ಹುಬ್ಬಳ್ಳಿ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸಲು ಕೇಂದ್ರದ ಸೂಚನೆಗಳಂತೆ ರೈಲ್ವೆ ಬೋಗಿಗಳನ್ನೇ ಐಸೋಲೇಶನ್ ವಾರ್ಡ್‍ಗಳನ್ನಾಗಿ ಮಾಡಲಾಗುತ್ತಿದೆ. ಇದನ್ನು ನೈಋತ್ಯ ರೈಲ್ವೇ ವಲಯ ಸಹ ಜಾರಿಗೆ ತರುತ್ತಿದ್ದು, ಹುಬ್ಬಳ್ಳಿ ಜಂಕ್ಷನ್‍ನಲ್ಲಿ ಈಗಾಗಲೇ ಈ ಕಾರ್ಯ ಆರಂಭವಾಗಿದೆ.
ಕೊರೊನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ನೈಋತ್ಯ ರೈಲ್ವೇ ವಲಯದಲ್ಲಿನ ರೈಲು ಬೋಗಿಗಳನ್ನು ಪ್ರತ್ಯೇಕ ವಾರ್ಡ್‍ಗಳಾಗಿ ಪರಿವರ್ತಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಪ್ರತ್ಯೇಕ ಸೌಲಭ್ಯಗಳಿಗಾಗಿ ದೇಶದ ಸಾಮಥ್ರ್ಯವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ರೈಲ್ವೆ ಸ್ಲೀಪರ್ ಕ್ಲಾಸ್ ಬೋಗಿಗಳನ್ನು ಕೋವಿಡ್-19 ಐಸೋಲೇಷನ್ ವಾರ್ಡ್‍ಗಳಾಗಿ ಪರಿವರ್ತಿಸಲಾತ್ತಿದೆ.
Advertisement
Advertisement
ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ರೈಲ್ವೇ ಕಾರ್ಮಿಕರು ಐಸೋಲೆಟೆಡ್ ವಾರ್ಡ್ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ. ಬೋಗಿಗಳು ಸ್ವಚ್ಛವಾಗಿದ್ದು, ರೋಗಿಗಳು ಚೇತರಿಸಿಕೊಳ್ಳಲು ಆರೋಗ್ಯಕರ ಪರಿಸರವನ್ನು ಹೊಂದಿವೆ. ಅಗತ್ಯಕ್ಕನುಗುಣವಾಗಿ ಕೆಲವು ಕೋವಿಡ್-19 ರೋಗಿಗಳನ್ನು ಈ ಐಸೋಲೇಶನ್ ಭೋಗಿಗಳಲ್ಲಿರಿಸಿ ಚಿಕಿತ್ಸೆ ನೀಡಲಾಗುವುದು. ಆರಂಭದಲ್ಲಿ 5,000 ಪ್ರಯಾಣಿಕರ ಬೋಗಿಗಳನ್ನು ಐಸೋಲೇಶನ್ ವಾರ್ಡ್‍ಗಳನ್ನಾಗಿ ಮಾರ್ಪಡಿಸಲು ಯೋಜಿಸಲಾಗಿದೆ.
Advertisement
Advertisement
ಮಾರ್ಚ್ 25 ರಂದು ಪ್ರಾರಂಭವಾದ ರಾಷ್ಟ್ರವ್ಯಾಪಿ ಲಾಕ್‍ಡೌನ್ ನಂತರ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಎಲ್ಲ ಪ್ರಯಾಣಿಕ ರೈಲು ಸೇವೆಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ. ಇವುಗಳಲ್ಲಿ ಕೆಲು ರೈಲುಗಳನ್ನು ಐಸೋಲೇಶನ್ ವಾರ್ಡ್‍ಗಳನ್ನಾಗಿ ಪರಿವರ್ತಿಸಲಾಗುತ್ತಿದೆ.
ರೈಲ್ವೆ ಬೋಗಿಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆ ಸಿಗಲಿದೆ. ವೈದ್ಯ ಸಿಬ್ಬಂದಿ, ಸೋಂಕಿತರು, ಶಂಕಿತರು ಸೇರಿದಂತೆ ಆಹಾರ ಪೂರೈಕೆಗೂ ಅವಕಾಶ ಕಲ್ಪಿಸಲಾಗಿದೆ. ದೇಶದಲ್ಲಿ ಕೊರೊನಾ ವೈರಸ್ ಉಲ್ಬಣಗೊಂಡ ನಂತರ ತಮ್ಮನ್ನು ತಾವೇ ಪ್ರತ್ಯೇಕಿಸಿಕೊಳ್ಳುವ, ಮತ್ತೊಬ್ಬರಿಂದ ಅಂತರ ಕಾಯ್ದುಕೊಳ್ಳುವ ಸೌಲಭ್ಯಗಳ ಅವಶ್ಯಕತೆಯಿದೆ. ಈ ಬೇಡಿಕೆ ಈಡೇರಿಸಲು ಭಾರತೀಯ ರೈಲ್ವೆ ಒಂದು ಚತುರ ಪರಿಹಾರವನ್ನು ಕಂಡುಹಿಡಿದಿದೆ.
ವಿದ್ಯುತ್:
ಪ್ರತ್ಯೇಕ ಸೌಲಭ್ಯಗಳಿಗಾಗಿ ದೇಶದ ಸಾಮಥ್ರ್ಯವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ರೈಲ್ವೆ ತನ್ನ ರೈಲು ಬೋಗಿಗಳನ್ನು ಕ್ವಾರಂಟೈನ್ ಹಬ್‍ಗಳಾಗಿ ಪರಿವರ್ತಿಸುವ ಯೋಜನೆಯನ್ನು ರೂಪಿಸುತ್ತಿದೆ. ಆದರೆ ವಿದ್ಯುತ್ ಸಂಪರ್ಕವಿರುವ ಸಮೀಪದಲ್ಲಿ ಬೋಗಿಗಳನ್ನು ನಿಲ್ಲಿಸಿದರೆ ಅನುಕೂಲವಾಗಲಿದೆ.
ವಿನ್ಯಾಸ:
ಕ್ವಾರಂಟೈನ್‍ಗಾಗಿ ರೈಲ್ವೆ ಇಲಾಖೆ ನಾನ್ ಎಸಿ ಕೋಚ್ ಆಯ್ಕೆ ಮಾಡಿಕೊಂಡಿದೆ. ಇದರಲ್ಲಿ 10 ಕ್ಯಾಬಿನ್‍ಗಳಿರುತ್ತವೆ. ಕೇವಲ ಒಂದು ಬರ್ತ್ ಬಿಟ್ಟು ಉಳಿದ ಮೂರು ಬರ್ತ್ ತೆಗೆದು ರೂಮ್ ರೀತಿ ಸಿದ್ಧಗೊಳಿಸಲಾಗಿದೆ. ಇದೇ ರೀತಿ ಸೋಂಕಿತ ವ್ಯಕ್ತಿಯ ಚಿಕಿತ್ಸೆಗೆ ಇರುವ ರೂಮ್ ವ್ವವಸ್ಥೆ ಮಾಡಲಾಗಿದ್ದು, ಪ್ಲಾಸ್ಟಿಕ್ ಕರ್ಟನ್‍ನಿಂದ ಕ್ಯಾಬಿನ್ ಕವರ್ ಮಾಡಲಾಗಿದೆ.
ಶೌಚಾಲಯ:
ಒಂದು ಕ್ಯಾಬಿನ್‍ನಲ್ಲಿ 3 ಭಾರತೀಯ ಶೈಲಿ 1 ವೆಸ್ಟರ್ನ್ ಟಾಯ್ಲೆಟ್‍ಗಳಿರುತ್ತವೆ. ಈ ಪೈಕಿ ಎರಡು ಟಾಯ್ಲೆಟ್‍ಗಳನ್ನು ಸ್ನಾನದ ಕೋಣೆಯಾಗಿ ಪರಿವರ್ತಿಸಲಾಗಿದೆ. ಬಾಥ್ ರೂಮ್‍ನಲ್ಲಿ ಟ್ಯಾಪ್‍ನ ಎತ್ತರವನ್ನು ಹೆಚ್ಚಿಸಲಾಗಿದೆ. ಜೊತೆಗೆ ಹ್ಯಾಂಡ್ ಶವರ್ ಗಳನ್ನ ಹಾಕಲಾಗಿದೆ.
ವೈದ್ಯಕೀಯ ಸಿಬ್ಬಂದಿ:
ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಡಾಕ್ಟರ್, ನರ್ಸ್ ಸೇರಿ ವೈದ್ಯಕೀಯ ಸಿಬ್ಬಂದಿಗೂ ಪ್ರತ್ಯೇಕ ಕ್ಯಾಬಿನ್ ವ್ಯವಸ್ಥೆ ಮಾಡಲಾಗಿದೆ. ರೋಗಿ ಮತ್ತು ವೈದ್ಯರ ಕ್ಯಾಬಿನ್ ಮಧ್ಯೆ ಅಡ್ಡವಾಗಿ ಪ್ಲಾಸ್ಟಿಕ್ ಕರ್ಟನ್ ಹಾಕಲಾಗಿದೆ.
ಆಹಾರ:
ಬೇಸ್ ಅಡಿಗೆಮನೆಗಳಿಲ್ಲದ ನಿಲ್ದಾಣಗಳಿಗೆ ಆಹಾರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಪ್ಯಾಂಟ್ರಿ ಕಾರುಗಳನ್ನು ಮೊಬೈಲ್ ಅಡುಗೆಮನೆಯನ್ನಾಗಿ ಪರಿವರ್ತಿಸಲು ರೈಲ್ವೆ ಯೋಜಿಸಿದೆ.