ತವರಲ್ಲಿ ಹರಿಣರ ದರ್ಬಾರ್‌ – ಭಾರತದ ವಿರುದ್ಧ ದಕ್ಷಿಣ ಆಫ್ರಿಕಾಗೆ 3 ವಿಕೆಟ್‌ಗಳ ರೋಚಕ ಜಯ

Public TV
2 Min Read
Tristan Stubbs

ಗ್ಕೆಬರ್ಹಾ: ಟ್ರಿಸ್ಟನ್‌ ಸ್ಟಬ್ಸ್‌ (Tristan Stubbs) ಅಮೋಘ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡ ಟೀಂ ಇಂಡಿಯಾ (Team India) ವಿರುದ್ಧ 3 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯನ್ನು 1-1ರಲ್ಲಿ ಸಮಬಲ ಸಾಧಿಸಿದೆ.

Varun Chakravarthy

ಟರ್ನಿಂಗ್‌ ಸಿಕ್ಕಿದ್ದೆಲ್ಲಿ?
ಟೀಂ ಇಂಡಿಯಾ ಸ್ಪಿನ್ನರ್‌ ವರುಣ್‌ ಚಕ್ರವರ್ತಿ (Varun Chakravarthy) 13ನೇ ಓವರ್‌ನಲ್ಲಿ ಬೌಲಿಂಗ್‌ನಲ್ಲಿದ್ದರು. ಮೊದಲ ಎರಡು ಎಸೆತಗಳಲ್ಲಿ ಹೆನ್ರಿಚ್‌ ಕ್ಲಾಸೆನ್‌, ಡೇವಿಡ್‌ ಮಿಲ್ಲರ್‌ ದೈತ್ಯ ಆಟಗಾರರಿಗೆ ಪೆವಿಲಿಯನ್‌ ದಾರಿ ತೋರಿದರು. ಇದರಿಂದ ಭಾರತದ ಗೆಲುವು ಸುಲಭ ಎಂದೇ ಭಾವಿಸಲಾಗಿತ್ತು. ಆದ್ರೆ ಕೊನೇ ಮೂರು ಓವರ್‌ಗಳಲ್ಲಿ ಟ್ರಿಸ್ಟನ್‌ ಸ್ಟಬ್ಸ್‌ ಹಾಗೂ ಜೆರಾಲ್ಡ್‌ ಕೋಟ್ಜಿ ಅವರ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನವು ಗೆಲುವು ತಂದುಕೊಡುವಲ್ಲಿ ಯಶಸ್ವಿಯಾಯಿತು. ಈ ಜೋಡಿ 17,18,19ನೇ ಓವರ್‌ನಲ್ಲೇ ಕ್ರಮವಾಗಿ 12, 12, 16 ರನ್‌ ಚಚ್ಚಿದ್ದರ ಪರಿಣಾಮ ಗೆಲುವು ದಕ್ಷಿಣ ಆಫ್ರಿಕಾದ ಪಾಲಾಯಿತು.

IND vs SA

ಮೊದಲು ಬ್ಯಾಟಿಂಗ್‌ ಮಾಡಿದ್ದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 126 ರನ್‌ ಗಳಿಸಿತ್ತು. ಈ ಗುರಿ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ 19 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 128 ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

ದಕ್ಷಿಣ ಆಫ್ರಿಕಾ ಪರ ಟ್ರಿಸ್ಟನ್‌ ಸ್ಟಬ್ಸ್‌ ಅಜೇಯ 47 ರನ್‌, ರೀಝಾ ಹೆಂಡ್ರಿಕ್ಸ್‌ 24 ರನ್‌, ಜೆರಾಲ್ಡ್‌ ಕೋಟ್ಜಿ ಅಜೇಯ 19 ರನ್‌, ರಿಯಾನ್‌ ರಿಕ್ಲೆಂಟನ್‌ 13 ರನ್‌ ಗಳಿಸಿದರು.

IND vs SA 2

ಸೋತ ಪಂದ್ಯದಲ್ಲಿ ಮಿಂಚಿದ ವರುಣ್‌:
ಭಾರತ ಸೋತ ದಕ್ಷಿಣ ಆಫ್ರಿಕಾ ವಿರುದ್ಧ ಸೋತರು ಸ್ಪಿನ್‌ ಮಾಂತ್ರಿಕ ವರುಣ್‌ ಚಕ್ರವರ್ತಿ ಪ್ರಮುಖ ವಿಕೆಟ್‌ ಕಿತ್ತು ಸೈ ಎನಿಸಿಕೊಂಡರು. 4 ಓವರ್‌ಗಳಲ್ಲಿ ಕೇವಲ 17 ರನ್‌ ಬಿಟ್ಟುಕೊಟ್ಟು 5 ವಿಕೆಟ್‌ ಪಡೆದು ಮಿಂಚಿದರು. ಅರ್ಷ್‌ದೀಪ್‌ ಸಿಂಗ್‌, ರವಿ ಬಿಷ್ಣೋಯಿ ತಲಾ ಒಂದೊಂದು ವಿಕೆಟ್‌ ಪಡೆದರು.

ಇನ್ನೂ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಟೀಂ ಇಂಡಿಯಾ, 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 126 ರನ್‌ ಗಳಿಸಿ, ದಕ್ಷಿಣ ಆಫ್ರಿಕಾಗೆ 125 ರನ್‌ಗಳ ಗುರಿ ನೀಡಿತ್ತು. ಆರಂಭದಲ್ಲೇ ವಿಕೆಟ್‌ ಕಳೆದಕೊಂಡು ಸಂಕಷ್ಟಕ್ಕೀಡಾದ ಟೀಂ ಇಂಡಿಯಾಕ್ಕೆ ಅಕ್ಷರ್‌ ಪಟೇಲ್‌ ನೆರವಾಗಿದ್ದರು. 21 ಎಸೆತಗಳಲ್ಲಿ 27 ರನ್‌ ಬಾರಿಸಿ, ಉತ್ಸಾಹ ತುಂಬಿದ್ದರು. ಈ ವೇಳೆ ಹಾರ್ದಿಕ್‌ ಪಾಂಡ್ಯ ಹೊಡೆದ ಸ್ಟ್ರೈಟ್‌ಲೆಂತ್‌ ಬಾಲ್‌ ಬೌಲರ್‌ ಕೈಗೆ ತಾಕಿ ವಿಕೆಟ್‌ಗೆ ಬಡಿದು ರನೌಟ್‌ಗೆ ತುತ್ತಾದರು.

ಕೊನೆಯಲ್ಲಿ ಹಾರ್ದಿಕ್‌ ಪಾಂಡ್ಯ ಹೋರಾಟದಿಂದ ಭಾರತ 120 ರನ್‌ಗಳ ಗಡಿ ದಾಟಿತು. ಟೀಂ ಇಂಡಿಯಾ ಪರ ಹಾರ್ದಿಕ್‌ ಪಾಂಡ್ಯ 31 ರನ್‌ ಗಳಿಸಿದ್ರೆ, ಅಕ್ಷರ್‌ ಪಟೇಲ್‌ 27 ರನ್‌, ತಿಲಕ್‌ ವರ್ಮಾ 20 ರನ್‌ ಗಳಿಸಿದ್ರು, ಉಳಿದವರು ಅಲ್ಪ ಮೊತ್ತಕ್ಕೆ ಔಟಾದರು.

Share This Article