ಉಡುಪಿ: ಇನ್ನು ಮುಂದೆ ಜಿಲ್ಲೆಯಲ್ಲಿ ಮಟ್ಕಾ ದಂಧೆ ನಡೆಸೋದು ಕಂಡುಬಂದರೆ, ಅಂತವರ ವಿರುದ್ಧ ರೌಡಿ ಶೀಟರ್ ತೆರೆಯಬೇಕಾಗುತ್ತದೆ ಎಂದು ಜಿಲ್ಲಾ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ್ ನಿಂಬರಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಾದ್ಯಂತ ಮಟ್ಕಾ ದಂಧೆ ಹೆಚ್ಚುತ್ತಿದ್ದು, ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಭಾನುವಾರವೂ ಸಹ 20 ಮಂದಿ ಮಟ್ಕಾ ದಂಧೆಯ ಆರೋಪಿಗಳನ್ನು ಬಂಧಿಸಿದ್ದಾರೆ. ಮಟ್ಕಾ ದಂಧೆ ದಿನೇ ದಿನೇ ಹೆಚ್ಚುತ್ತಿರುವುದರಿಂದ ಸೋಮವಾರ ಜಿಲ್ಲಾ ಪೊಲೀಸ್ ಕಚೇರಿಯ ಮುಂಭಾಗದಲ್ಲಿ ಮಟ್ಕಾ ಆರೋಪಿಗಳ ಪರೇಡ್ ನಡೆಸಲಾಯಿತು.
Advertisement
Advertisement
ಜಿಲ್ಲಾವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿಯವರು, ಮಟ್ಕಾ ದಂಧೆಯಲ್ಲಿ ತೊಡಗಿರುವ ಹಳೇ ಆರೋಪಿಗಳನ್ನು ಕರೆಸಿ, ಇನ್ನುಮುಂದೆ ಜಿಲ್ಲೆಯಲ್ಲಿ ಮಟ್ಕಾ ದಂಧೆ ನಡೆಸೋದು ಕಂಡುಬಂದರೆ, ಅಂತವರ ವಿರುದ್ಧ ರೌಡಿ ಶೀಟರ್ ತೆರೆಯಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಮಟ್ಕಾ ದಂಧೆಯ ಕಿಂಗ್‍ಪಿನ್‍ಗಳನ್ನು ಆದಷ್ಟು ಬೇಗ ಮಟ್ಟಹಾಕುವುದಾಗಿ ಈ ವೇಳೆ ತಿಳಿಸಿದರು.
Advertisement
ಪ್ರತೀ ವಾರ ವರಿಷ್ಠಾಧಿಕಾರಿಗಳು ನಡೆಸುವ ಫೋನ್ ಇನ್ ಕಾರ್ಯಕ್ರಮದಲ್ಲಿ ಮಟ್ಕಾ ದಂಧೆಯ ಬಗ್ಗೆ ನಾಗರೀಕರಿಂದ ವ್ಯಾಪಕ ದೂರು ಬಂದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews