ಚಿಕ್ಕಮಗಳೂರು: ಭಾರೀ ಗಾಳಿಯೊಂದಿಗೆ ಮಲೆನಾಡಲ್ಲಿ ಧಾರಾಕಾರ ಮಳೆಯಾಗ್ತಿದೆ. ಆದರೆ ಈ ಮಳೆಯಲ್ಲೇ ಚಿಕ್ಕಮಗಳೂರು ಎಸ್‍ಪಿ ಅಣ್ಣಾಮಲೈ ಸೈಕ್ಲಿಂಗ್ ಮಾಡಿದ್ದಾರೆ.
ಮಂಗಳೂರು ಮತ್ತು ಚಿಕ್ಕಮಗಳೂರು ಸೈಕ್ಲಿಂಗ್ ಕ್ಲಬ್‍ನಿಂದ ಆಯೋಜನೆಗೊಂಡು ಶನಿವಾರ ನಡೆದ ಮೂರನೇ ವರ್ಷದ ಮಾನ್ಸೂನ್ ಬ್ರಿವೇ ಸೈಕ್ಲಿಂಗ್‍ನಲ್ಲಿ ಚಿಕ್ಕಮಗಳೂರು ಎಸ್‍ಪಿ ಅಣ್ಣಾಮಲೈ ಎರಡನೇ ವರ್ಷವೂ ಭಾಗವಹಿಸಿದರು.
Advertisement
Advertisement
ಬೆಳಗ್ಗೆ ಆರು ಗಂಟೆಗೆ ನಗರದ ಟೌನ್ ಕ್ಯಾಂಟೀನ್‍ನಿಂದ ಆರಂಭವಾದ ಸೈಕಲ್ ರ‍್ಯಾಲಿಯಲ್ಲಿ 20ಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ಬಾಳೆಹೊನ್ನೂರು, ಎನ್.ಆರ್.ಪುರ, ಕೊಪ್ಪ, ತೀರ್ಥಹಳ್ಳಿ, ಮಂಡಗದ್ದೆ ಮಾರ್ಗವಾಗಿ ಸಕ್ರೆಬೈಲಿನ ಮೂಲಕ ಒಟ್ಟು 300 ಕಿ.ಮೀ. ಕ್ರಮಿಸಿ ಅದೇ ಮಾರ್ಗವಾಗಿ ಚಿಕ್ಕಮಗಳೂರಿಗೆ ಹಿಂದಿರುಗಿದ್ದಾರೆ. ಇದನ್ನೂ ಓದಿ: ವೃದ್ಧಾಶ್ರಮದ ವಯೋವೃದ್ಧರ ಆಸೆಯನ್ನು ಎಸ್‍ಪಿ ಅಣ್ಣಾಮಲೈ ನೆರವೇರಿಸಿದ್ರು: ವಿಡಿಯೋ ನೋಡಿ
Advertisement
ಸುರಿಯೋ ಧಾರಾಕಾರ ಮಳೆ ಭಾರೀ ಗಾಳಿಯ ನಡುವೆಯೇ ಎಸ್‍ಪಿ, ಸೈಕ್ಲಿಂಗ್ ಮಾಡಿರೋದನ್ನು ಕಂಡು ಸ್ಥಳಿಯರು ಸಂತಸ ವ್ಯಕ್ತಪಡಿಸಿದ್ದಾರೆ. ಎಸ್‍ಪಿಯವರು ಮಾರ್ಗ ಮಧ್ಯೆ ಊಟ, ತಿಂಡಿ ಹಾಗೂ ಕಾಫಿಗೆ ಸೈಕಲ್ ನಿಲ್ಲಿಸಿದಾಗ ಜನರು ಅವರೊಂದಿಗೆ ಸೆಲ್ಫಿ ಕ್ಲಿಕಿಸಿಕೊಂಡು ಖುಷಿಪಟ್ಟರು.