯಾರಿಕೆಗೆ ವಿಷನ್ ಡಾಕ್ಯುಮೆಂಟ್: ಎಂ.ಬಿ ಪಾಟೀಲ್

Public TV
By Public TV
38 minutes ago
BJP MPs
Latest

ಸಂಸ್ಕರಿಸಿದ ಆಹಾರ ಸೇವನೆಯಿಂದಾಗುವ ಅಪಾಯ, ರೈತರ ಸಮಸ್ಯೆಗಳ ಬಗ್ಗೆ ದನಿ ಎತ್ತಿದ ರಾಜ್ಯ ಬಿಜೆಪಿ ಸಂಸದರು

Public TV
By Public TV
39 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?