ಸಿಯೋಲ್: ದಕ್ಷಿಣ ಕೊರಿಯಾದ (South Korea) ಕೆಎಫ್-16 ಯುದ್ಧ ವಿಮಾನವು ತರಬೇತಿಯ ವೇಳೆ ಪೋಚಿಯಾನ್ ಪ್ರದೇಶದ ಮೇಲೆ ಆಕಸ್ಮಿಕವಾಗಿ ಎಂಟು ಬಾಂಬ್‌ಗಳನ್ನು ಬೀಳಿಸಿದ್ದು, 8 ಜನರು ಗಾಯಗೊಂಡಿದ್ದಾರೆ.
ಉತ್ತರ ಕೊರಿಯಾದ ಗಡಿ ಪ್ರದೇಶಕ್ಕೆ ಹತ್ತಿರವಿರುವ ಪೋಚಿಯಾನ್‌ನಲ್ಲಿ ಸಂಭವಿಸಿದೆ. ಈ ಪ್ರದೇಶವು ರಾಜಧಾನಿ ಸಿಯೋಲ್‌ನಿಂದ 40 ಕಿಲೋಮೀಟರ್ ದೂರದಲ್ಲಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಗಾಯಕಿ ಶಿವಶ್ರೀ ಜೊತೆ ಸಪ್ತಪದಿ ತುಳಿದ ಸಂಸದ ತೇಜಸ್ವಿ ಸೂರ್ಯ
Advertisement
Advertisement
ಕೆಎಫ್-16 ಯುದ್ಧ ವಿಮಾನದಿಂದ ಎಂಕೆ-82 ಬಾಂಬ್‌ಗಳು ಆಕಸ್ಮಿಕವಾಗಿ ಪೋಚಿಯಾನ್ ಮೇಲೆ ಬಿದ್ದಿದೆ. ಇದರಿಂದಾಗಿ ಜನವಸತಿಗೆ ಹಾನಿಯಾಗಿದೆ. ಯುದ್ಧ ವಿಮಾನವು ಲೈವ್-ಫೈಯರಿಂಗ್ ತರಬೇತಿ ನಡೆಸುವ ವೇಳೆ ಈ ಅವಘಡ ಸಂಭವಿಸಿದೆ ಎಂದು ದಕ್ಷಿಣ ಕೊರಿಯಾದ ವಾಯುಪಡೆಯು ಹೇಳಿಕೆ ನೀಡಿದೆ. ಇದನ್ನೂ ಓದಿ: ಪಿಯು ವಿದ್ಯಾರ್ಥಿನಿ ಬದಲು ರಾಜ್ಯಶಾಸ್ತ್ರ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಅರೆಸ್ಟ್
Advertisement
ಜನರಿಗಾದ ಹಾನಿಗೆ ಕ್ಷಮೆಯಾಚಿಸಿದ ವಾಯುಪಡೆ, ಸಂತ್ರಸ್ತರಿಗೆ ಪರಿಹಾರ ಮತ್ತು ಇತರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದೆ. ಇದನ್ನೂ ಓದಿ: ಲಂಡನ್‌ನಲ್ಲಿ ಖಲಿಸ್ತಾನಿ ಉಗ್ರರಿಂದ ವಿದೇಶಾಂಗ ಸಚಿವ ಜೈಶಂಕರ್ ಮೇಲೆ ದಾಳಿಗೆ ಯತ್ನ
Advertisement
6 ಮಂದಿ ನಾಗರಿಕರು ಮತ್ತು ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆಯಿಂದ 7 ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.