ಬೆಂಗಳೂರು: ಒಂದು ಸುಂದರವಾದ ಸಂಸಾರವನ್ನು ದೇವರು ಹಾಳುಮಾಡಿ ಬಿಟ್ಟ ಎಂದು ಹಿರಿಯ ನಟಿ ಗಿರಿಜಾ ಲೋಕೇಶ್ (Girija Lokesh) ಕಣ್ಣೀರು ಹಾಕಿದ್ದಾರೆ.
ಸ್ಪಂದನಾ (Spandana) ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಂದರವಾದ ಸಂಸಾರವನ್ನ ದೇವರು ಹಾಳು ಮಾಡುಬಿಟ್ಟ. ಅವಳನ್ನ ನೋಡ್ತಿದ್ರೆ ಬದುಕೇ ಇದ್ದಾಳೆ ಅನಿಸುತ್ತೆ. ಸ್ಪಂದನಾ ಮುಖದಲ್ಲಿ ಕಳೆ ಹಾಗೇ ಇದೆ. ಈ ರೀತಿಯ ಸಾವು ಯಾರಿಗೂ ಬರಬಾರದು ಎಂದು ಭಾವುಕರಾದರು.
Advertisement
Advertisement
ಬ್ಯಾಂಕಾಕ್ಗೆ (Bankok) ತೆರಳಿದ್ದಾಗ ಸ್ಪಂದನಾ ಅವರಿಗೆ ಹೃದಯಾಘಾತವಾಗಿದೆ. ಮಂಗಳವಾರ ರಾತ್ರಿ ಬ್ಯಾಂಕಾಕ್ನಿಂದ ಕಾರ್ಗೋ ವಿಮಾನದಲ್ಲಿ ತಂದ ಮೃತದೇಹವನ್ನ ಸುಮಾರು 30 ನಿಮಿಷಗಳ ಕಸ್ಟಮ್ಸ್ ಕ್ಲಿಯರೆನ್ಸ್ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಸದ್ಯ ಮಲ್ಲೇಶ್ವರಂನಲ್ಲಿರುವ ಅವರ ನಿವಾಸದ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಹಾಗೂ ಚಿತ್ರರಂಗದ ಗಣ್ಯರು ಅಂತಿಮ ದರ್ಶನ ಪಡೆದು, ವಿಜಯ ರಾಘವೇಂದ್ರ (Vijay Raghavendra) ಅವರಿಗೆ ಸಾಂತ್ವನ ಹೇಳುತ್ತಿದ್ದಾರೆ. ಇದನ್ನೂ ಓದಿ: ತಾಯಿಯನ್ನು ಕರೆತಂದು ಪತ್ನಿಯ ಪಾರ್ಥಿವ ಶರೀರ ತೋರಿಸಿದ ವಿಜಯ ರಾಘವೇಂದ್ರ
Advertisement
Advertisement
ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಹರಿಶ್ಚಂದ್ರ ಘಾಟ್ ನಲ್ಲಿ ಮಧ್ಯಾಹ್ನ 2 ಗಂಟೆಗೆ ಬರ್ನಿಂಗ್ಗೆ ಸ್ಲಾಟ್ ಬುಕ್ಕಿಂಗ್ ಮಾಡಲಾಗಿದೆ. ಈಡಿಗ ಸಮುದಾಯದ ಸಂಪ್ರದಾಯದಂತೆ ಪೂಜೆ ಪುನಸ್ಕಾರ ನಡೆಸಿ ಬಳಿಕ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಅಂತ್ಯಕ್ರಿಯೆಗೆ ಪೂಜೆ ಪುನಸ್ಕಾರ ಹಿನ್ನೆಲೆ ಬಿಬಿಎಂಪಿಯಿಂದ ಕೂಡ ಸ್ವಚ್ಛತಾ ಕಾರ್ಯ ಮಾಡಲಾಗಿದೆ.
Web Stories