CrimeLatestMain PostNational

ಬಾಲಕಿ ಅತ್ಯಾಚಾರ ಪ್ರಕರಣ – ಎಸ್‍ಪಿ, ಬಿಎಸ್‍ಪಿ ಜಿಲ್ಲಾ ಅಧ್ಯಕ್ಷ ಸೇರಿ 7 ಮಂದಿ ಅರೆಸ್ಟ್

ಲಕ್ನೋ: ಉತ್ತರ ಪ್ರದೇಶದ ಲಲಿತಪುರದಲ್ಲಿ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಮತ್ತು ಬಹುಜನ ಸಮಾಜ ಪಕ್ಷದ ಜಿಲ್ಲಾ ಅಧ್ಯಕ್ಷರು ಸೇರಿದಂತೆ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಪಾಠಕ್, ನಗರದ ವಿವಿಧ ಭಾಗಗಳಲ್ಲಿ ಐದು ವರ್ಷಗಳ ಕಾಲ ತನ್ನ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ಬಾಲಕಿ ದೂರು ನೀಡಿದ್ದಳು. ಈ ದೂರಿನ ಮೇರೆಗೆ ಏಳು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಬಾಲಕಿ ಮೂವರು ಅಪರಿಚಿತ ವ್ಯಕ್ತಿಗಳೊಂದಿಗೆ, 25 ಜನರ ಹೆಸರುಗಳನ್ನು ದೂರಿನಲ್ಲಿ ಉಲ್ಲೇಖಿಸಿದ್ದಳು ಎಂದು ತಿಳಿಸಿದರು. ಇದನ್ನೂ ಓದಿ: ದೌರ್ಜನ್ಯ ಆರೋಪ – ದಲಿತ ಮಹಿಳೆ ಮನೆಗೆ ಭೇಟಿ ನೀಡಿದ ಸುಧಾಕರ್

ಸದರ್ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಅ.12 ರಂದು 25 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅದರಲ್ಲಿ ಸಂತ್ರಸ್ತೆಯ ತಂದೆ ಮತ್ತು ಆಕೆಯ ಚಿಕ್ಕಪ್ಪ ಸೇರಿದಂತೆ ಮೂವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಮಿರ್ಜಾಪುರ ಜಿಲ್ಲೆಯ ಹೋಟೆಲ್ ಮೇಲೆ ಶುಕ್ರವಾರ ದಾಳಿ ನಡೆಸಿದ್ದು, ತಿಲಕ್ ಯಾದವ್, ದೀಪಕ್ ಅಹಿರ್ವಾರ್, ಎಸ್‍ಪಿ ಮತ್ತು ಲಲಿತಪುರದ ಬಿಎಸ್‍ಪಿ ಜಿಲ್ಲಾ ಅಧ್ಯಕ್ಷರು ಮತ್ತು ಮಹೇಂದ್ರ ದುಬೆ ಎಂಬ ಎಂಜಿನಿಯರ್ ನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಮೂವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಅದು ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಜನರನ್ನು ಬಂಧಿಸಲಾಗಿತ್ತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರ ಕರ್ನಾಟಕ ಭಾಗದ ಜನರು ಮುಗ್ದರು : ಡಾ.ಚಂದ್ರಶೇಖರ್ ಕಂಬಾರ

Leave a Reply

Your email address will not be published.

Back to top button