CrimeLatestMain PostNational

ಉತ್ತರ ಪ್ರದೇಶದಲ್ಲಿ ಎಸ್‍ಪಿ ನಾಯಕನ ಬರ್ಬರ ಹತ್ಯೆ

ಲಕ್ನೋ: ಉತ್ತರ ಪ್ರದೇಶದ ಪಿಜಿಐ ಪೊಲೀಸ್ ಠಾಣಾ ವ್ಯಾಪ್ತಿಯ ರೇವ್ತಾಪುರ್ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ (ಎಸ್‍ಪಿ) ಮುಖಂಡರೊಬ್ಬರನ್ನು ಬರ್ಬರವಾಗಿ ಥಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಂಭೀರ ಗಾಯಗೊಂಡಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಸಂತ್ರಸ್ತ ರೋಹಿತ್ (26) ಮೇಲೆ ಸಚಿನ್ ಮತ್ತು ಆತನ ಸಹಚರರು ಹಲ್ಲೆ ನಡೆಸಿದ್ದಾರೆ. ಕಬ್ಬಿಣದ ಕೋಲುಗಳು, ಹರಿತವಾದ ಆಯುಧಗಳು ಮತ್ತು ಲಾಠಿಗಳಿಂದ ತೀವ್ರವಾಗಿ ಥಳಿಸಿದ್ದಾರೆ. ಈ ವೇಳೆ ಅವರನ್ನು ತಕ್ಷಣ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಹೆಸರಿನಲ್ಲಿ ಅಶ್ಲೀಲ ವೀಡಿಯೋ ಪೋಸ್ಟ್: ದೂರು ದಾಖಲು

ಮೃತರ ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ಸಚಿನ್ ಮತ್ತು ಐವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರೋಹಿತ್ ಎಸ್‌ಪಿ ಯುವ ಘಟಕದ ಮಾಜಿ ಜಿಲ್ಲಾ ಕಾರ್ಯದರ್ಶಿಯಾಗಿದ್ದರು. ಸಚಿನ್, ಶಿವಕುಮಾರ್ ಮತ್ತು ಇತರರು ತನ್ನ ಮಗನ ಮೇಲೆ ಹಲ್ಲೆ ನಡೆಸಿ ಅಮಾನುಷವಾಗಿ ಥಳಿಸಿದ್ದಾರೆ ಎಂದು ಮೃತರ ತಾಯಿ ಊರ್ಮಿಳಾ ದೇವಿ ಪೊಲೀಸರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ ತಂದೆ, ಅಣ್ಣನಿಂದ ಅತ್ಯಾಚಾರ – ಅಜ್ಜ, ಚಿಕ್ಕಪ್ಪನಿಂದ ಕಿರುಕುಳ

ಸಚಿನ್‍ಗೆ ರೋಹಿತ್ ಜೊತೆ ಹಳೆ ವೈಷಮ್ಯವಿದ್ದು, ಹಲವು ಬಾರಿ ಬೆದರಿಕೆ ಹಾಕಿದ್ದ ಎಂದು ಅವರ ತಾಯಿ ಆರೋಪಿಸಿದ್ದಾರೆ. ರೋಹಿತ್ ಆರು ತಿಂಗಳ ಹಿಂದೆ ಮದುವೆಯಾಗಿದ್ದರು.

ಆರೋಪಿಗಳನ್ನು ಪತ್ತೆ ಹಚ್ಚಲು ಮತ್ತು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಕಂಟೋನ್ಮೆಂಟ್ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಅರ್ಚನಾ ಸಿಂಗ್ ತಿಳಿಸಿದ್ದಾರೆ.

Leave a Reply

Your email address will not be published.

Back to top button