ನವದೆಹಲಿ: ಈ ಬಾರಿ ಮಾನ್ಸೂನ್‍ನಲ್ಲಿ ಭಾರತದ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಹೇಳಿದೆ. ತನ್ನ ಮೊದಲ ದೀರ್ಘಾವಧಿಯ ಮುನ್ಸೂಚನೆಯಲ್ಲಿ ಪ್ರಕಟಿಸಿದೆ. ಮಾನ್ಸೂನ್ ಮಳೆಯು ದೀರ್ಘಾವಧಿಯ ಸರಾಸರಿಯ 99 ಪ್ರತಿಶತದಷ್ಟು ಇರುತ್ತದೆ ಎಂದು ಐಎಂಡಿ ಹೇಳಿಕೆಯಲ್ಲಿ ತಿಳಿಸಿದೆ.
Advertisement
ಉತ್ತರ ಮತ್ತು ಮಧ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯಾದರೆ, ಈಶಾನ್ಯ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳು ಮತ್ತು ದಕ್ಷಿಣ ಪರ್ಯಾಯ ದ್ವೀಪದ ದಕ್ಷಿಣ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ. ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆ ನೀಡುವುದು ಬೇಡ: ಮಾಜಿ ಸ್ಪೀಕರ್ ರಮೇಶ್ ಕುಮಾರ್
Advertisement
Advertisement
ಕೇರಳದಲ್ಲಿ ಜೂನ್ 1 ರಿಂದ ಮಾನ್ಸೂನ್ ಪ್ರಾರಂಭವಾಗುವುದರೊಂದಿಗೆ ದೇಶದಲ್ಲಿ ಮುಂಗಾರು ಮಳೆ ಪ್ರಾರಂಭವಾಗುತ್ತದೆ. ಇದು ರೈತರಿಗೆ ಅಗತ್ಯವಿರುವ ಸುಮಾರು 70 ಪ್ರತಿಶತದಷ್ಟು ಮಳೆಯನ್ನು ಒದಗಿಸುತ್ತದೆ. ಇದನ್ನೂ ಓದಿ: ಬ್ಯಾರಿಕೇಡ್ ಹತ್ತಿ ಪೊಲೀಸರ ಮೇಲೆ ಡಿಕೆಶಿ ಜಂಪ್