ಲಕ್ನೋ: ಉತ್ತರ ಪ್ರದೇಶದ ಲಲಿತಪುರದಲ್ಲಿ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಮತ್ತು ಬಹುಜನ ಸಮಾಜ ಪಕ್ಷದ ಜಿಲ್ಲಾ ಅಧ್ಯಕ್ಷರು ಸೇರಿದಂತೆ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Advertisement
ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಪಾಠಕ್, ನಗರದ ವಿವಿಧ ಭಾಗಗಳಲ್ಲಿ ಐದು ವರ್ಷಗಳ ಕಾಲ ತನ್ನ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ಬಾಲಕಿ ದೂರು ನೀಡಿದ್ದಳು. ಈ ದೂರಿನ ಮೇರೆಗೆ ಏಳು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಬಾಲಕಿ ಮೂವರು ಅಪರಿಚಿತ ವ್ಯಕ್ತಿಗಳೊಂದಿಗೆ, 25 ಜನರ ಹೆಸರುಗಳನ್ನು ದೂರಿನಲ್ಲಿ ಉಲ್ಲೇಖಿಸಿದ್ದಳು ಎಂದು ತಿಳಿಸಿದರು. ಇದನ್ನೂ ಓದಿ: ದೌರ್ಜನ್ಯ ಆರೋಪ – ದಲಿತ ಮಹಿಳೆ ಮನೆಗೆ ಭೇಟಿ ನೀಡಿದ ಸುಧಾಕರ್
Advertisement
ಸದರ್ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಅ.12 ರಂದು 25 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅದರಲ್ಲಿ ಸಂತ್ರಸ್ತೆಯ ತಂದೆ ಮತ್ತು ಆಕೆಯ ಚಿಕ್ಕಪ್ಪ ಸೇರಿದಂತೆ ಮೂವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಮಿರ್ಜಾಪುರ ಜಿಲ್ಲೆಯ ಹೋಟೆಲ್ ಮೇಲೆ ಶುಕ್ರವಾರ ದಾಳಿ ನಡೆಸಿದ್ದು, ತಿಲಕ್ ಯಾದವ್, ದೀಪಕ್ ಅಹಿರ್ವಾರ್, ಎಸ್‍ಪಿ ಮತ್ತು ಲಲಿತಪುರದ ಬಿಎಸ್‍ಪಿ ಜಿಲ್ಲಾ ಅಧ್ಯಕ್ಷರು ಮತ್ತು ಮಹೇಂದ್ರ ದುಬೆ ಎಂಬ ಎಂಜಿನಿಯರ್ ನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
Advertisement
Advertisement
ಈ ಮೂವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಅದು ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಜನರನ್ನು ಬಂಧಿಸಲಾಗಿತ್ತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರ ಕರ್ನಾಟಕ ಭಾಗದ ಜನರು ಮುಗ್ದರು : ಡಾ.ಚಂದ್ರಶೇಖರ್ ಕಂಬಾರ