ಬಹುಭಾಷಾ ನಟಿ ಶ್ರೀದೇವಿ ಕಪೂರ್ (Sridevi Kapoor) ಪುತ್ರಿ ಜಾನ್ವಿ ಕಪೂರ್ (Janhavi Kapoor) ಅಮ್ಮನ ಮಾದರಿಯಲ್ಲೇ ಹೆಜ್ಜೆ ಇಡುತ್ತಿದ್ದಾರೆ. ಶ್ರೀದೇವಿ ರೀತಿಯಲ್ಲೇ ಜಾನ್ವಿ ದಕ್ಷಿಣದ ಸಿನಿಮಾಗಳತ್ತ ಹೆಚ್ಚು ಗಮನ ನೀಡ್ತಿದ್ದಾರೆ. ಹಾಗಾಗಿ ಸದ್ಯ ಜಾನ್ವಿ ಎರಡು ತೆಲುಗು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ.
ಚಿತ್ರೀಕರಣಕ್ಕಾಗಿ ಹಲವು ದಿನಗಳಿಂದ ಹೈದರಾಬಾದ್ ನಲ್ಲೇ ಬೀಡು ಬಿಟ್ಟಿರುವ ಜಾನ್ವಿ, ದಕ್ಷಿಣದ ಸಿನಿಮಾ ರಂಗ ನನ್ನ ತವರು ಮನೆಯಂತೆ ಭಾಸವಾಗುತ್ತಿದೆ. ಪ್ರತಿ ಕ್ಷಣವೂ ಅಮ್ಮ ನೆನಪಾಗುತ್ತಿದ್ದಾರೆ ಎಂದು ಮಾತನಾಡಿದ್ದಾರೆ. ಸ್ಟಾರ್ ನಟರ ಜೊತೆ ನಟಿಸುವುದಕ್ಕೆ ಅವಕಾಶ ಕೊಟ್ಟಿರುವುದಕ್ಕಾಗಿ ಧನ್ಯವಾದ ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಜಾನ್ವಿ ಕಪೂರ್, ಜ್ಯೂನಿಯರ್ ಎನ್‌ಟಿಆರ್ (Jr.ntr) ಒಪ್ಪಿಕೊಂಡಿದ್ದರು. ಆ ಸಿನಿಮಾದ ಶೂಟಿಂಗ್ ಕೂಡ ಇನ್ನೂ ಮುಗಿದಿಲ್ಲ, ಅದಕ್ಕೂ ಮುನ್ನವೇ ಮತ್ತೊಂದು ಬಂಪರ್ ಆಫರ್ ಅನ್ನು ನಟಿ ತಮ್ಮದಾಗಿಸಿಕೊಂಡಿದ್ದಾರೆ. ಜಾನ್ವಿ ಇದೀಗ ಮತ್ತೊಬ್ಬ ತೆಲುಗಿನ ನಟನ ಜೊತೆ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಹೊಸ ಬಗೆಯ ಕಥೆಯಲ್ಲಿ ಜಾನ್ವಿ ಕಮಾಲ್ ಮಾಡಲಿದ್ದಾರೆ. ಇದನ್ನೂ ಓದಿ:ದಾಂಪತ್ಯಕ್ಕೆ ಅಂತ್ಯ ಹಾಡಿದ ನಟಿ, ಡಿವೋರ್ಸ್ ಬಗ್ಗೆ ಬಿಗ್ ಬಾಸ್ ಚೈತ್ರಾ ಅಪ್‌ಡೇಟ್
ಈ ಹೊಸ ಸಿನಿಮಾದಲ್ಲಿ ನಾಗಾರ್ಜುನ ಪುತ್ರ ಅಖಿಲ್ ಅಕ್ಕಿನೇನಿಗೆ (Akhil Akkineni) ನಾಯಕಿಯಾಗಿ ಜಾನ್ವಿ ಕಪೂರ್ ಸೆಲೆಕ್ಟ್ ಆಗಿದ್ದಾರೆ. ಯುವ ನಿರ್ದೇಶಕ ಅನಿಲ್ ಕುಮಾರ್ (Anil Kumar) ನಿರ್ದೇಶನದಲ್ಲಿ ಅಖಿಲ್- ಜಾನ್ವಿ ಆಕ್ಟ್ ಮಾಡಲಿದ್ದಾರೆ. ಅನಿಲ್ ಈ ಹಿಂದೆ ಪ್ರಭಾಸ್ ನಟನೆಯ ‘ಸಾಹೋ’ (Saho) ಚಿತ್ರದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ.
ಅಲ್ಲದೇ, ಕೊರಟಾಲ ಶಿವ ನಿರ್ದೇಶನದ ಸಿನಿಮಾದಲ್ಲಿ ಮೂಡಿ ಬರುತ್ತಿರುವ ‘ದೇವರ’ ಸಿನಿಮಾದಲ್ಲಿ ಜ್ಯೂ.ಎನ್‌ಟಿಆರ್‌ಗೆ ನಾಯಕಿಯಾಗಿ ಜಾನ್ವಿ ಕಪೂರ್ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ನಲ್ಲೂ ಅವರು ಪಾಲ್ಗೊಂಡಿದ್ದಾರೆ.
Web Stories