ಮುಂಬೈ: ಡೇವಿಡ್ ಮಿಲ್ಲರ್, ರಾಸ್ಸಿ ವ್ಯಾನ್‌ಡೆರ್ ಡುಸ್ಸೆನ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ವಿರುದ್ಧ ನಡೆದ T20 ಸರಣಿಯ ಮೊದಲ ಪಂದ್ಯದಲ್ಲೇ ದಕ್ಷಿಣ ಆಫ್ರಿಕಾ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.
ದೆಹಲಿಯ ಅರುಣ್ ಜೇಟ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪ್ರಥಮ ಟಿ20 ಪಂದ್ಯದಲ್ಲಿ ರಿಷಭ್ ಪಂತ್ ನಾಯಕತ್ವದಲ್ಲಿ ಕಣಕ್ಕಿಳಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 211 ರನ್ ಗಳಿಸಿ 212 ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿತು. ಈ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡವು 19.1 ಓವರ್‌ನಲ್ಲೇ 3 ವಿಕೆಟ್‌ಗಳ ನಷ್ಟಕ್ಕೆ 212 ರನ್‌ಗಳಿಸಿ ಗೆಲುವು ದಾಖಲಿಸಿತು.
Advertisement
Advertisement
211 ರನ್‌ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿತು. ಸ್ಪೋಟಕ ಬ್ಯಾಟ್ಸ್‌ಮನ್ ಕ್ವಿಂಟನ್ ಡಿಕಾಕ್ 18 ಎಸೆತಗಳಲ್ಲಿ 3 ಬೌಂಡರಿಯೊಂದಿಗೆ 22 ರನ್‌ಗಳಿಸಿದರೆ, ತೆಂಬ ಬವುಮಾ 10 ರನ್‌ಗಳಿಸಿದರು. ಈ ಬೆನ್ನಲ್ಲೇ 3ನೇ ಕ್ರಮಾಂಕದಲ್ಲಿ ಕ್ರೀಸ್‌ಗಳಿದ ಡ್ವೇಯ್ನ್ ಪ್ರಿಟೋರಿಯಸ್ 29 ರನ್‌ಗಳಿಸಿ ನಿರ್ಗಮಿಸಿದರು. ಪವರ್ ಪ್ಲೇ ಮುಗಿಯುವ ವೇಳೆಗೆ 3 ವಿಕೆಟ್‌ಗಳನ್ನು ಕಳೆದುಕೊಂಡ ದಕ್ಷಿಣ ಆಫ್ರಿಕಾ ಟೀಂ ಸರಣಿ ಸೋಲುವುದು ಖಚಿತವೆಂದುಕೊಂಡಿತ್ತು.
Advertisement
ಈ ವೇಳೆ ತಂಡಕ್ಕೆ ಆಸರೆಯಾಗಿ ನಿಂತವರು ಮಿಲ್ಲರ್ ಹಾಗೂ ಡುಸ್ಸೆನ್. ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡದಲ್ಲಿ ಅಬ್ಬರಿಸಿದ ಡೇವಿಡ್ ಮಿಲ್ಲರ್ ಹಾಗೂ ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್ ತಮ್ಮ ಆಕರ್ಷಕ ಅರ್ಧಶತಕಗಳ ನೆರವಿನಿಂದ ತಂಡವನ್ನು ಗೆಲುವಿನ ದಡ ಸೇರಿಸಿದರು. ಡೇವಿಡ್ ಮಿಲ್ಲರ್ 31 ಎಸೆತಗಳಲ್ಲಿ 64 ರನ್ (5 ಸಿಕ್ಸರ್, 4 ಬೌಂಡರಿ) ಚಚ್ಚಿದರೆ, ಡುಸ್ಸೆನ್ ಕೇವಲ 46 ಎಸೆತಗಳಲ್ಲಿ 75 ರನ್ (5 ಸಿಕ್ಸರ್, 7 ಬೌಂಡರಿ) ಸಿಡಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಮಿಲ್ಲರ್, ಡುಸ್ಸೆನ್ ರ 135 (76 ಎಸೆತ) ರನ್‌ಗಳ ಜೊತೆಯಾಟ ತಂಡಕ್ಕೆ ಮೊದಲ ಪಂದ್ಯದಲ್ಲೇ ಯಶಸ್ಸು ತಂಡುಕೊಟ್ಟಿತು.
Advertisement
ಮುಗ್ಗರಿಸಿದ ಬೌಲಿಂಗ್ ಪಡೆ:
ಟೀಂ ಇಂಡಿಯಾದ ಆಟಗಾರರನ್ನು ಕಟ್ಟಿಹಾಕುವಲ್ಲಿ ದಕ್ಷಿಣ ಆಫ್ರಿಕಾ ಬೌಲರ್‌ಗಳು ವಿಫಲವಾದರು. ಕೇಶವ್ ಮಹರಾಜ್, ಅನ್ರಿಚ್ ನಾರ್ಕಿಯಾ, ವೇಯ್ನ್ ಪಾರ್ನೆಲ್ ಮತ್ತು ಪ್ರಿಟೋರಿಯಸ್ ತಲಾ ಒಂದೊಂದು ವಿಕೆಟ್ ಪಡೆದರೂ ರನ್‌ಗಳನ್ನು ತಡೆಯುವಲ್ಲಿ ವಿಫಲರಾದರು.
ರನ್ ಏರಿದ್ದು ಹೇಗೆ?
27 ಎಸೆತ 50 ರನ್
71 ಎಸೆತ 100 ರನ್
93 ಎಸೆತ 150 ರನ್
115 ಎಸೆತ 212 ರನ್
ಟೀಂ ಇಂಡಿಯಾ ಬೃಹತ್ ಮೊತ್ತದ ಗುರಿ:
ಟೀಂ ಇಂಡಿಯಾ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಇಶಾನ್ ಕಿಶನ್ ಹಾಗೂ ಋತುರಾಜ್ ಗಾಯಕ್ವಾಡ್ ತಂಡಕ್ಕೆ ಶುಭಾರಂಭ ನೀಡಿದರು. ಪವರ್ ಪ್ಲೇ ಮುಗಿಯುವ ವೇಳೆಗೆ ಟೀಂ ಇಂಡಿಯಾ 57 ರನ್‌ಗಳ ಜೊತೆಯಾಟವಾಡಿತು. ಈ ವೇಳೆ ಋತುರಾಜ್ ಗಾಯಕ್ವಾಡ್ 15 ಎಸೆತಗಳಲ್ಲಿ 3 ಸಿಕ್ಸರ್‌ನೊಂದಿಗೆ 23 ರನ್ ಗಳಿಸಿ ಔಟಾದರು. ಆ ನಂತರವೂ ತಮ್ಮ ಬ್ಯಾಟಿಂಗ್ ಅಬ್ಬರ ಮುಂದುವರಿಸಿದ ಇಶಾನ್ ಕಿಶನ್ ಕೇವಲ 48 ಎಸೆತಗಳಲ್ಲಿ 76 ರನ್ (3 ಸಿಕ್ಸರ್, 11 ಬೌಂಡರಿ) ಚಚ್ಚಿದರು. 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೇಯಸ್ ಅಯ್ಯರ್ 27 ಎಸೆತಗಳಲ್ಲಿ 36 ರನ್ ಕಲೆಹಾಕಿದರೆ, ನಾಯಕ ರಿಷಭ್ ಪಂತ್ 16 ಎಸೆತಗಳಲ್ಲಿ 29 ರನ್ ಬಾರಿಸಿದರು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಹಾರ್ದಿಕ್ ಪಾಂಡ್ಯ ಕೇವಲ 12 ಎಸೆತಗಳಲ್ಲಿ ಭರ್ಜರಿ 31 ರನ್ ಬಾರಿಸಿ ಅಜೇಯರಾಗುಳಿದರೆ ಕೊನೆಯ ಓವರ್‌ನಲ್ಲಿ ಕ್ರೀಸ್‌ಗಿಳಿದ ದಿನೇಶ್ ಕಾರ್ತಿಕ್ 2 ಎಸೆತಗಳಲ್ಲಿ 1 ರನ್‌ಗಳಿಸಿ ಅಜೇಯರಾಗುಳಿದರು.
ಕಿಶನ್ ಅರ್ಧ ಶತಕ ವ್ಯರ್ಥ: 15ನೇ ಐಪಿಎಲ್ ಆವೃತ್ತಿಯಲ್ಲಿ ಅತ್ಯಧಿಕ ಮೊತ್ತಕ್ಕೆ ಖರೀದಿಯಾಗಿದ್ದ ಇಶಾನ್ ಕಿಶನ್ ಕಳಪೆ ಬ್ಯಾಟಿಂಗ್ ಪ್ರದರ್ಶನದಿಂದ ನಿರಾಶೆ ಮೂಡಿಸಿದ್ದರು. ಟಿ20 ಯಲ್ಲೂ ಕೆ.ಎಲ್.ರಾಹುಲ್ ಅನುಪಸ್ಥಿತಿಯಲ್ಲಿ ಅವರು ಯಾವ ರೀತಿ ಪ್ರದರ್ಶನ ನೀಡಲಿದ್ದಾರೆ ಎಂಬುದು ಎಲ್ಲರಲ್ಲೂ ಆತಂಕವಾಗಿತ್ತು. ಆದರೆ ನಿರಾತಂಕವಾಗಿ ಅಬ್ಬರಿಸಿದ ಕಿಶನ್ 37 ಎಸೆತಗಳಲ್ಲಿ ಅಮೋಘ ಅರ್ಧ ಶತಕ ಸಿಡಿಸಿದ್ದರು. ನಂತರವೂ ಅಬ್ಬರಿಸಿ 11 ಬೌಂಡರಿ, 3 ಸಿಕ್ಸರ್‌ಗಳೊಂದಿಗೆ 48 ಎಸೆತಗಳಲ್ಲಿ 76 ರನ್ ಪೇರಿಸಿದ್ದರು. ಆದರೂ ಟೀಂ ಇಂಡಿಯಾ ಗೆಲುವು ಸಾಧಿಸುವಲ್ಲಿ ವಿಫಲವಾಯಿತು.
3ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಶ್ರೇಯಸ್ ಅಯ್ಯರ್ ಔಟಾದ ಬಳಿಕ 4ನೇ ವಿಕೆಟ್‌ಗೆ ಜೊತೆಯಾದ ನಾಯಕ ರಿಷಭ್ ಪಂತ್ ಮತ್ತು ಉಪನಾಯಕ ಹಾರ್ದಿಕ್ ಪಾಂಡ್ಯ 18 ಎಸೆತಗಳಲ್ಲಿ 46 ರನ್‌ಗಳ ಅಬ್ಬರದ ಜೊತೆಯಾಟ ಆಡಿದರು. ಇಬ್ಬರ ಸಾಂಘಿಕ ಬ್ಯಾಟಿಂಗ್ ಪ್ರದರ್ಶನದಿಂದ ಟೀಂ ಇಂಡಿಯಾ 16.1 ಓವರ್‌ಗಳಲ್ಲಿ 156 ರಲ್ಲಿದ್ದ ತಂಡದ ಮೊತ್ತ 19.1 ಓವರ್‌ಗಳಲ್ಲಿ 202 ರನ್ ಮುಟ್ಟುವಲ್ಲಿ ಯಶಸ್ವಿಯಾಯಿತು.
ರಿಷಭ್ ಪಂತ್ 2 ಬೌಂಡರಿ ಮತ್ತು 2 ಸಿಕ್ಸರ್ ಸಹಿತ 16 ಎಸೆತಗಳಲ್ಲಿ 29 ರನ್ ಕಲೆಹಾಕಿದರೆ, 3 ಸಿಕ್ಸರ್ ಮತ್ತು 2 ಬೌಂಡರಿ ಬಾರಿಸಿದ ಹಾರ್ದಿಕ್ ಪಾಂಡ್ಯ 12 ಎಸೆತಗಳಲ್ಲಿ ಅಜೇಯ 31 ರನ್ ಚಚ್ಚಿದರು.
ರನ್ ಏರಿದ್ದು ಹೇಗೆ?
35 ಎಸೆತ 50 ರನ್
90 ಎಸೆತ 150 ಎನ್
114 ಎಸೆತ 200 ರನ್
120 ಎಸೆತ 211 ರನ್